AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಆರ್ಥಿಕತೆ ಸಂಕಷ್ಟದಲ್ಲಿದೆ ಎಂಬ ರಾಹುಲ್ ಗಾಂಧಿ ಹೇಳಿಕೆ ಬೆನ್ನಲ್ಲೇ ಭಾರತದ ಆರ್ಥಿಕತೆ ಬಗ್ಗೆ ಶ್ಲಾಘಿಸಿದ ಡೊನಾಲ್ಡ್ ಟ್ರಂಪ್

ನ್ಯೂಯಾರ್ಕ್‌ನಲ್ಲಿರುವ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನೀಡಿದ ಸಂದರ್ಶನದಲ್ಲಿ ಭಾರತದ ಆರ್ಥಿಕತೆ ಅಪಾಯದಲ್ಲಿದೆ ಎಂಬ ರಾಹುಲ್​ ಗಾಂಧಿ ಎಂಬ ಹೇಳಿಕೆಯ ಬೆನ್ನಲ್ಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಆರ್ಥಿಕತೆ ಬಗ್ಗೆ ಭಾರೀ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಧ್ಯಂತರ ಚುನಾವಣೆಯ ನಂತರ ಡೊನಾಲ್ಡ್ ಟ್ರಂಪ್ ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ ಭಾರತದ ಶೇ.7ರಷ್ಟು ಆರ್ಥಿಕ ಬೆಳವಣಿಗೆ ಹಾಗೂ ಕಡಿಮೆ ಬಡ್ಡಿದರವನ್ನು ಕೊಂಡಾಡಿದರು. ಅಮೆರಿಕ, ಭಾರತ, ಜಪಾನ್, ಆಸ್ಟ್ರೇಲಿಯಾ ಒಳಗೊಂಡ ಕ್ವಾಡ್ ಒಕ್ಕೂಟದ ವಾಣಿಜ್ಯ ಮತ್ತು ಆರ್ಥಿಕ ಸಾಮರ್ಥ್ಯವನ್ನು ಒತ್ತಿಹೇಳಿದರು.

ಭಾರತದ ಆರ್ಥಿಕತೆ ಸಂಕಷ್ಟದಲ್ಲಿದೆ ಎಂಬ ರಾಹುಲ್ ಗಾಂಧಿ ಹೇಳಿಕೆ ಬೆನ್ನಲ್ಲೇ ಭಾರತದ ಆರ್ಥಿಕತೆ ಬಗ್ಗೆ ಶ್ಲಾಘಿಸಿದ ಡೊನಾಲ್ಡ್ ಟ್ರಂಪ್
ಮೋದಿ ಮತ್ತು ಟ್ರಂಪ್
ಅಕ್ಷಯ್​ ಪಲ್ಲಮಜಲು​​
|

Updated on: Nov 21, 2026 | 11:30 AM

Share

ವಾಷಿಂಗ್ಟನ್ , ನ.21: ಒಂದು ವಾರದ ಹಿಂದೆ ಭಾರತದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನ್ಯೂಯಾರ್ಕ್‌ನಲ್ಲಿರುವ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನೀಡಿದ ಸಂದರ್ಶನದಲ್ಲಿ ಭಾರತದ ಆರ್ಥಿಕತೆ ಅಪಾಯದಲ್ಲಿ ಎಂಬ ಹೇಳಿಕೆಯ ಬೆನ್ನಲ್ಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಆರ್ಥಿಕತೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿದ್ದಾರೆ. ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷಕ್ಕೆ ಎದುರಾದ ಹಿನ್ನಡೆಯ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಶ್ವೇತಭವನದಲ್ಲಿ ತಮ್ಮ ಮೊದಲ ಪ್ರಮುಖ ಸುದ್ದಿಗೋಷ್ಠಿ ನಡೆಸಿದರು. ಸುಮಾರು 90 ನಿಮಿಷಗಳ ಕಾಲ ನಡೆದ ಈ ಸುದ್ದಿಗೋಷ್ಠಿಯಲ್ಲಿ ತಮ್ಮ ಆಡಳಿತದ ನೀತಿಗಳನ್ನು ಸಮರ್ಥಿಸಿಕೊಂಡ ಟ್ರಂಪ್, ವಲಸೆ ಹಾಗೂ ಇತರ ಆಂತರಿಕ ವಿಚಾರಗಳಲ್ಲಿ ಡೆಮೊಕ್ರಾಟ್ ಪಕ್ಷದೊಂದಿಗೆ ಕೆಲಸ ಮಾಡಲು ಮುಕ್ತ ಮನಸ್ಸಿರುವುದಾಗಿ ಸಂಕೇತ ನೀಡಿದ್ದಾರೆ. ಈ ವೇಳೆ ಭಾರತದ ಆರ್ಥಿಕ ಬೆಳವಣಿಗೆಯನ್ನು ವಿಶೇಷವಾಗಿ ಉಲ್ಲೇಖಿಸಿದ ಟ್ರಂಪ್, ಕ್ವಾಡ್ ಒಕ್ಕೂಟದ ವಾಣಿಜ್ಯ ಸಾಮರ್ಥ್ಯವನ್ನು ಕೊಂಡಾಡಿದ್ದಾರೆ.

ಭಾರತದ ಆರ್ಥಿಕ ಬೆಳವಣಿಗೆ ಹಾಗೂ ಮುಂಬೈ ಕ್ವಾಡ್ ಶೃಂಗಸಭೆ ಬಗ್ಗೆ ಟ್ರಂಪ್ ಹೇಳಿದ್ದೇನು?

ಸುದ್ದಿಗೋಷ್ಠಿಯಲ್ಲಿ ಭಾರತದ ಆರ್ಥಿಕ ಸಾಧನೆ ಮತ್ತು ಬಡ್ಡಿದರದ ವಾತಾವರಣವನ್ನು ಟ್ರಂಪ್ ಉಲ್ಲೇಖಿಸಿದರು. “ಭಾರತದತ್ತ ನೋಡಿ, ಅಲ್ಲಿ ಕಡಿಮೆ ಬಡ್ಡಿದರವಿದೆ ಮತ್ತು ಶೇ. 7ರಷ್ಟು ಆರ್ಥಿಕ ಬೆಳವಣಿಗೆ ದರವಿದೆ” ಎಂದು ಶ್ಲಾಘಿಸಿದ ಅವರು, ಕಡಿಮೆ ಬಡ್ಡಿದರಗಳೊಂದಿಗೆ ಅಮೆರಿಕ ಕೂಡ ಇದಕ್ಕಿಂತ ಹೆಚ್ಚಿನ ಬೆಳವಣಿಗೆ ಸಾಧಿಸಬಹುದು ಎಂದು ಅಭಿಪ್ರಾಯಪಟ್ಟರು.

ಅಮೆರಿಕ, ಭಾರತ, ಜಪಾನ್ ಮತ್ತು ಆಸ್ಟ್ರೇಲಿಯಾ ದೇಶಗಳನ್ನೊಳಗೊಂಡ ಕ್ವಾಡ್ ಒಕ್ಕೂಟದ ಆರ್ಥಿಕ ಮತ್ತು ಕಾರ್ಯತಂತ್ರದ ಸಾಮರ್ಥ್ಯವನ್ನು ಟ್ರಂಪ್ ಒತ್ತಿಹೇಳಿದರು. ಆರ್ಥಿಕ ಭದ್ರತೆ, ಪೂರೈಕೆ ಸರಪಳಿ ಮತ್ತು ಸಾಗರ ಭದ್ರತೆಯಲ್ಲಿ ಕ್ವಾಡ್ ಸಹಕಾರ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು. ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಮಾತನಾಡಿ, ಕ್ವಾಡ್ ಸದಸ್ಯ ರಾಷ್ಟ್ರಗಳು “ನಾಲ್ಕು ಅತ್ಯಂತ ಶಕ್ತಿಶಾಲಿ ಆರ್ಥಿಕತೆಗಳಾಗಿವೆ” ಮತ್ತು ಅಮೆರಿಕನ್ ಉತ್ಪನ್ನಗಳಿಗೆ ಮಾರುಕಟ್ಟೆ ಹಾಗೂ ಉದ್ಯೋಗ ಸೃಷ್ಟಿಸಲು ಒಟ್ಟಾಗಿ ಕೆಲಸ ಮಾಡಬಲ್ಲವು ಎಂದರು. ಅಲ್ಲದೆ, 2027ರ ಆರಂಭದಲ್ಲಿ ಕ್ವಾಡ್ ತನ್ನ ಚೊಚ್ಚಲ ‘ಬಿಸಿನೆಸ್ ಲೀಡರ್ಸ್ ಫೋರಂ’ ಆಯೋಜಿಸಲು ಯೋಜಿಸಿದ್ದು, ಭಾರತದ ಮುಂಬೈ ಮೊದಲ ಆವೃತ್ತಿಯ ಆತಿಥ್ಯ ವಹಿಸಲಿದೆ.

ಚಿಪ್ ತಯಾರಕ ಕಂಪನಿ ಎನ್‌ವಿಡಿಯಾ ಮಾಜಿ ಸಿಇಒ ಜೆನ್ಸನ್ ಹುವಾಂಗ್ ಅವರ ಮರಳುವಿಕೆಗೆ ಬೆಂಬಲ ಸೂಚಿಸಿದ ಟ್ರಂಪ್, ಅಮೆರಿಕವನ್ನು “ಎರಡನೇ ಅವಕಾಶಗಳ ದೇಶ” ಎಂದು ಬಣ್ಣಿಸಿದರು. ಆಯ್ಕೆಯಾಗಲಿರುವ ಡೆಮೊಕ್ರಾಟಿಕ್ ಬಹುಮತದ ಜನಪ್ರತಿನಿಧಿಗಳ ಸಭೆಯನ್ನು ಮಾತುಕತೆಗೆ ತರಲು ತಮ್ಮ ವೀಟೋ ಅಧಿಕಾರವನ್ನು ಬಳಸುವುದಾಗಿ ಟ್ರಂಪ್ ಎಚ್ಚರಿಸಿದರು. ಚೀನಾ ಕುರಿತ ತಮ್ಮ ನಿಲುವು ಮತ್ತು ಸುಧಾರಿತ ಚಿಪ್ ರಫ್ತು ನೀತಿಯನ್ನು ಸಮರ್ಥಿಸಿಕೊಂಡ ಅವರು, ಅಮೆರಿಕದ ಕಂಪನಿಗಳು ವಿದೇಶಗಳಲ್ಲಿ ಡೇಟಾ ಸೆಂಟರ್‌ಗಳನ್ನು ನಿರ್ಮಿಸುವುದನ್ನು ನಿರ್ಬಂಧಿಸುವ ಯೋಜನೆಗಳನ್ನು ಪ್ರಸ್ತಾಪಿಸಿದರು.

ಇದನ್ನೂ ಓದಿ: ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚು ಪ್ರಕರಣ: ಭಾರತೀಯ ಪ್ರಜೆ ನಿಖಿಲ್ ಗುಪ್ತಾಗೆ 19 ವರ್ಷ ಜೈಲು ಶಿಕ್ಷೆ ವಿಧಿಸಿದ ಅಮೆರಿಕ ನ್ಯಾಯಾಲಯ

ಇರಾನ್‌ನೊಂದಿಗೆ ಒಪ್ಪಂದ ಮಾಡಿಕೊಳ್ಳಲು ತಾವು ಬಯಸುವುದಾಗಿ ಪುನರುಚ್ಚರಿಸಿದ ಟ್ರಂಪ್, ಆದರೆ ಅಸಮರ್ಪಕ ಎಂದು ತಾವು ಭಾವಿಸುವ ಯಾವುದೇ ಷರತ್ತುಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಜೆಡಿ ವ್ಯಾನ್ಸ್, ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಮತ್ತು ಶ್ವೇತಭವನದ ಸಿಬ್ಬಂದಿ ಮುಖ್ಯಸ್ಥ ಸ್ಟೀಫನ್ ಮಿಲ್ಲರ್ ಕೂಡ ಉಪಸ್ಥಿತರಿದ್ದು ಮಾತನಾಡಿದರು. ಮುಂದಿನ ಎರಡು ವರ್ಷಗಳು ಅಮೆರಿಕದ ಇತಿಹಾಸದಲ್ಲೇ ಅತ್ಯುತ್ತಮ ಎರಡು ವರ್ಷಗಳಾಗಲಿವೆ ಎಂದು ಮಿಲ್ಲರ್ ಹೇಳಿದರು.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಬಿಗ್ ಬಾಸ್ ನಾಮಿನೇಷನ್ ಪಟ್ಟಿಯಲ್ಲಿ 6 ಜನ; ವಾರ ಹೊರಹೋಗುವ ಸ್ಪರ್ಧಿ ಯಾರು?
ಬಿಗ್ ಬಾಸ್ ನಾಮಿನೇಷನ್ ಪಟ್ಟಿಯಲ್ಲಿ 6 ಜನ; ವಾರ ಹೊರಹೋಗುವ ಸ್ಪರ್ಧಿ ಯಾರು?
ಪುಟ್ಟೇನಹಳ್ಳಿ ವಿನಾಯಕ ನಗರದಲ್ಲಿ ಮದುವೆ ವಿಚಾರಕ್ಕೆ ಗನ್ ತೋರಿಸಿ ಬೆದರಿಕೆ
ಪುಟ್ಟೇನಹಳ್ಳಿ ವಿನಾಯಕ ನಗರದಲ್ಲಿ ಮದುವೆ ವಿಚಾರಕ್ಕೆ ಗನ್ ತೋರಿಸಿ ಬೆದರಿಕೆ
ಸಾರ್ವಜನಿಕರ ದೂರುಗಳು ‘ಸಕಾಲ’ ವ್ಯಾಪ್ತಿಗೆ: ವಿಳಂಬಕ್ಕೆ ₹1,500 ದಂಡ
ಸಾರ್ವಜನಿಕರ ದೂರುಗಳು ‘ಸಕಾಲ’ ವ್ಯಾಪ್ತಿಗೆ: ವಿಳಂಬಕ್ಕೆ ₹1,500 ದಂಡ
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್