ನಮ್ಮ ಸೈನಿಕರ ದೊಡ್ಡ ಪಡೆ ಸಾಗುತ್ತಿದೆ, ಇರಾನ್​ಗೆ ಹೊಸ ಎಚ್ಚರಿಕೆ ಕೊಟ್ಟ ಡೊನಾಲ್ಡ್​ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಬೃಹತ್ ಯುಎಸ್ ಸೇನೆಯನ್ನು ಇರಾನ್ ಕಡೆಗೆ ನಿಯೋಜಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪ್ರತಿಭಟನಾಕಾರರ ಹತ್ಯೆಗೆ ಸಂಬಂಧಿಸಿದಂತೆ ಟ್ರಂಪ್ ಇರಾನ್ ವಿರುದ್ಧ ಮಿಲಿಟರಿ ಕ್ರಮದ ಬೆದರಿಕೆ ಹಾಕಿದ್ದಾರೆ. ಇರಾನ್ ಸಹ ಇದಕ್ಕೆ ಕಠಿಣ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಬೆದರಿಕೆಯನ್ನು ಎದುರಿಸಲು ಸಿದ್ಧವೆಂದು ಘೋಷಿಸಿದೆ. ಇದು ಅಮೆರಿಕಾ ಮತ್ತು ಇರಾನ್ ನಡುವೆ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ನಮ್ಮ ಸೈನಿಕರ ದೊಡ್ಡ ಪಡೆ ಸಾಗುತ್ತಿದೆ, ಇರಾನ್​ಗೆ ಹೊಸ ಎಚ್ಚರಿಕೆ ಕೊಟ್ಟ ಡೊನಾಲ್ಡ್​ ಟ್ರಂಪ್
ಡೊನಾಲ್ಡ್​ ಟ್ರಂಪ್

Updated on: Jan 23, 2026 | 7:43 AM

ವಾಷಿಂಗ್ಟನ್, ಜನವರಿ 23: ಇರಾನ್​ ಕಡೆಗೆ ನಮ್ಮ ಸೈನಿಕರ ದೊಡ್ಡ ಪಡೆ ಸಾಗುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಇರಾನ್​ಗೆ ಹೊಸ ಎಚ್ಚರಿಕೆ ನೀಡಿದ್ದಾರೆ. ಅಮೆರಿಕವು ಈ ಪ್ರದೇಶಕ್ಕೆ ಬೃಹತ್ ನೌಕಾಪಡೆಯನ್ನು ನಿಯೋಜಿಸಿದೆ, ಆದರೆ ಅದನ್ನು ಬಳಸುವ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಇತ್ತೀಚಿನ ಅಶಾಂತಿಯ ಸಂದರ್ಭದಲ್ಲಿ ಪ್ರತಿಭಟನಾಕಾರರ ಹತ್ಯೆಗೆ ಸಂಬಂಧಿಸಿದಂತೆ ಇರಾನ್ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳುವುದಾಗಿ ಟ್ರಂಪ್ ಪದೇ ಪದೇ ಬೆದರಿಕೆ ಹಾಕಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಪ್ರತಿಭಟನೆಗಳು ಕಡಿಮೆಯಾಗುತ್ತಿದ್ದಂತೆ ಅವರ ಸ್ವರ ಮೃದುವಾಗಿದೆ.
ನೂರಾರು ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವ ಯೋಜನೆಯನ್ನು ಇರಾನ್ ಅಧಿಕಾರಿಗಳು ರದ್ದುಗೊಳಿಸಲು ವಾಷಿಂಗ್ಟನ್ ಒತ್ತಡ ಕಾರಣ ಎಂಬ ಹೇಳಿಕೆಯನ್ನು ಅಮೆರಿಕ ಅಧ್ಯಕ್ಷರು ಪುನರಾವರ್ತಿಸಿದ್ದಾರೆ.

ಆರ್ಥಿಕ ಸಂಕಷ್ಟದ ಕುರಿತು ಡಿಸೆಂಬರ್ ಅಂತ್ಯದಲ್ಲಿ ಇರಾನ್‌ನಲ್ಲಿ ಪ್ರತಿಭಟನೆಗಳು ಪ್ರಾರಂಭವಾದವು, ನಂತರ ಅದು ರಾಷ್ಟ್ರವ್ಯಾಪಿ ಹರಡಿತ್ತು. ಎರಡು ದಿನಗಳ ಹಿಂದಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್​ಗೆ ಬಲವಾದ ಎಚ್ಚರಿಕೆ ನೀಡಿದ್ದರು. ಇರಾನ್ ತನ್ನನ್ನು ಕೊಲ್ಲಲು ಪ್ರಯತ್ನಿಸಿದರೆ, ಅಮೆರಿಕ ಇರಾನ್ ಅನ್ನು ವಿಶ್ವ ಭೂಪಟದಿಂದ ಅಳಿಸಿಹಾಕುತ್ತದೆ ಎಂದು ಡ್ರಂಪ್ ಹೇಳಿದ್ದಾರೆ.

ನ್ಯೂಸ್ ನೇಷನ್ ನ ‘ಕೇಟೀ ಪಾವ್ಲಿಚ್ ಟುನೈಟ್’ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದಾರೆ.ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿರುವ ಸಮಯದಲ್ಲಿ ಟ್ರಂಪ್ ಅವರ ಈ ಹೇಳಿಕೆ ಬಂದಿದೆ.
ಟ್ರಂಪ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ, ಇರಾನ್ ಮಿಲಿಟರಿ ವಕ್ತಾರ ಜನರಲ್ ಅಬುಲ್ ಫಜಲ್ ಶೇಕರ್ಚಿ, ನಮ್ಮ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಕಡೆಗೆ ಯಾರಾದರೂ ಕೆಟ್ಟ ಉದ್ದೇಶದಿಂದ ಕೈ ಚಾಚಿದರೆ, ನಾವು ಆ ಕೈಯನ್ನು ಕತ್ತರಿಸುವುದಲ್ಲದೆ, ಅವರ ಇಡೀ ದೇಶವನ್ನೇ ಸುಟ್ಟು ಹಾಕುತ್ತೇವೆ ಎಂದು ಟ್ರಂಪ್‌ಗೆ ತಿಳಿದಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ನನ್ನನ್ನು ಕೊಲೆ ಮಾಡಿದ್ರೆ, ಇರಾನ್​ ಅನ್ನು ವಿಶ್ವದ ಭೂಪಟದಿಂದಲೇ ಅಮೆರಿಕ ಅಳಿಸಿ ಹಾಕುತ್ತೆ: ಟ್ರಂಪ್

ಖಮೇನಿಯವರ ಸುಮಾರು 40 ವರ್ಷಗಳ ಆಡಳಿತವನ್ನು ಕೊನೆಗೊಳಿಸುವ ಬಗ್ಗೆ ಮಾತನಾಡಿದ ಟ್ರಂಪ್ ಅವರ ಹೇಳಿಕೆಯ ನಂತರ ಈ ಎಚ್ಚರಿಕೆ ಬಂದಿದೆ.ಟ್ರಂಪ್ ಈ ಹಿಂದೆ ಇರಾನ್‌ಗೆ ಎಚ್ಚರಿಕೆ ನೀಡಿದ್ದರು ಮತ್ತು ಇರಾನ್ ತನ್ನ ವಿರುದ್ಧ ಯಾವುದೇ ಹತ್ಯೆಗೆ ಸಂಚು ರೂಪಿಸಿದರೆ ಇರಾನ್ ಅನ್ನು ಸಂಪೂರ್ಣವಾಗಿ ನಾಶಮಾಡುವಂತೆ ತಮ್ಮ ಸಲಹೆಗಾರರಿಗೆ ಸೂಚಿಸಿದ್ದರು.

ಖಮೇನಿ ಅವರನ್ನು ಅಸ್ವಸ್ಥ ವ್ಯಕ್ತಿ ಎಂದು ಬಣ್ಣಿಸಿರುವ ಅವರು, ಅವರು ತನ್ನ ದೇಶವನ್ನು ಸರಿಯಾಗಿ ನಡೆಸಬೇಕು ಮತ್ತು ಜನರನ್ನು ಕೊಲ್ಲುವುದನ್ನು ನಿಲ್ಲಿಸಬೇಕು, ಇರಾನ್‌ಗೆ ಹೊಸ ನಾಯಕತ್ವ ಬೇಕು ಎಂದು ಹೇಳಿದ್ದಾರೆ. ಡಿಸೆಂಬರ್ 28 ರಂದು ಪ್ರಾರಂಭವಾದ ಪ್ರತಿಭಟನೆಗಳ ನಂತರ ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಇರಾನ್‌ನ ಕಳಪೆ ಆರ್ಥಿಕತೆಯ ವಿರುದ್ಧ ಈ ಪ್ರತಿಭಟನೆಗಳನ್ನು ಪ್ರಾರಂಭಿಸಲಾಯಿತು. ತಿಭಟನೆಗಳ ನಡುವೆ ಅಮೆರಿಕದ ಮಿಲಿಟರಿಯೂ ಸಕ್ರಿಯವಾಗಿದ್ದು, ಇದು ಎರಡೂ ದೇಶಗಳ ನಡುವಿನ ಉದ್ವಿಗ್ನತೆಯ ನಿರಂತರ ಏರಿಕೆಗೆ ಕಾರಣವಾಗಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ