AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಅಧ್ಯಕ್ಷರ ಮೇಲೆ ಭೀಕರ ದಾಳಿಗೆ ಸ್ಕೆಚ್: ‘ಪ್ರಣಾಳಿಕೆ’ ಮೂಲಕ ಹೊರಬಿತ್ತು ಭಯಾನಕ ಸಂಚು

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ಕ್ಯಾಲಿಫೋರ್ನಿಯಾದ ಕೋಲ್ ಥಾಮಸ್ ಅಲೆನ್ ನಡೆಸಿದ ಭೀಕರ ಸಂಚು ಬಯಲಾಗಿದೆ. ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ಗಣ್ಯರನ್ನು ಗುರಿಯಾಗಿಸಲು ಆತ "ಪ್ರಣಾಳಿಕೆ" ಸಿದ್ಧಪಡಿಸಿದ್ದ. ಕುಟುಂಬಕ್ಕೆ ಕಳುಹಿಸಿದ್ದ ಈ ದಾಖಲೆಯನ್ನು ಗಮನಿಸಿದ ಸಹೋದರ ಪೊಲೀಸರಿಗೆ ತಿಳಿಸಿದ ಕಾರಣ, ಸೀಕ್ರೆಟ್ ಸರ್ವಿಸ್ ಅಲೆನ್‌ನನ್ನು ಬಂಧಿಸಿ ದೊಡ್ಡ ದುರಂತವನ್ನು ತಪ್ಪಿಸಿತು. ಇದು ಅಮೆರಿಕದ ಉನ್ನತ ನಾಯಕತ್ವದ ಭದ್ರತೆಯ ಬಗ್ಗೆ ಗಂಭೀರ ಎಚ್ಚರಿಕೆ ಗಂಟೆಯಾಗಿದೆ.

ಅಮೆರಿಕ ಅಧ್ಯಕ್ಷರ ಮೇಲೆ ಭೀಕರ ದಾಳಿಗೆ ಸ್ಕೆಚ್: 'ಪ್ರಣಾಳಿಕೆ' ಮೂಲಕ ಹೊರಬಿತ್ತು ಭಯಾನಕ ಸಂಚು
ಡೊನಾಲ್ಡ್​ ಟ್ರಂಪ್ Image Credit source: Getty Images
ನಯನಾ ರಾಜೀವ್
|

Updated on: Apr 27, 2026 | 7:16 AM

Share

ವಾಷಿಂಗ್ಟನ್,ಏಪ್ರಿಲ್ 27: ಶ್ವೇತಭವನದ ವರದಿಗಾರರ ಭೋಜನಕೂಟ ನಡೆಯುತ್ತಿದ್ದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಸೇರಿದಂತೆ 2,500ಕ್ಕೂ ಹೆಚ್ಚು ಗಣ್ಯರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪಿಯನ್ನು ಭದ್ರತಾ ಪಡೆಗಳು ಬಂಧಿಸಿವೆ. ಕ್ಯಾಲಿಫೋರ್ನಿಯಾ ಮೂಲದ 31 ವರ್ಷದ ಕೋಲ್ ಥಾಮಸ್ ಅಲೆನ್ ಎಂಬಾತನೇ ಈ ಸಂಚಿನ ರೂವಾರಿ. ದಾಳಿ ನಡೆಸುವ ಕೇವಲ 10 ನಿಮಿಷಗಳ ಮೊದಲು ಆರೋಪಿ ಅಲೆನ್ ತನ್ನ ಕುಟುಂಬದವರಿಗೆ ಟ್ರಂಪ್ ವಿರೋಧಿ ಪ್ರಣಾಳಿಕೆ ಎಂಬ ದಾಖಲೆಯನ್ನು ಕಳುಹಿಸಿದ್ದ. ಇದರಲ್ಲಿ ಆತ ಅಧ್ಯಕ್ಷ ಟ್ರಂಪ್ ಮತ್ತು ಅವರ ಆಡಳಿತದ ಹಿರಿಯ ಅಧಿಕಾರಿಗಳನ್ನು ಕ್ರಮಾನುಗತವಾಗಿ ಹತ್ಯೆ ಮಾಡುವ ಪಟ್ಟಿಯನ್ನು ಸಿದ್ಧಪಡಿಸಿದ್ದ. ಈ ದಾಖಲೆಯನ್ನು ಕಂಡ ತಕ್ಷಣವೇ ಆತನ ಸಹೋದರ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.

ಅಲೆನ್ ತನ್ನ ಪ್ರಣಾಳಿಕೆಯಲ್ಲಿ ಅತ್ಯಂತ ಕ್ರೂರವಾದ ಮಾತುಗಳನ್ನು ಬರೆದಿದ್ದಾನೆ. ನಾನು ಹೋಟೆಲ್‌ಗೆ ಹಲವಾರು ಶಸ್ತ್ರಾಸ್ತ್ರಗಳೊಂದಿಗೆ ಪ್ರವೇಶಿಸಿದ್ದೀನಿ. ನನ್ನ ಗುರಿಯನ್ನು ತಲುಪಲು ನಾನು ಯಾರನ್ನು ಬೇಕಾದರೂ ಕೊಲ್ಲಲು ಸಿದ್ಧನಿದ್ದೇನೆ ಎಂದು ಅದರಲ್ಲಿ ಬರೆದಿದ್ದ.

ದಾಳಿಕೋರ ಅಲೆನ್ ಹೋಟೆಲ್‌ನ ಭದ್ರತಾ ವ್ಯವಸ್ಥೆಯ ಬಗ್ಗೆಯೂ ಲೇವಡಿ ಮಾಡಿದ್ದಾನೆ. ನಾನು ಶಸ್ತ್ರಾಸ್ತ್ರಗಳೊಂದಿಗೆ ಒಳಗೆ ಬಂದಾಗ ಯಾರೂ ನನ್ನನ್ನು ಪ್ರಶ್ನಿಸಲಿಲ್ಲ. ಭದ್ರತಾ ಸಿಬ್ಬಂದಿಯ ಗಮನವೆಲ್ಲಾ ಹೊರಗಿನ ಪ್ರತಿಭಟನಾಕಾರರ ಮೇಲಿತ್ತೇ ಹೊರತು ಒಳಗಿರುವವರ ಮೇಲಲ್ಲ ಎಂದು ಆತ ತನ್ನ ಪ್ರಣಾಳಿಕೆಯಲ್ಲಿ ಬರೆದಿದ್ದ. ಒಂದು ದಿನ ಮುಂಚಿತವಾಗಿ ಹೋಟೆಲ್‌ಗೆ ಪ್ರವೇಶಿಸಿ ಸಂಚು ರೂಪಿಸಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ. ಟ್ರಂಪ್ ಮತ್ತು ಅವರ ತಂಡವನ್ನು ಪಟ್ಟಿಯಲ್ಲಿ ಸೇರಿಸಿದ್ದ ಆತ, ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಅವರನ್ನು ಮಾತ್ರ ಗುರಿಯಿಂದ ಹೊರಗಿಟ್ಟಿದ್ದ.

ಮತ್ತಷ್ಟು ಓದಿ: ಟ್ರಂಪ್ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ: ಪ್ರಧಾನಿ ಮೋದಿ

ಆರೋಪಿಯ ಸಹೋದರ ಕನೆಕ್ಟಿಕಟ್ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಸೀಕ್ರೆಟ್ ಸರ್ವಿಸ್ ಕ್ಷಿಪ್ರ ಕಾರ್ಯಾಚರಣೆ ನಡೆಸಿತು. ಅಧ್ಯಕ್ಷರು ಕುಳಿತಿದ್ದ ಬಾಲ್ ರೂಂ ತಲುಪುವ ಮೊದಲೇ ಭದ್ರತಾ ತಪಾಸಣಾ ಕೇಂದ್ರದಲ್ಲಿ ಅಲೆನ್‌ನನ್ನು ಸೆರೆಹಿಡಿಯಲಾಯಿತು. ಅದೃಷ್ಟವಶಾತ್ ಒಬ್ಬ ವ್ಯಕ್ತಿಯ ಕ್ರೂರ ಮನಸ್ಥಿತಿಯ ಫಲವಾಗಬೇಕಿದ್ದ ಭೀಕರ ದುರಂತವು ಸಮಯಕ್ಕೆ ಸರಿಯಾದ ಮಾಹಿತಿಯಿಂದ ತಪ್ಪಿದೆ. ಅಮೆರಿಕದ ಉನ್ನತ ನಾಯಕತ್ವದ ಭದ್ರತೆಯ ಬಗ್ಗೆ ಇದು ದೊಡ್ಡ ಎಚ್ಚರಿಕೆಯ ಗಂಟೆಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ