ರಷ್ಯಾದಿಂದ ತೈಲ ಖರೀದಿ ಕಡಿಮೆ ಮಾಡುತ್ತೆ ಭಾರತ, ಪ್ರಧಾನಿ ಮೋದಿಯಿಂದ ಭರವಸೆ ಸಿಕ್ಕಿದೆ ಎಂದ ಟ್ರಂಪ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ದೀಪಾವಳಿಯನ್ನು ಆಚರಿಸಿದರು. ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಟ್ರಂಪ್, ಭಾರತದ ಜನರಿಗೆ ದೀಪಾವಳಿಯ ಶುಭಾಶಯಗಳು. ನಾನು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಫೋನ್‌ನಲ್ಲಿ ಮಾತನಾಡಿದೆ. ನಾವು ಉತ್ತಮ ಸಂಭಾಷಣೆ ನಡೆಸಿದ್ದೇವೆ. ನಾವು ವ್ಯಾಪಾರ ಮತ್ತು ಹಲವು ವಿಷಯಗಳನ್ನು ಚರ್ಚಿಸಿದ್ದೇವೆ. ರಷ್ಯಾದಿಂದ ತೈಲ ಖರೀದಿ ಕಡಿಮೆ ಮಾಡುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ವಾಷಿಂಗ್ಟನ್, ಅಕ್ಟೋಬರ್ 22: ಭಾರತ ರಷ್ಯಾದಿಂದ ಹೆಚ್ಚಿನ ತೈಲ ಖರೀದಿ ಮಾಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿ ಮಾತನಾಡಿದ್ದಾರೆ. ಇದನ್ನು ಖುದ್ದಾಗಿ ಟ್ರಂಪ್ ಹೇಳಿಕೊಂಡಿದ್ದಾರೆ. ದೀಪಾವಳಿ ಶುಭಾಶಯ ತಿಳಿಸಲು ಕರೆ ಮಾಡಿದ್ದರೂ ಕೂಡ ರಷ್ಯಾದಿಂದ ಭಾರತ ತೈಲ ಖರೀದಿಸುತ್ತಿರುವ ಕುರಿತು ಮತ್ತೆ ಚರ್ಚೆ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರು ಈ ಸಂಭಾಷಣೆಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಟ್ಯಾಗ್ ಮಾಡಿ, ಅಧ್ಯಕ್ಷ ಡೊನಾಲ್ಡ್ ಟ್ರಂಪ್, ನಿಮ್ಮ ಫೋನ್ ಕರೆ ಮತ್ತು ದೀಪಾವಳಿ ಶುಭಾಶಯಕ್ಕೆ ಧನ್ಯವಾದಗಳು.
ಈ ಬೆಳಕಿನ ಹಬ್ಬದಂದು, ನಮ್ಮ ಎರಡೂ ಪ್ರಜಾಪ್ರಭುತ್ವ ರಾಷ್ಟ್ರಗಳು ಜಗತ್ತನ್ನು ಬೆಳಗಿಸಲು ಮತ್ತು ಎಲ್ಲಾ ರೀತಿಯ ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನಿಂದ ನಿಲ್ಲಲು ಭರವಸೆಯ ದೀಪವಾಗಲಿ ಎಂದು ಹೇಳಿದ್ದಾರೆ. ಇದಕ್ಕೂ ಮನ್ನ ಟ್ರಂಪ್ ಮಾತನಾಡಿ, ಮೋದಿ ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು ಬಯಸುತ್ತಾರೆ ಮತ್ತು ರಷ್ಯಾದಿಂದ ತೈಲ ಖರೀದಿಯನ್ನು ಕಡಿಮೆ ಮಾಡುತ್ತಾರೆ ಎಂದು ಹೇಳಿದರು.
ಟ್ರಂಪ್ ಶ್ವೇತಭವನದಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ದೀಪಾವಳಿ ಆಚರಿಸಿದರು. ಡೊನಾಲ್ಡ್ ಟ್ರಂಪ್ ಪ್ರಧಾನಿ ಮೋದಿ ಅವರನ್ನು ಒಬ್ಬ ಮಹಾನ್ ವ್ಯಕ್ತಿ ಮತ್ತು ಉತ್ತಮ ಸ್ನೇಹಿತ ಎಂದು ಬಣ್ಣಿಸಿದರು. ಪ್ರಧಾನಿ ಮೋದಿ ಒಬ್ಬ ಮಹಾನ್ ವ್ಯಕ್ತಿ ಮತ್ತು ಅವರು ವರ್ಷಗಳಿಂದ ಅವರೊಂದಿಗೆ ಆಳವಾದ ಸ್ನೇಹವನ್ನು ಬೆಳೆಸಿಕೊಂಡಿದ್ದಾರೆ ಎಂದು ಟ್ರಂಪ್ ಹೇಳಿದರು.
ಮತ್ತಷ್ಟು ಓದಿ: ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿ, ಇಲ್ಲವಾದಲ್ಲಿ ಭಾರೀ ಸುಂಕ ಪಾವತಿಗೆ ಸಿದ್ಧರಾಗಿ: ಭಾರತಕ್ಕೆ ಮತ್ತೆ ಟ್ರಂಪ್ ಎಚ್ಚರಿಕೆ
ವ್ಯಾಪಾರ ಸುಂಕಗಳು ಮತ್ತು ಇತರ ವಿಷಯಗಳ ಕುರಿತು ಅಮೆರಿಕ-ಭಾರತ ಸಂಬಂಧಗಳಲ್ಲಿ ಉದ್ವಿಗ್ನತೆ ಉಂಟಾಗಿರುವ ಮಧ್ಯೆ ನರೇಂದ್ರ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ನಡುವಿನ ಫೋನ್ ಸಂಭಾಷಣೆ ನಡೆದಿದೆ, ಆದರೆ ರಷ್ಯಾದಿಂದ ತೈಲ ಖರೀದಿಸದಂತೆ ಅಮೆರಿಕ ಭಾರತವನ್ನು ಒತ್ತಾಯಿಸುತ್ತಲೇ ಇದೆ. ಅವರು ರಷ್ಯಾದಿಂದ ಹೆಚ್ಚು ತೈಲ ಖರೀದಿಸುವುದಿಲ್ಲ.
ಅವರು ನನ್ನಂತೆಯೇ ಆ ಯುದ್ಧ ಕೊನೆಗೊಳ್ಳುವುದನ್ನು ನೋಡಲು ಬಯಸುತ್ತಾರೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಕೊನೆಗೊಳ್ಳುವುದನ್ನು ನೋಡಲು ಅವರು ಬಯಸುತ್ತಾರೆ. ಅವರು ಹೆಚ್ಚು ತೈಲ ಖರೀದಿಸುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




