AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಉತ್ಪನ್ನಗಳಿಗೆ ಹೆಚ್ಚುವರಿ ಸುಂಕ ವಾಪಸ್ ಪಡೆಯುತ್ತಾರಾ ಟ್ರಂಪ್? ಪರಿಶೀಲನೆಯ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ

ರಷ್ಯಾದಿಂದ ತೈಲ ಖರೀದಿಸುವ ದೇಶಗಳ ಉತ್ಪನ್ನಗಳ ಆಮದಿಗೆ ವಿಧಿಸಿರುವ ಹೆಚ್ಚುವರಿ ಸುಂಕದ ಬಗ್ಗೆ ಮುಂದಿನ ಎರಡು ಅಥವಾ ಮೂರು ವಾರಗಳಲ್ಲಿ ಪರಿಶೀಲನೆ ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ಮಾತುಕತೆ ನಡೆಸಿದ ನಂತರ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ. ಹೀಗಾಗಿ, ಭಾರತದ ಮೇಲೆ ವಿಧಿಸಿರುವ ಹೆಚ್ಚುವರಿ ಸುಂಕವನ್ನು ಅಮೆರಿಕ ಹಿಂಪಡೆಯಲಿದೆಯೇ ಎಂಬ ಕುತೂಹಲ ಮೂಡಿದೆ.

ಭಾರತದ ಉತ್ಪನ್ನಗಳಿಗೆ ಹೆಚ್ಚುವರಿ ಸುಂಕ ವಾಪಸ್ ಪಡೆಯುತ್ತಾರಾ ಟ್ರಂಪ್? ಪರಿಶೀಲನೆಯ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ಡೊನಾಲ್ಡ್ ಟ್ರಂಪ್Image Credit source: AP
Ganapathi Sharma
|

Updated on: Aug 16, 2025 | 1:41 PM

Share

ನವದೆಹಲಿ, ಆಗಸ್ಟ್ 16: ಭಾರತದ ಉತ್ಪನ್ನಗಳ ಆಮದಿಗೆ ಹೆಚ್ಚುವರಿ ಸುಂಕ ವಿಧಿಸಿರುವ ಅಮೆರಿಕ, ಇದೀಗ ರಷ್ಯಾ ಜೊತೆಗಿನ ಮಾತುಕತೆಯ ನಂತರ ಆ ನಿರ್ಧಾರವನ್ನು ಹಿಂಪಡೆಯಲಿದೆಯೇ? ಇಂಥದ್ದೊಂದು ಅನುಮಾನಕ್ಕೆ ಡೊನಾಲ್ಡ್ ಟ್ರಂಪ್ (Donald Trump) ಈಗ ನೀಡಿರುವ ಹೇಳಿಕೆ ಕಾರಣವಾಗಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದ ನಂತರ ಸಂದರ್ಶನವೊಂದರಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್, ರಷ್ಯಾದಿಂದ ತೈಲ ಖರೀದಿಸುವ ದೇಶಗಳ ಮೇಲೆ ವಿಧಿಸಿರುವ ಸುಂಕದ ಬಗ್ಗೆ ಮುಂದಿನ ಎರಡು ಅಥವಾ ಮೂರು ವಾರಗಳಲ್ಲಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.

ಕಳೆದ ವಾರವಷ್ಟೇ ಟ್ರಂಪ್ ಭಾರತದ ಉತ್ಪನ್ನಗಳ ಮೇಲೆ ಶೇ 25 ರಷ್ಟು ಹೆಚ್ಚುವರಿ ಸುಂಕ ವಿಧಿಸಿದ್ದರು. ಇದರೊಂದಿಗೆ, ಭಾರತದ ಉತ್ಪನ್ನಗಳ ಆಮದಿನ ಮೇಲೆ ಅಮೆರಿಕ ವಿಧಿಸಿದ್ದ ಸುಂಕದ ಪ್ರಮಾಣ ಶೇ 50 ತಲುಪಿತ್ತು. ಅಷ್ಟೇ ಅಲ್ಲದೆ, ಪುಟಿನ್ ಜತೆಗಿನ ಮಾತುಕತೆ ವಿಫಲವಾದರೆ ಭಾರತದ ಮೇಲೆ ಮತ್ತೆ ಹೆಚ್ಚುವರಿ ಸುಂಕ ವಿಧಿಸುವುದಾಗಿ ಟ್ರಂಪ್ ಹೇಳಿದ್ದರು. ಏತನ್ಮಧ್ಯೆ, ‘ಒಮ್ಮತಕ್ಕೆ ಬಾರದೆ ಒಪ್ಪಂದ ಸಾಧ್ಯವಿಲ್ಲ’ ಎಂದು ವ್ಲಾಡಿಮಿರ್ ಪುಟಿನ್ ಜತೆಗಿನ ದ್ವಿಪಕ್ಷೀಯ ಮಾತುಕತೆಯ ಬಳಿಕ ಡೊನಾಲ್ಡ್ ಟ್ರಂಪ್ ಹೇಳಿದ್ದು, ಅಮೆರಿಕವು ಭಾರತದ ಮೇಲೆ ಮತ್ತಷ್ಟು ಸುಂಕ ವಿಧಿಸಲಿದೆಯೇ ಎಂಬ ಅನುಮಾನಗಳಿಗೆ ಕಾರಣವಾಗಿತ್ತು. ಇದೀಗ ಟ್ರಂಪ್, ರಷ್ಯಾದಿಂದ ತೈಲ ಖರೀದಿಸುವ ದೇಶಗಳ ಮೇಲಿನ ಸುಂಕದ ಬಗ್ಗೆ 2-3 ವಾರಗಳಲ್ಲಿ ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ.

ರಷ್ಯಾ-ಉಕ್ರೇನ್ ಸಂಘರ್ಷದ ಬಗ್ಗೆ ಟ್ರಂಪ್ ಹೇಳಿದ್ದೇನು?

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ ಜತೆ ಮಾತುಕತೆ ನಡೆಸಿದ ನಂತರ ಫಾಕ್ಸ್ ನ್ಯೂಸ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಟ್ರಂಪ್, ಉಕ್ರೇನ್​ ಯದ್ಧವು ಪ್ರಾದೇಶಿಕ ವಿನಾಯಿತಿಗಳೊಂದಿಗೆ ಕೊನೆಗೊಳ್ಳಲಿದೆ ಎಂದಿದ್ದಾರೆ. ಉಕ್ರೇನ್ ಹಾಗೂ ರಷ್ಯಾ ಮಧ್ಯೆ ಭೂ ವಿನಿಮಯ ಏರ್ಪಡಲಿದೆ. ಇದು ಸಹ ನಮ್ಮ ಮಾತುಕತೆಯ ಭಾಗವಾಗಿತ್ತು. ಅದೇ ರೀತಿ, ಉಕ್ರೇನ್​​ಗೆ ಅಮೆರಿಕವು ಸಂಭಾವ್ಯ ಭದ್ರತೆಯ ಖಾತರಿ ಒದಗಿಸುವ ಬಗ್ಗೆಯೂ ಚರ್ಚೆಯಾಗಿದೆ ಎಂದು ಟ್ರಂಪ್ ಹೇಳಿದ್ದಾರೆ.

ಇದನ್ನೂ ಓದಿ
Image
ರಷ್ಯಾದಿಂದ ಭಾರತ ತೈಲ ಖರೀದಿ ನಿಲ್ಲಿಸಿದೆ ಎಂದ ಟ್ರಂಪ್! ಇದು ನಿಜವೇ?
Image
ಅಮೆರಿಕ - ರಷ್ಯಾ ಮಧ್ಯೆ ಮೂಡದ ಒಮ್ಮತ: ಭಾರತಕ್ಕೆ ಮತ್ತಷ್ಟು ತೆರಿಗೆ ಬರೆ?
Image
ರಷ್ಯಾ ಅಧ್ಯಕ್ಷ ಪುಟಿನ್​​ಗೆ ಬಹಿರಂಗವಾಗಿ ಬೆದರಿಕೆ ಹಾಕಿದ ಟ್ರಂಪ್
Image
ಭಾರತದೊಂದಿಗಿನ ಸಂಬಂಧ ಮೊದಲಿನಂತೆಯೇ ಇದೆ, ಅಮೆರಿಕದ ಮೃದು ಮಾತು

ಇದನ್ನೂ ಓದಿ: ರಷ್ಯಾದಿಂದ ಭಾರತ ತೈಲ ಖರೀದಿ ನಿಲ್ಲಿಸಿದೆ ಎಂದ ಡೊನಾಲ್ಡ್ ಟ್ರಂಪ್! ಇದು ನಿಜವೇ? ಇಲ್ಲಿದೆ ವಿವರ

ಆದಾಗ್ಯೂ, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜತೆಗಿನ ಮಾತುಕತೆಯ ನಂತರವೇ ಇದು ಅಂತಿಮಗೊಳ್ಳಲಿದೆ. ಅವರು ಈ ಒಪ್ಪಂದಕ್ಕೆ ಒಪ್ಪದೆ ಇರಲೂಬಹುದು. ಆದರೆ, ಒಪ್ಪಂದಕ್ಕೆ ಉಕ್ರೇನ್ ಒಪ್ಪಿಕೊಳ್ಳಬೇಕು ಎಂದು ಟ್ರಂಪ್ ಆಗ್ರಹಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು