ನನ್ನನ್ನು ಅಮೆರಿಕ ಅಧ್ಯಕ್ಷನನ್ನಾಗಿ ಆಯ್ಕೆ ಮಾಡದಿದ್ದರೆ ರಕ್ತಪಾತವಾಗುತ್ತದೆ: ಡೊನಾಲ್ಡ್​ ಟ್ರಂಪ್

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಅವರನ್ನು ಆಯ್ಕೆ ಮಾಡದಿದ್ದರೆ, ದೇಶದಲ್ಲಿ ರಕ್ತಪಾತ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನನ್ನನ್ನು ಅಮೆರಿಕ ಅಧ್ಯಕ್ಷನನ್ನಾಗಿ ಆಯ್ಕೆ ಮಾಡದಿದ್ದರೆ ರಕ್ತಪಾತವಾಗುತ್ತದೆ: ಡೊನಾಲ್ಡ್​ ಟ್ರಂಪ್
ಡೊನಾಲ್ಡ್​ ಟ್ರಂಪ್​
Follow us
ನಯನಾ ರಾಜೀವ್
|

Updated on: Mar 17, 2024 | 8:26 AM

ನನ್ನನ್ನು ಅಮೆರಿಕ ಅಧ್ಯಕ್ಷನನ್ನಾಗಿ ಆಯ್ಕೆ ಮಾಡದಿದ್ದರೆ ರಕ್ತಪಾತವಾಗುವುದು ಎಂದು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಎಚ್ಚರಿಕೆ ನೀಡಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯ ಒಳಾರ್ಥವೇನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ವಾಸ್ತವವಾಗಿ, ಅವರು ಈ ಎಚ್ಚರಿಕೆಯನ್ನು ನೀಡಿದ ಸಮಯದಲ್ಲಿ, ಆಟೋಮೊಬೈಲ್ ಉದ್ಯಮದ ಬಗ್ಗೆ ಮಾತನಾಡುತ್ತಿದ್ದರು.

ತಾವು ಮರು ಆಯ್ಕೆಯಾದರೆ ಚೀನಾವು ಯುಎಸ್​ನಿಂದ ಆಮದು ಮಾಡಿಕೊಳ್ಳುವ ಯಾವುದೇ ವಾಹನಗಳನ್ನು ಮಾರಾಟ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯು ಅಮೆರಿಕ ಇತಿಹಾಸದಲ್ಲಿ ಅತ್ಯಂತ ಪ್ರಮುಖ ದಿನ ಎಂದು ಹೇಳಿದರು. ರಿಪಬ್ಲಿಕನ್ ಅಭ್ಯರ್ಥಿಯಾಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡ ಕೆಲವು ದಿನಗಳ ನಂತರ ಈ ಹೇಳಿಕೆ ಹೊರ ಬಂದಿದ್ದು, ಒಂದೊಮ್ಮೆ ನಾನು ಅಧ್ಯಕ್ಷನಾಗಿ ನೇಮಕವಾಗದಿದ್ದರೆ ಇಲ್ಲಿ ರಕ್ತಪಾತ ಖಚಿತ ಎಂದಿದ್ದಾರೆ.

ಮತ್ತಷ್ಟು ಓದಿ: Presidents’ Day: ಅಮೆರಿಕದ ಅತೀ ಕೆಟ್ಟ ನಾಯಕ ಡೊನಾಲ್ಡ್ ಟ್ರಂಪ್, ಪಟ್ಟಿಯಲ್ಲಿ ಬೈಡನ್​​ಗೆ 14ನೇ ಸ್ಥಾನ

ಕಳೆದ ಬಾರಿಗಿಂತ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಬಹುದು ಎಂದು ಟ್ರಂಪ್ ಹೇಳಿದ್ದಾರೆ. ದೇಶಕ್ಕೆ ನನ್ನ ಅವಶ್ಯಕತೆ ಇದೆ. ನಾನು ಗೆಲ್ಲದಿದ್ದರೆ ದೇಶದಲ್ಲಿ ರಕ್ತದ ಕೋಡಿಯೇ ಹರಿಯುತ್ತದೆ ಎಂದರು.

ಭವಿಷ್ಯದಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಬೆಂಬಲಿಸುವುದಿಲ್ಲ ಎಂದು ಮೈಕ್ ಪೆನ್ಸ್ ಘೋಷಿಸಿದರು. ಏಕೆಂದರೆ ಡೊನಾಲ್ಡ್ ಟ್ರಂಪ್ ಸ್ಪಷ್ಟವಾಗಿಲ್ಲದ ಕಾರ್ಯಸೂಚಿಯೊಂದಿಗೆ ಮುಂದುವರಿಯಲು ಬಯಸುತ್ತಾರೆ. ಕಳೆದ ನಾಲ್ಕರಲ್ಲಿ ನಾವು ಸಂಪ್ರದಾಯವಾದಿ ಅಜೆಂಡಾಕ್ಕೆ ವಿರುದ್ಧವಾಗಿ ಆಡಳಿತ ನಡೆಸಿದ್ದಾಗಿದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ