AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಲಸೆ ನೀತಿಯಲ್ಲಿ ಫೇಲ್, ಯುಕೆ ಪ್ರಧಾನಿ ಕೀರ್ ಶೀಘ್ರ ರಾಜೀನಾಮೆ ನೀಡಲಿದ್ದಾರೆ: ಭವಿಷ್ಯ ನುಡಿದ ಟ್ರಂಪ್

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ವಲಸೆ ಮತ್ತು ಇಂಧನ ನೀತಿಗಳಲ್ಲಿ ವಿಫಲರಾಗಿದ್ದು, ಶೀಘ್ರದಲ್ಲೇ ರಾಜೀನಾಮೆ ನೀಡಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಆಂತರಿಕ ವಿರೋಧ ಮತ್ತು ಅಮೆರಿಕಕ್ಕೆ ಸಹಕರಿಸದಿರುವುದು ಸ್ಟಾರ್ಮರ್ ಕುರ್ಚಿಗೆ ಕಂಟಕ ತಂದಿದೆ. ಬ್ರಿಟನ್ ಸರ್ಕಾರ ಈ ವದಂತಿಗಳನ್ನು ತಳ್ಳಿಹಾಕಿದ್ದರೂ, ಟ್ರಂಪ್ ಹೇಳಿಕೆ ಜಾಗತಿಕ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ವಲಸೆ ನೀತಿಯಲ್ಲಿ ಫೇಲ್, ಯುಕೆ ಪ್ರಧಾನಿ ಕೀರ್ ಶೀಘ್ರ ರಾಜೀನಾಮೆ ನೀಡಲಿದ್ದಾರೆ:  ಭವಿಷ್ಯ ನುಡಿದ ಟ್ರಂಪ್
ಡೊನಾಲ್ಡ್​ ಟ್ರಂಪ್-ಸ್ಟಾರ್ಮರ್ Image Credit source: Forbes
ನಯನಾ ರಾಜೀವ್
|

Updated on: Jun 22, 2026 | 8:18 AM

Share

ವಾಷಿಂಗ್ಟನ್, ಜೂನ್ 22: ವಲಸೆ ನೀತಿಯಲ್ಲಿ ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್(Keir Starmer) ಸೋತಿದ್ದಾರೆ, ಅವರು ಶೀಘ್ರವೇ ರಾಜೀನಾಮೆ ನೀಡಲಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ. ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ವಲಸೆ ಮತ್ತು ಇಂಧನ ನೀತಿಗಳಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದು, ಅವರು ಶೀಘ್ರದಲ್ಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂದು ಟ್ರಂಪ್ ಭವಿಷ್ಯ ನುಡಿಯುವ ಮೂಲಕ ಜಾಗತಿಕ ರಾಜಕೀಯದಲ್ಲಿ ಆಘಾತ ಮೂಡಿಸಿದ್ದಾರೆ.

ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ‘ಟ್ರೂತ್ ಸೋಶಿಯಲ್’ನಲ್ಲಿ ಈ ಕುರಿತು ಪೋಸ್ಟ್ ಹಾಕಿದ್ದಾರೆ. ಬ್ರಿಟಿಷ್ ಪತ್ರಿಕೆ ‘ಅಬ್ಸರ್ವರ್’ ವರದಿಯನ್ನು ಉಲ್ಲೇಖಿಸಿರುವ ರಾಯಿಟರ್ಸ್ ಸಂಸ್ಥೆಯು, ಪ್ರಧಾನಿ ಸ್ಟಾರ್ಮರ್ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರ ನಾಯಕತ್ವಕ್ಕೆ ಅವರದೇ ಪಕ್ಷದ ಪ್ರತಿಸ್ಪರ್ಧಿ ಆಂಡಿ ಬರ್ನ್‌ಹ್ಯಾಮ್ ಅವರಿಂದ ನೇರ ಸವಾಲು ಎದುರಾಗಿದೆ. ಆಂಡಿ ಬರ್ನ್‌ಹ್ಯಾಮ್ ಇತ್ತೀಚೆಗೆ ಸಂಸತ್ತಿನಲ್ಲಿ ಸ್ಥಾನ ಗೆದ್ದಿರುವುದು ಪ್ರಧಾನಿ ಸ್ಟಾರ್ಮರ್ ಅವರ ಕುರ್ಚಿಗೆ ಕಂಟಕ ತಂದಿಟ್ಟಿದೆ.

ಮತ್ತಷ್ಟು ಓದಿ: ಪ್ಯಾರಿಸ್‌ಗೆ ಪ್ರಧಾನಿ ಮೋದಿ ಆಗಮನ: ಜಾಗತಿಕ ಪ್ರಗತಿಗೆ ಭಾರತ-ಫ್ರಾನ್ಸ್ ಸಹಭಾಗಿತ್ವ ಅತ್ಯಗತ್ಯ

ದೇಶದ ಪ್ರಮುಖ ಸಮಸ್ಯೆಗಳಾದ ಅಕ್ರಮ ವಲಸೆ ತಡೆ ಹಾಗೂ ಇಂಧನ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಪ್ರಸ್ತುತ ಬ್ರಿಟನ್ ಸರ್ಕಾರ ಸಂಪೂರ್ಣ ಸೋತಿದೆ ಎಂದು ಟ್ರಂಪ್ ಸೇರಿದಂತೆ ಹಲವರು ಟೀಕಿಸಿದ್ದಾರೆ.

ಇರಾನ್ ಮೇಲಿನ ಅಮೆರಿಕದ ಮಿಲಿಟರಿ ಕಾರ್ಯಾಚರಣೆಯ ಸಮಯದಲ್ಲಿ ಅಮೆರಿಕದ ಪಡೆಗಳು ಬ್ರಿಟನ್‌ನ ಮಿಲಿಟರಿ ನೆಲೆಯನ್ನು ಬಳಸಿಕೊಳ್ಳಲು ಪ್ರಧಾನಿ ಕೀರ್ ಸ್ಟಾರ್ಮರ್ ಅವಕಾಶ ನೀಡಲಿಲ್ಲ. ಇದು ಡೊನಾಲ್ಡ್ ಟ್ರಂಪ್ ಅವರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಅಮೆರಿಕ ಪಡೆಗಳಿಗೆ ಸಹಕರಿಸದ ಬ್ರಿಟನ್, ಉಭಯ ದೇಶಗಳ ನಡುವಿನ ಐತಿಹಾಸಿಕ ನಿಕಟ ಸಂಬಂಧವನ್ನು ಹಾಳುಮಾಡಿದೆ. ನಾವು ಯುದ್ಧದಲ್ಲಿ ಗೆದ್ದ ನಂತರ ಬಂದು ನಮ್ಮ ಜೊತೆ ಕೈಜೋಡಿಸುವ ಅಂತಹ ನಾಯಕರು ನಮಗೆ ಬೇಡ ಎಂದು ಟ್ರಂಪ್ ಬ್ರಿಟನ್ ಪ್ರಧಾನಿ ವಿರುದ್ಧ ತೀವ್ರ ಕಿಡಿಕಾರಿದ್ದಾರೆ.

ಆದರೆ ಬ್ರಿಟನ್‌ನ ಸರ್ಕಾರಿ ಮೂಲಗಳ ಪ್ರಕಾರ, ಪ್ರಧಾನಿ ಸ್ಟಾರ್ಮರ್ ಪ್ರಸ್ತುತ ರಾಜೀನಾಮೆ ವದಂತಿಗಳನ್ನು ತಳ್ಳಿಹಾಕಿದ್ದು, ಸರ್ಕಾರವನ್ನು ನಡೆಸುವತ್ತ ಗಮನ ಹರಿಸಿದ್ದಾರೆ ಎಂದು ತಿಳಿದುಬಂದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ