ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಆರೋಗ್ಯ ಸ್ಥಿತಿ ಗಂಭೀರ

ಉತ್ತರ ಕೊರಿಯಾ: ಅನಾರೋಗ್ಯ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಸ್ಥಿತಿ ಗಂಭೀರವಾಗಿದೆ. ಈ ಬಗ್ಗೆ ಅಮೆರಿಕದ ಗುಪ್ತಚರ ಇಲಾಖೆ ಮಾಹಿತಿ ಸಂಗ್ರಹ ಮಾಡುತ್ತಿದೆ. ಏ.15 ರಂದು ಕಿಮ್‌ ಜಾಂಗ್‌ ಉನ್‌ ತನ್ನ ತಾತ ಅಂದ್ರೆ ಉತ್ತರ ಕೊರಿಯಾದ ಸಂಸ್ಥಾಪಕ ಕಿಮ್‌ ಸುಂಗ್​ನ ಹುಟ್ಟುಹಬ್ಬ ಆಚರಣೆಯಿತ್ತು. ಉತ್ತರ ಕೊರಿಯಾದ ಮಟ್ಟಿಗೆ ಅದು ಮಹತ್ವದ ಆಚರಣೆಯಾಗಿತ್ತು. ಆದ್ರೆ ಕಿಮ್‌ ಜಾಂಗ್‌ ಉನ್‌ ಸಮಾರಂಭದಲ್ಲಿ ಭಾಗಿಯಾಗಿರಲಿಲ್ಲ. ಇದು ಆರೋಗ್ಯ ಪರಿಸ್ಥಿತಿ ಸರಿ ಇದೆಯಾ ಇಲ್ಲವಾ […]

ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಆರೋಗ್ಯ ಸ್ಥಿತಿ ಗಂಭೀರ
ಕಿಮ್​ ಜಾಂಗ್​ ಉನ್​
ಸಾಧು ಶ್ರೀನಾಥ್​

Updated on: Apr 21, 2020 | 12:24 PM

ಉತ್ತರ ಕೊರಿಯಾ: ಅನಾರೋಗ್ಯ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಸ್ಥಿತಿ ಗಂಭೀರವಾಗಿದೆ. ಈ ಬಗ್ಗೆ ಅಮೆರಿಕದ ಗುಪ್ತಚರ ಇಲಾಖೆ ಮಾಹಿತಿ ಸಂಗ್ರಹ ಮಾಡುತ್ತಿದೆ.

ಏ.15 ರಂದು ಕಿಮ್‌ ಜಾಂಗ್‌ ಉನ್‌ ತನ್ನ ತಾತ ಅಂದ್ರೆ ಉತ್ತರ ಕೊರಿಯಾದ ಸಂಸ್ಥಾಪಕ ಕಿಮ್‌ ಸುಂಗ್​ನ ಹುಟ್ಟುಹಬ್ಬ ಆಚರಣೆಯಿತ್ತು. ಉತ್ತರ ಕೊರಿಯಾದ ಮಟ್ಟಿಗೆ ಅದು ಮಹತ್ವದ ಆಚರಣೆಯಾಗಿತ್ತು. ಆದ್ರೆ ಕಿಮ್‌ ಜಾಂಗ್‌ ಉನ್‌ ಸಮಾರಂಭದಲ್ಲಿ ಭಾಗಿಯಾಗಿರಲಿಲ್ಲ. ಇದು ಆರೋಗ್ಯ ಪರಿಸ್ಥಿತಿ ಸರಿ ಇದೆಯಾ ಇಲ್ಲವಾ ಎಂಬ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಈ ಕುರಿತು ಮಾಹಿತಿ ನೀಡಲು ಅಥವಾ ಇದರ ಬಗ್ಗೆ ಪ್ರತಿಕ್ರಿಯೆ ನೀಡುವುದಕ್ಕೆ ಅಲ್ಲಿನ ರಾಷ್ಟ್ರೀಯ ಭದ್ರತಾ ಕೌನ್ಸಿಲ್​ನ ಅಧಿಕಾರಿಗಳು ನಿರಾಕರಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us