AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ವಿರುದ್ಧದ ದಾಳಿಗೆ ಸದ್ಯಕ್ಕೆ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧದ ದಾಳಿಯನ್ನು ಸದ್ಯಕ್ಕೆ ತಡೆಹಿಡಿದು ರಾಜತಾಂತ್ರಿಕತೆಗೆ ಮತ್ತೊಂದು ಅವಕಾಶ ನೀಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಇರುವಾಗಲೇ, ಪಾಕಿಸ್ತಾನದ ಮಧ್ಯಸ್ಥಿಕೆ ಮತ್ತು ಮನವಿ ಮೇರೆಗೆ ಕದನ ವಿರಾಮ ವಿಸ್ತರಿಸಲಾಗಿದೆ. ಇರಾನ್‌ನಿಂದ ಪ್ರಸ್ತಾಪ ಬರುವವರೆಗೆ ದಾಳಿ ಇಲ್ಲ. ಆದರೆ ಮಾತುಕತೆ ವಿಫಲವಾದರೆ ಪರಿಣಾಮ ಎದುರಿಸುವ ಎಚ್ಚರಿಕೆ ನೀಡಿದ್ದಾರೆ.

ಇರಾನ್ ವಿರುದ್ಧದ ದಾಳಿಗೆ ಸದ್ಯಕ್ಕೆ 'ಬ್ರೇಕ್': ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಟ್ರಂಪ್
ಡೊನಾಲ್ಡ್​ ಟ್ರಂಪ್ Image Credit source: PTI
ನಯನಾ ರಾಜೀವ್
|

Updated on: Apr 22, 2026 | 7:18 AM

Share

ವಾಷಿಂಗ್ಟನ್ , ಏಪ್ರಿಲ್ 22: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಮತ್ತು ಬಿಗುವಿನ ವಾತಾವರಣದ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇರಾನ್ ವಿರುದ್ಧದ ದಾಳಿಯನ್ನು ಸದ್ಯಕ್ಕೆ ತಡೆಹಿಡಿದಿರುವ ಟ್ರಂಪ್, ರಾಜತಾಂತ್ರಿಕತೆಗೆ ಮತ್ತೊಂದು ಅವಕಾಶ ನೀಡಿದ್ದಾರೆ. ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಸ್ಫೋಟಕ ಹಂತ ತಲುಪಿರುವಾಗಲೇ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮವನ್ನು ವಿಸ್ತರಿಸುವುದಾಗಿ ಘೋಷಿಸಿದ್ದಾರೆ. ಪಾಕಿಸ್ತಾನದ ನಾಯಕರ ವಿಶೇಷ ವಿನಂತಿಯ ಮೇರೆಗೆ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಪಾಕಿಸ್ತಾನದ ರಾಜತಾಂತ್ರಿಕ ನಡೆ ಡೊನಾಲ್ಡ್​ ಟ್ರಂಪ್ ತಮ್ಮ ಟ್ರುತ್ ಸೋಶಿಯಲ್​​ ಪ್ಲಾಟ್​ಫಾರ್ಮ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪಾಕಿಸ್ತಾನದ ಫೀಲ್ಡ್​ ಮಾರ್ಷಲ್ ಆಸಿಮ್ ಮುನೀರ್ ಮತ್ತು ಶೆಹಬಾಜ್ ಷರೀಫ್ ಅವರು ಅಮೆರಿಕವನ್ನು ಸಂಪರ್ಕಿಸಿ ಮಾತುಕತೆಗೆ ಸಮಯ ಕೋರಿದ್ದಾರೆ ಎಂದು ತಿಳಿಸಿದ್ದಾರೆ. ಇರಾನ್ ನಾಯಕರು ಮತ್ತು ಪ್ರತಿನಿಧಿಗಳು ಒಂದು ಏಕೀಕೃತ ಪ್ರಸ್ತಾಪವನ್ನು ಮಂಡಿಸುವವರೆಗೆ ದಾಳಿಯನ್ನು ತಡೆ ಹಿಡಿಯುವಂತೆ ಪಾಕಿಸ್ತಾನ ಮನವಿ ಮಾಡಿದೆ. ಅವರ ಪ್ರಸ್ತಾಪ ಬರುವವರೆಗೆ ಮತ್ತು ಚಚರ್ಚಗಳು ತಾರ್ಕಿಕ ಅಂತ್ಯ ಕಾಣುವವರೆಗೆ ತಾವು ಕದನ ವಿರಾಮ ವಿಸ್ತರಿಸುವುದಾಗಿ ಟ್ರಂಪ್ ತಿಳಿಸಿದ್ದಾರೆ.

ಹಾರ್ಮುಜ್ ಜಲಸಂಧಿ: ಟ್ರಂಪ್ ಅವರ ದಿಗ್ಬಂಧನ ತಂತ್ರ ಜಾಗತಿಕ ತೈಲ ವ್ಯಾಪಾರದ ನಾಡಿಮಿಡಿತವಾಗಿರುವ ಹಾರ್ಮುಜ್ ಜಲಸಂಧಿಯ ವಿಚಾರದಲ್ಲಿ ಟ್ರಂಪ್ ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಹಾರ್ಮುಜ್ ಜಲಸಂಧಿ ಮುಕ್ತವಾಗಿದ್ದರೆ ಇರಾನ್ ದಿನಕ್ಕೆ ಸುಮಾರು 500 ಮಿಲಿಯನ್ ಡಾಲರ್ ಆದಾಯ ಗಳಿಸುತ್ತದೆ. ಆದರೆ ಅಮೆರಿಕದ ನೌಕಾಪಡೆಯು ಈ ಮಾರ್ಗವನ್ನು ಸಂಪೂರ್ಣವಾಗಿ ನಿರ್ಬಂಧಿಸಿರುವುದರಿಂದ ಇರಾನ್ ಆರ್ಥಿಕವಾಗಿ ಕಂಗೆಟ್ಟಿದೆ.

ಇರಾನ್ ಈ ಜಲಸಂಧಿಯನ್ನು ತಾನೇ ಮುಚ್ಚುವುದಾಗಿ ಹೇಳಿಕೊಳ್ಳುತ್ತಿದೆ. ಆದರೆ ಟ್ರಂಪ್ ಪ್ರಕಾರ, ಇದು ಕೇವಲ ತನ್ನ ಮರ್ಯಾದೆ ಉಳಿಸಿಕೊಳ್ಳಲು ಇರಾನ್ ಮಾಡುತ್ತಿರುವ ನಾಟಕ. ಅಮೆರಿಕ ಈಗಾಗಲೇ ಅದನ್ನು ಮುಚ್ಚಿರುವುದರಿಂದ ಇರಾನ್ ಅಸಹಾಯಕವಾಗಿದೆ.

ಮತ್ತಷ್ಟು ಓದಿ: ನನ್ನಿಂದ ಖುಷಿಯಾಗಿರುವ ಚೀನಾದ ಅಧ್ಯಕ್ಷ ಬಿಗಿ ಅಪ್ಪುಗೆ ನೀಡುತ್ತಾರೆ; ಟ್ರಂಪ್

ಅಮೆರಿಕ ಮತ್ತು ಇರಾನ್ ನಡುವಿನ ಎರಡು ವಾರಗಳ ಮೊದಲ ಹಂತದ ಕದನ ವಿರಾಮ ಬುಧವಾರಕ್ಕೆ ಅಂತ್ಯಗೊಂಡಿತ್ತು. ಎರಡನೇ ಸುತ್ತಿನ ಮಾತುಕತೆಗಳು ಯಾವುದೇ ಫಲ ನೀಡದೆ ಸ್ಥಗಿತಗೊಂಡಿದ್ದವು. ಟ್ರಂಪ್ ಮೊದಲು ಕದನ ವಿರಾಮ ವಿಸ್ತರಣೆ ನಿರಾಕರಿಸಿದ್ದರೂ, ಕೊನೆಯ ಕ್ಷಣದಲ್ಲಿ ಪಾಕಿಸ್ತಾನದ ಮಧ್ಯಸ್ಥಿಕೆಯಿಂದಾಗಿ ಮನಸ್ಸು ಬದಲಿಸಿದ್ದಾರೆ. ಆದರೂ ಅಮರಿಕ ಸೇನೆಗೆ ಯಾವುದೇ ಕ್ಷಣದಲ್ಲಿ ದಾಳಿಗೆ ಸಿದ್ದರಾಗಿರಿ ಎಂದು ಅವರು ಆದೇಶಿಸಿದ್ದಾರೆ.

ಮುಂದಿನ ಹಾದಿ ಕಠಿಣ ಈ ಕದನ ವಿರಾಮ ವಿಸ್ತರಣೆಯು ತಾತ್ಕಾಲಿಕವಾಗಿದ್ದು, ಇರಾನ್ ಮಂಡಿಸುವ ಪ್ರಸ್ತಾಪದ ಮೇಲೆ ಎಲ್ಲವೂ ನಿರ್ಧರಿತವಾಗಲಿದೆ. ಒಂದೋ ಒಪ್ಪಂದವಾಗಬೇಕು, ಇಲ್ಲದಿದ್ದರೆ ಇರಾನ್ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ಪರೋಕ್ಷ ಎಚ್ಚರಿಕೆಯನ್ನು ಟ್ರಂಪ್ ನೀಡಿದ್ದಾರೆ. ಟ್ರಂಪ್ ಅವರ ಈ ನಡೆ ಇರಾನ್ ಸರ್ಕಾರವನ್ನು ಆರ್ಥಿಕವಾಗಿ ಹೈರಾಣಾಗಿಸಿ, ಅವರನ್ನು ಮಾತುಕತೆಯ ಮೇಜಿಗೆ ಬರುವಂತೆ ಮಾಡುವ ತಂತ್ರದ ಭಾಗವಾಗಿದೆ ಎಂದು ರಾಜತಾಂತ್ರಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ