AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಹೊಡೆತಕ್ಕೆ ಇರಾನ್ ನಾಯಕರನ್ನು ಮುಗಿಸಬಹುದು: ಟ್ರಂಪ್ ಬೆದರಿಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಇರಾನ್ ನಾಯಕರಿಗೆ ನೇರ ಬೆದರಿಕೆ ಹಾಕಿದ್ದಾರೆ. ಇರಾನ್‌ನ ಉನ್ನತ ನಾಯಕರು ಅಂತ್ಯಕ್ರಿಯೆಗಾಗಿ ಒಂದೆಡೆ ಸೇರಿದ್ದು, ಅವರನ್ನು ಒಂದೇ ಹೊಡೆತಕ್ಕೆ ಮುಗಿಸಬಹುದು ಎಂದು ಟ್ರಂಪ್ ಹೇಳಿದ್ದಾರೆ. ಅಮೆರಿಕ ಇರಾನ್ ಮೇಲೆ ಆರ್ಥಿಕ ದಿಗ್ಬಂಧನ ಹೇರಿ ಸಂಪೂರ್ಣ ನಾಶಪಡಿಸಿದೆ ಎಂದು ಟ್ರಂಪ್ ವ್ಯಂಗ್ಯವಾಡಿದ್ದಾರೆ. ಇದಕ್ಕೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಉಭಯ ದೇಶಗಳ ನಡುವೆ ಪರೋಕ್ಷ ಮಾತುಕತೆಗಳು ನಡೆಯುತ್ತಿದ್ದರೂ, ಪರಿಸ್ಥಿತಿ ಉದ್ವಿಗ್ನವಾಗಿದೆ.

ಒಂದೇ ಹೊಡೆತಕ್ಕೆ ಇರಾನ್ ನಾಯಕರನ್ನು ಮುಗಿಸಬಹುದು: ಟ್ರಂಪ್ ಬೆದರಿಕೆ
ಡೊನಾಲ್ಡ್​ ಟ್ರಂಪ್
ನಯನಾ ರಾಜೀವ್
|

Updated on: Jul 05, 2026 | 8:56 AM

Share

ವಾಷಿಂಗ್ಟನ್, ಜುಲೈ 05:ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump)ಇರಾನ್ ವಿರುದ್ಧದ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ಅಂತ್ಯಕ್ರಿಯೆಗಾಗಿ ಇರಾನ್‌ನ ಎಲ್ಲಾ ಉನ್ನತ ನಾಯಕರು ಒಂದೇ ಕಡೆ ಸೇರಿದ್ದು, ಅಮೆರಿಕ ಮನಸ್ಸು ಮಾಡಿದರೆ ಒಂದೇ ಹೊಡೆತದಲ್ಲಿ ಅವರೆಲ್ಲರನ್ನೂ ನಾಶಪಡಿಸಬಲ್ಲದು ಎಂದು ಟ್ರಂಪ್ ಹೇಳಿದ್ದಾರೆ.

ಆಕ್ಸಿಯಾಸ್ ಸಂಸ್ಥೆಯೊಂದಿಗೆ ಮಾತನಾಡಿದ ಟ್ರಂಪ್, ಅವರೆಲ್ಲರೂ ಅಲ್ಲೇ ಇದ್ದಾರೆ. ಒಂದೇ ಒಂದು ದಾಳಿಯ ಮೂಲಕ ನಾವು ಇರಾನ್‌ನ ಇಡೀ ನಾಯಕತ್ವವನ್ನು ಇಲ್ಲದಂತೆ ಮಾಡಬಹುದು. ಆದರೆ ನಾವು ಹಾಗೆ ಮಾಡುತ್ತಿಲ್ಲ, ಏಕೆಂದರೆ ಆಮೇಲೆ ನಮ್ಮೊಂದಿಗೆ ಮಾತುಕತೆ ನಡೆಸಲು ಅಲ್ಲಿ ಯಾರೂ ಉಳಿಯುವುದಿಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಇತ್ತೀಚೆಗೆ ನಡೆದ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತರಾದ ಬಳಿಕವೂ ಟ್ರಂಪ್ ಇರಾನ್ ಮೇಲಿನ ಒತ್ತಡವನ್ನು ಕಡಿಮೆ ಮಾಡಿಲ್ಲ. ನಾವು ಇರಾನ್ ಅನ್ನು ಆರ್ಥಿಕವಾಗಿ ಸಂಪೂರ್ಣವಾಗಿ ನಾಶಪಡಿಸಿದ್ದೇವೆ. ಅಲ್ಲಿ ಹಣದುಬ್ಬರ ಗಗನಕ್ಕೇರಿದೆ. ಈಗ ಅವರು ಅಮೆರಿಕ ಜೊತೆ ಒಪ್ಪಂದ ಮಾಡಿಕೊಳ್ಳಲು ಹತಾಶರಾಗಿದ್ದಾರೆ.

ನಾವು ಒಳ್ಳೆಯವರಾದ್ದರಿಂದ ಅವರಿಗೆ ಅಂತ್ಯಕ್ರಿಯೆ ಮುಗಿಸಲು ಒಂದು ವಾರ ಕಾಲಾವಕಾಶ ನೀಡಿದ್ದೇವೆ ಎಂದು ಟ್ರಂಪ್ ವ್ಯಂಗ್ಯವಾಡಿದ್ದಾರೆ. ಅಲ್ಲದೆ, ರಾಜತಾಂತ್ರಿಕ ಮಾತುಕತೆಗಳು ಯಶಸ್ವಿಯಾದರೆ ಇರಾನ್‌ಗೆ ಅಮೆರಿಕದ ರೈತರು ಆಹಾರ ಪೂರೈಸಬಹುದು ಎಂದೂ ಅವರು ಹೇಳಿದ್ದಾರೆ.

ಮತ್ತಷ್ಟು ಓದಿ: ಇರಾನ್ ಮನವಿ ಮಾಡಿದ್ದರಿಂದ ನಾಳೆ ದೋಹಾದಲ್ಲಿ ಮಾತುಕತೆ; ಅಮೆರಿಕ ಅಧ್ಯಕ್ಷ ಟ್ರಂಪ್ ಮಾಹಿತಿ

ಇರಾನ್ ತೀವ್ರ ಆಕ್ರೋಶ ಟ್ರಂಪ್ ಅವರ ಈ ಹೇಳಿಕೆಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅರ್ಮೇನಿಯಾದಲ್ಲಿರುವ ಇರಾನ್ ರಾಯಭಾರ ಕಚೇರಿಯು, ಅಮೆರಿಕ ಅಧ್ಯಕ್ಷರಿಗೆ ನಾಗರಿಕತೆ, ಇತಿಹಾಸ ಮತ್ತು ಗೌರವ ಯಾವುದೂ ಇಲ್ಲ ಎಂದು ಕಿಡಿಕಾರಿದೆ. ಇದೇ ವೇಳೆ ಇರಾನ್‌ನ ಮಿಲಿಟರಿ ಅಧಿಕಾರಿಗಳು ಅಮೆರಿಕ ಮತ್ತು ಇಸ್ರೇಲ್‌ಗೆ ಎಚ್ಚರಿಕೆ ನೀಡಿದ್ದು, ಯಾವುದೇ ರೀತಿಯ ಹೊಸ ಮಿಲಿಟರಿ ದಾಳಿ ಅಥವಾ ತಪ್ಪು ಲೆಕ್ಕಾಚಾರ ನಡೆದರೆ ಅದಕ್ಕೆ ತ್ವರಿತ ಮತ್ತು ಭೀಕರ ಪ್ರತಿಪ್ರಹಾರ ಎದುರಿಸಬೇಕಾಗುತ್ತದೆ ಎಂದಿದ್ದಾರೆ.

ಉದ್ವಿಗ್ನತೆ ನಡುವೆಯೂ ಮುಂದುವರೆದ ಮಾತುಕತೆ ಉಭಯ ದೇಶಗಳ ನಡುವೆ ಇಷ್ಟೆಲ್ಲಾ ಮಾತಿನ ಸಮರ ನಡೆಯುತ್ತಿದ್ದರೂ, ಕತಾರ್‌ನ ದೋಹಾದಲ್ಲಿ ಅಮೆರಿಕ ಮತ್ತು ಇರಾನ್ ಅಧಿಕಾರಿಗಳ ನಡುವೆ ಪರೋಕ್ಷ ಮಾತುಕತೆಗಳು ಮುಂದುವರೆದಿವೆ. ಸಮುದ್ರ ಭದ್ರತೆ ಮತ್ತು ಆರ್ಥಿಕ ವಿಷಯಗಳ ಕುರಿತಾದ ಚರ್ಚೆಯಲ್ಲಿ ಸ್ವಲ್ಪ ಪ್ರಗತಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಇರಾನ್‌ನ ಪರಮಾಣು ಕಾರ್ಯಕ್ರಮದ ಕುರಿತು ಇನ್ನೂ ಭಿನ್ನಾಭಿಪ್ರಾಯಗಳು ಜೀವಂತವಾಗಿದ್ದು, ಅಂತ್ಯಕ್ರಿಯೆಯ ನಂತರ ಮತ್ತೊಂದು ಸುತ್ತಿನ ಮಾತುಕತೆ ನಡೆಯುವ ಸಾಧ್ಯತೆ ಇದೆ. ರಾಜತಾಂತ್ರಿಕ ಮಾತುಕತೆಯ ಹಾದಿ ತೆರೆದಿದ್ದರೂ, ಇರಾನ್ ವಿರುದ್ಧ ಟ್ರಂಪ್ ಅವರ ಕಠಿಣ ನಿಲುವು ಮಾತ್ರ ಬದಲಾದಂತೆ ಕಾಣುತ್ತಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್