ಇದು ರಷ್ಯಾಕ್ಕೆ ಮಾಡಿದ ದೇಶದ್ರೋಹ: ವ್ಯಾಗ್ನರ್ ಗ್ರೂಪ್ ವಿರುದ್ಧ ವ್ಲಾಡಿಮಿರ್ ಪುಟಿನ್ ವಾಗ್ದಾಳಿ

ಮಿಲಿಟರಿ ದಂಗೆಯನ್ನು ಸಂಘಟಿಸಿದವರು, ತಮ್ಮ ಒಡನಾಡಿಗಳ ವಿರುದ್ಧ ಶಸ್ತ್ರಾಸ್ತ್ರಗಳನ್ನು ತೆಗೆದುಕೊಂಡವರು, ರಷ್ಯಾಕ್ಕೆ ದ್ರೋಹ ಬಗೆದವರು ಅದಕ್ಕೆ ಉತ್ತರಿಸಬೇಕು. ಇದು ರಷ್ಯಾಕ್ಕೆ, ನಮ್ಮ ಜನರಿಗೆ ನೀಡಿತ ಹೊಡೆತ ಎಂದ ಪುಟಿನ್.

ಇದು ರಷ್ಯಾಕ್ಕೆ ಮಾಡಿದ ದೇಶದ್ರೋಹ: ವ್ಯಾಗ್ನರ್ ಗ್ರೂಪ್ ವಿರುದ್ಧ ವ್ಲಾಡಿಮಿರ್ ಪುಟಿನ್ ವಾಗ್ದಾಳಿ
ವ್ಲಾಡಿಮಿರ್ ಪುಟಿನ್
Follow us
ರಶ್ಮಿ ಕಲ್ಲಕಟ್ಟ
|

Updated on: Jun 24, 2023 | 2:42 PM

ವ್ಯಾಗ್ನರ್ ಗ್ರೂಪ್ (Wagner Group) ಸೈನಿಕರು ಮತ್ತು ರಷ್ಯಾ (Russia) ಮಿಲಿಟರಿಯ ವಿರುದ್ಧ ಶಸ್ತ್ರಾಸ್ತ್ರಗಳನ್ನು ಹಿಡಿದವರನ್ನು ‘ದೇಶದ್ರೋಹಿಗಳು’ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್  (Russia president Vladimir Putin)ಬ್ರಾಂಡ್ ಮಾಡಿದ್ದಾರೆ. ವ್ಯಾಗ್ನರ್ ಸೇನೆ ಬಂಡಾಯ ‘ಬೆನ್ನಿಗೆ ಇರಿತ’ ಎಂದು ಹೇಳಿದ ಪುಟಿನ್, ದೇಶದ್ರೋಹ ಮಾಡುವವರು ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ನಾವು ಎದುರಿಸುತ್ತಿರುವುದು ನಿಖರವಾಗಿ ವಿಶ್ವಾಸದ್ರೋಹ. ಅತಿಯಾದ ಮಹತ್ವಾಕಾಂಕ್ಷೆಗಳು ಮತ್ತು ವೈಯಕ್ತಿಕ ಹಿತಾಸಕ್ತಿಗಳು, ದೇಶದ್ರೋಹಕ್ಕೆ ಕಾರಣವಾಗುತ್ತದೆ. ವ್ಯಾಗ್ನರ್ ಹೋರಾಟಗಾರರು ಮತ್ತು ಕಮಾಂಡರ್‌ಗಳು ನಮ್ಮ ಇತರ ಘಟಕಗಳು ಮತ್ತು ವಿಭಾಗಗಳೊಂದಿಗೆ ಹೋರಾಡಿ ಸಾಯುತ್ತಾರೆ ಎಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಪುಟಿನ್ ಹೇಳಿದ್ದಾರೆ.

ಮಿಲಿಟರಿ ದಂಗೆಯನ್ನು ಸಂಘಟಿಸಿದವರು, ತಮ್ಮ ಒಡನಾಡಿಗಳ ವಿರುದ್ಧ ಶಸ್ತ್ರಾಸ್ತ್ರಗಳನ್ನು ತೆಗೆದುಕೊಂಡವರು, ರಷ್ಯಾಕ್ಕೆ ದ್ರೋಹ ಬಗೆದವರು ಅದಕ್ಕೆ ಉತ್ತರಿಸಬೇಕು. ಇದು ರಷ್ಯಾಕ್ಕೆ, ನಮ್ಮ ಜನರಿಗೆ ನೀಡಿತ ಹೊಡೆತವಾಗಿದೆ. ಅಂತಹ ಬೆದರಿಕೆಯಿಂದ ಫಾದರ್​​​ಲ್ಯಾಂಡ್​​ನ್ನು ರಕ್ಷಿಸಲು ನಮ್ಮ ಕ್ರಮಗಳು ಕಠಿಣವಾಗಿರುತ್ತದೆ ಎಂದು ಪುಟಿನ್ ಹೇಳಿದ್ದಾರೆ.

ರಷ್ಯಾದಲ್ಲಿ ಬಂಡಾಯ ಬಿಸಿ

ರಷ್ಯಾದಲ್ಲಿ ಈಗ  ವ್ಯಾಗ್ನರ್  ಗುಂಪು  ರಕ್ಷಣಾ ಸಚಿವಾಲಯದ  ವಿರುದ್ಧವೇ  ತಿರುಗಿ ಬಿದ್ದಿದ್ದಾರೆ, ವ್ಯಾಗ್ನರ್ ಗುಂಪಿನ (ಅರೆಸೇನಾ ಮಾದರಿಯಲ್ಲಿ ಸೇನೆಯ ಪರವಾಗಿ ಕಾರ್ಯನಿರ್ವಹಿಸುವ ಖಾಸಗಿ ಮಿಲಿಟರಿ ಕಂಪನಿ) ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ರಷ್ಯಾದ ರಕ್ಷಣಾ ನಾಯಕತ್ವದ ಸಾಮರ್ಥ್ಯವನ್ನು ಬಹಿರಂಗವಾಗಿ ಪ್ರಶ್ನಿಸಿರುವ ಮತ್ತು ಟೀಕಿಸಿದ್ದಾರೆ. ರಷ್ಯಾದ ರಕ್ಷಣಾ ಸಚಿವರ ಆದೇಶದ ಮೇರೆಗೆ ತಮ್ಮ ಸೈನಿಕರ ಬೆಂಗಾವಲು ವಾಹನದ ಮೇಲೆ ಯುದ್ಧವಿಮಾನಗಳಿಂದ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದ ಅವರು   ದೇಶದಲ್ಲಿ ಸೇನಾ ನಾಯಕತ್ವವನ್ನು ಪತನಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ.

ಇತ್ತ ರಷ್ಯಾದ ರಕ್ಷಣಾ ಸಚಿವಾಲಯವು ಪ್ರಿಗೋಜಿನ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ. ರಕ್ಷಣಾ ಸಚಿವಾಲಯವು ವ್ಯಾಗ್ನರ್ ಗುಂಪಿನ ಮುಖ್ಯಸ್ಥನ ಮೇಲೆ ಸಶಸ್ತ್ರ ದಂಗೆಯ ಆರೋಪ ಹೊರಿಸಿದೆ. ಇಷ್ಟೇ ಅಲ್ಲದೆ, ಪ್ರಿಗೋಜಿನ್ ಆದೇಶಗಳನ್ನು ಪಾಲಿಸದಂತೆ ವ್ಯಾಗ್ನರ್ ಗುಂಪಿನ ಪಡೆಗಳಿಗೆ ಮನವಿ ಮಾಡಿದೆ.

ಈ ಮಧ್ಯೆ, ರಷ್ಯಾದ ಸೇನಾ ಪ್ರಧಾನ ಕಚೇರಿಯ ಭದ್ರತೆಯನ್ನು ಹೆಚ್ಚಿಸಲಾಗಿದೆ. ಡಾನ್‌ನಲ್ಲಿರುವ ರಷ್ಯಾದ ಮಿಲಿಟರಿ ಪ್ರಧಾನ ಕಛೇರಿ ರೊಸ್ಟೊವ್‌ನ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪ್ರಧಾನ ಕಚೇರಿಯ ಸುತ್ತಲೂ ಶಸ್ತ್ರಸಜ್ಜಿತ ವಾಹನಗಳು ಮತ್ತು ಶಸ್ತ್ರಸಜ್ಜಿತ ಸೈನಿಕರನ್ನು ನಿಯೋಜಿಸಲಾಗಿದೆ.

ಪ್ರಿಗೊಜಿನ್ ಬಂಡಾಯವೆದ್ದಿದ್ದೇಕೆ?

ವ್ಯಾಗ್ನರ್ ಗುಂಪು ಮುಂಚೂಣಿಯಲ್ಲಿ ಹೋರಾಡುತ್ತಿದೆ. ಈ ಹಿಂದೆಯೂ ಸಹ, ತಮ್ಮ ಸೈನಿಕರಿಗೆ ಸಾಕಷ್ಟು ಶಸ್ತ್ರಾಸ್ತ್ರಗಳು ಮತ್ತು ಸಂಪನ್ಮೂಲಗಳನ್ನು ಒದಗಿಸಿಲ್ಲ ಎಂದು ರಷ್ಯಾದ ರಕ್ಷಣಾ ಸಚಿವಾಲಯವನ್ನು ಪ್ರಿಗೊಜಿನ್ ಹಲವಾರು ಬಾರಿ ಆರೋಪಿಸಿದ್ದರು. ರಷ್ಯಾದ ರಕ್ಷಣಾ ಸಚಿವ ಸೆರ್ಗೆಯ್ ಶೋಯಿಗು ಅವರು ರಷ್ಯಾದ ಮಿಲಿಟರಿ ಜನರಲ್‌ಗಳೊಂದಿಗೆ ವ್ಯಾಗ್ನರ್ ಗುಂಪನ್ನು ನಾಶಮಾಡಲು ಬಯಸುತ್ತಾರೆ ಎಂದು ಪ್ರಿಗೊಜಿನ್ ಹೇಳಿದ್ದಾರೆ. ನಾವು ಮುಂದೆ ಸಾಗುತ್ತಿದ್ದೇವೆ ಮತ್ತು ಕೊನೆಯವರೆಗೂ ಹೋರಾಡುತ್ತೇವೆ. ನಮ್ಮ ಹಾದಿಗೆ ಅಡ್ಡಬರುವ ಯಾರನ್ನಾದರೂ ನಾಶಪಡಿಸುತ್ತೇವೆ ಎಂದು ಪ್ರಿಗೊಜಿನ್ ಹೇಳಿರುವುದು ರಷ್ಯಾದ ಆಂತರಿಕ ಬಂಡಾಯದ ತೀವ್ರತೆಯನ್ನು ಬಹಿರಂಗಪಡಿಸಿದೆ. ಪ್ರಿಗೊಜಿನ್ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಪ್ತರೂ ಆಗಿದ್ದರು.

ಇದನ್ನೂ ಓದಿ: Russia: ಉಕ್ರೇನ್ ವಿರುದ್ಧ ಸಮರ ಸಾರಿರುವ ರಷ್ಯಾಕ್ಕೀಗ ದಂಗೆಯ ಬಿಸಿ; ಸೇನೆ ವಿರುದ್ಧವೇ ಶುರುವಾಯ್ತು ಬಂಡಾಯ

ಈ ನಡೆಯು ರಾಜಕೀಯವಾಗಿ ಪ್ರಿಗೋಜಿನ್‌ನ ಅಂತ್ಯಕ್ಕೆ ಕಾರಣವಾಗಬಹುದು ಎಂದು ರಷ್ಯಾ ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಮತ್ತೊಂದೆಡೆ, ಇದು ರಷ್ಯಾದಲ್ಲಿ ಅಂತರ್ಯುದ್ಧಕ್ಕೆ ಕಾರಣವಾಗಬಹುದು ಎಂದು ಕೆಲವರು ಭಾವಿಸಿದ್ದಾರೆ. ಏಕೆಂದರೆ ಪ್ರಿಗೋಜಿನ್ ಅವರ ಬೆಂಬಲಿಗರು ರಷ್ಯಾದಲ್ಲಿ ಗಣನೀಯ ಸಂಖ್ಯೆಯಲ್ಲಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ವ್ಲಾಡಿಮಿರ್ ಪುಟಿನ್ ಅವರು ಹೆಚ್ಚು ತೊಂದರೆಗಳನ್ನು ಎದುರಿಸುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ