AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊನಾಲ್ಡ್ ಟ್ರಂಪ್​​ಗೆ ನೊಬೆಲ್​​​​ ಪ್ರಶಸ್ತಿ ಗ್ಯಾರಂಟಿ, ಪಾಕ್-ಅಫ್ಘಾನ್ ನಡುವೆ ಮಧ್ಯಸ್ಥಿಕೆಗೆ ಮುಂದಾದ ಅಮೆರಿಕ ಅಧ್ಯಕ್ಷ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ಧಗಳನ್ನು ನಿಲ್ಲಿಸಲು ತಾನು ಇಷ್ಟಪಡುತ್ತೇನೆ ಮತ್ತು ಅದಕ್ಕೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗಬೇಕು ಎಂದು ಹೇಳಿದ್ದಾರೆ. ಭಾರತ-ಪಾಕಿಸ್ತಾನ ಸಂಘರ್ಷಗಳನ್ನು ನಿಲ್ಲಿಸಿದ್ದೇನೆಂದು ಹೇಳಿಕೊಳ್ಳುವ ಅವರು, ಇದೀಗ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಗಳನ್ನು ಪರಿಹರಿಸಲು ಮುಂದಾಗಿದ್ದಾರೆ.

ಡೊನಾಲ್ಡ್ ಟ್ರಂಪ್​​ಗೆ ನೊಬೆಲ್​​​​ ಪ್ರಶಸ್ತಿ ಗ್ಯಾರಂಟಿ, ಪಾಕ್-ಅಫ್ಘಾನ್ ನಡುವೆ ಮಧ್ಯಸ್ಥಿಕೆಗೆ ಮುಂದಾದ ಅಮೆರಿಕ ಅಧ್ಯಕ್ಷ
ಡೊನಾಲ್ಡ್ ಟ್ರಂಪ್
ಅಕ್ಷಯ್​ ಪಲ್ಲಮಜಲು​​
|

Updated on: Oct 18, 2025 | 1:10 PM

Share

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​​ಗೆ (Donald Trump) ಯುದ್ಧ ನಿಲ್ಲಿಸುವುದೆಂದರೆ ತುಂಬಾ ಇಷ್ಟವಂತೆ. ಯಾವುದೇ ದೇಶ ಯುದ್ದ ಮಾಡಿದ್ರು ಅದನ್ನು ತಡೆಯುತ್ತೇನೆ ಎಂದು ಹೇಳಿದ್ದಾರೆ. ಈ ಹಿಂದೆ ಭಾರತ ಹಾಗೂ ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಎಲ್ಲ ಕಡೆ ಹೇಳಿಕೊಂಡು ಬಂದಿದ್ದರು, ಇಸ್ರೇಲ್, ರಷ್ಯಾ, ಉಕ್ರೇನ್​​ ಹೀಗೆ ಅನೇಕ ದೊಡ್ಡ ದೊಡ್ಡ ರಾಷ್ಟ್ರಗಳ ಯುದ್ಧ ನಿಲ್ಲಿಸಲು ಪ್ರಯತ್ನ ಇದೆ ಎಂದು ಹೇಳಿಕೊಂಡಿದ್ದಾರೆ, ಇದರ ಜತೆಗೆ ಯುದ್ಧ ನಿಲ್ಲಿಸಿದಕ್ಕೆ ನನಗೆ ನೊಬೆಲ್​​ ಶಾಂತಿ ಪ್ರಶಸ್ತಿ ನೀಡಬೇಕು ಎಂದೆಲ್ಲ ಹೇಳಿಕೊಂಡಿದ್ದರು, ಪಾಕ್​​ ಪ್ರಧಾನಿ ಕೂಡ ಇವರಿಗೆ ನೊಬೆಲ್​​​​​ ಪ್ರಶಸ್ತಿ ನೀಡಬೇಕು ಎಂದು ಡೊನಾಲ್ಡ್ ಟ್ರಂಪ್​​​​ ಮುಂದೆನೇ ಹೇಳಿದರು. ಇದೀಗ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಉದ್ವಿಗ್ನತೆ ಕಡಿಮೆ ಮಾಡಲು ಮುಂದಾಗಿದ್ದಾರೆ. ಯುದ್ಧವನ್ನು ಪರಿಹರಿಸಲು ಇಷ್ಟಪಡುತ್ತೇನೆ ಎಂದು ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಹೇಳಿದ್ದಾರೆ.

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಲೇ ಇದೆ, ಈಗಾಗಲೇ ಪಾಕಿಸ್ತಾನ ಅಫ್ಘಾನಿಸ್ತಾನದ ಮೇಲೆ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಕಾರವಾಗಿ ಅಫ್ಘಾನಿಸ್ತಾನ ಕೂಡ ಪಾಕ್​ ಮೇಲೆ ದಾಳಿಯನ್ನು ನಡೆಸಿತ್ತು. ಇದೀಗ ಮತ್ತೊಮ್ಮೆ ಪಾಕ್ ಸೇನೆಯು ಗಡಿ ಭಾಗದಲ್ಲಿ ದಾಳಿ ನಡೆಸಿದ್ದು, ಈ ದಾಳಿಯಿಂದಾಗಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಮೃತಪಟ್ಟಿದ್ದಾರೆ. ಇದರಿಂದ ಪಾಕ್​​ ಹಾಗೂ ಅಫ್ಘಾನಿಸ್ತಾನದ ಗಡಿಯಲ್ಲಿ ಯುದ್ಧ ವಾತಾವರಣ ಸೃಷ್ಟಿಯಾಗಿದ್ದು, ಇದನ್ನು ಪರಿಹಾರ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​​ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ. ಒಂದು ವೇಳೆ ಈ ಸಂಘರ್ಷವನ್ನು ಪರಿಹರಿಸಿದರೆ ಅವರು ಪರಿಹರಿಸುವ ಒಂಬತ್ತನೇ ಯುದ್ಧವಾಗಿರುತ್ತದೆ.

ಇನ್ನು ಮಾಧ್ಯಮಗಳ ಮುಂದೆ ಮಾತನಾಡಿ ಟ್ರಂಪ್, ಈ ಸಂಘರ್ಷವನ್ನು ಪರಿಹರಿಸುವುದು ಸುಲಭ, ಹಾಗಾಗಿ ಯಾವುದೇ ಯುದ್ಧ ನಡೆದರು, ಅದನ್ನು ಮೊದಲು ಅಮೆರಿಕ ಪರಿಹರಿಸಬೇಕು ಎಂದು ಹೇಳಿದ್ದಾರೆ. “ಪಾಕಿಸ್ತಾನ ದಾಳಿ ಮಾಡಿದೆಯೇ ಅಥವಾ ಅಫ್ಘಾನಿಸ್ತಾನದ ಮೇಲೆ ದಾಳಿ ನಡೆಯುತ್ತಿದೆ ಎಂದು ನನಗೆ ಅರ್ಥವಾಗಿದೆ. ಅದನ್ನು ಪರಿಹರಿಸುವುದು ನನಗೆ ಸುಲಭ.ಅದಕ್ಕೂ ಮೊದಲು ಅಮೆರಿಕದಲ್ಲಿ ಈ ಬಗ್ಗೆ ಚರ್ಚಿಸಬೇಕು, ಆದರೆ ಯುದ್ಧಗಳನ್ನು ಪರಿಹರಿಸಲು ನನಗೆ ಇಷ್ಟ, ಯಾವ ಕಾರಣಕ್ಕೆ ಎಂಬುದು ನಿಮಗೆ ಗೊತ್ತಿದೆ. ಜನರು ಸಾಯುವುದನ್ನು ತಡೆಯಲು ನಾನು ಇಷ್ಟಪಡುತ್ತೇನೆ ಮತ್ತು ನಾನು ಲಕ್ಷಾಂತರ ಜೀವಗಳನ್ನು ಉಳಿಸಿದ್ದೇನೆ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿನ್ನೆ ಪ್ರಧಾನಿ ಮೋದಿ- ಟ್ರಂಪ್ ನಡುವೆ ಫೋನ್ ಮಾತುಕತೆ ನಡೆದಿಲ್ಲ; ಅಮೆರಿಕ ಅಧ್ಯಕ್ಷರ ಹೇಳಿಕೆಗೆ ಭಾರತ ಸ್ಪಷ್ಟನೆ

ಮೂವರು ಅಫ್ಘಾನ್ ಕ್ರಿಕೆಟಿಗರ ಹತ್ಯೆ ಮಾಡಿದ ಪಾಕ್

ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಕಾಬೂಲ್‌ನಲ್ಲಿ ವೈಮಾನಿಕ ದಾಳಿ ನಡೆಸಿದ ನಂತರ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಅಫ್ಘಾನಿಸ್ತಾನವು ಟಿಟಿಪಿ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದೆ ಎಂದು ಪಾಕಿಸ್ತಾನ ನಿರಂತರವಾಗಿ ಆರೋಪಿಸುತ್ತಿದೆ, ಆದರೆ ಈ ಆರೋಪವನ್ನು ಅಫ್ಘಾನಿಸ್ತಾನ ನಿರಾಕರಿಸಿದೆ. ಇನ್ನು ಪಾಕ್​​​ ದಾಳಿಗೆ ಪ್ರತಿಯಾಗಿ ಅಫ್ಘಾನಿಸ್ತಾನ ಕೂಡ ದಾಳಿಯನ್ನು ನಡೆಸಿದೆ. ಡುರಾಂಡ್ ರೇಖೆಯ ಉದ್ದಕ್ಕೂ ಹಲವಾರು ಪಾಕಿಸ್ತಾನಿ ಮಿಲಿಟರಿ ಪೋಸ್ಟ್‌ಗಳನ್ನು ವಶಪಡಿಸಿಕೊಂಡಿತು. ಹಾಗೂ ಪಾಕ್​​​ ಸೈನಿಕರನ್ನು ಹತ್ಯೆ ಮಾಡಿದೆ. ಇದರ ನಡುವೆ ಪಾಕಿಸ್ತಾನ ಸರ್ಕಾರವು 48 ಗಂಟೆಗಳ ಕದನ ವಿರಾಮಕ್ಕೆ ಕರೆ ನೀಡಿತ್ತು. ಶುಕ್ರವಾರ ಕದನ ವಿರಾಮ ಮುಕ್ತಾಯಗೊಂಡ, ಇದೀಗ ಮತ್ತೆ ಪಾಕಿಸ್ತಾನಿ ಪಡೆಗಳು ಮತ್ತೊಮ್ಮೆ ಅಫ್ಘಾನಿಸ್ತಾನದ ಮೇಲೆ ದಾಳಿ ಮಾಡಿ, ಮೂವರು ಅಫ್ಘಾನ್ ಕ್ರಿಕೆಟಿಗರು ಸೇರಿದಂತೆ ಎಂಟು ಜನರನ್ನು ಹತ್ಯೆ ಮಾಡಿದೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!