AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕೊರಿಯಾದಲ್ಲಿ ಚೀನಾ ಅಧ್ಯಕ್ಷ ಜಿನ್​​ಪಿಂಗ್​​ರನ್ನು ಭೇಟಿಯಾಗಲಿದ್ದಾರೆ ಅಮೆರಿಕ ಅಧ್ಯಕ್ಷ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಅಕ್ಟೋಬರ್​​ನಲ್ಲಿ ದಕ್ಷಿಣ ಕೊರಿಯಾಗೆ ಭೇಟಿ ನೀಡಲಿದ್ದು ಅಲ್ಲಿ ಚೀನಾ ಅಧ್ಯಕ್ಷ ಷಿ ಜಿನ್​​ಪಿಂಗ್ ಅವರನ್ನು  ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಟ್ರಂಪ್ ಏಷ್ಯಾ ಪೆಸಿಫಿಕ್ ಆರ್ಥಿಕ ಸಹಕಾರ (APEC) ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಟ್ರಂಪ್ ಮತ್ತು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ನಡುವಿನ ದ್ವಿಪಕ್ಷೀಯ ಮಾತುಕತೆಗಳು ಕೂಡ ನಡೆಯಲಿವೆ ಎನ್ನಲಾಗಿದೆ.

ದಕ್ಷಿಣ ಕೊರಿಯಾದಲ್ಲಿ ಚೀನಾ ಅಧ್ಯಕ್ಷ ಜಿನ್​​ಪಿಂಗ್​​ರನ್ನು ಭೇಟಿಯಾಗಲಿದ್ದಾರೆ ಅಮೆರಿಕ ಅಧ್ಯಕ್ಷ ಟ್ರಂಪ್
ಟ್ರಂಪ್-ಷಿ
ನಯನಾ ರಾಜೀವ್
|

Updated on: Sep 07, 2025 | 9:15 AM

Share

ವಾಷಿಂಗ್ಟನ್, ಸೆಪ್ಟೆಂಬರ್ 07: ಅಮೆರಿಕ ಅಧ್ಯಕ್ಷ ಡೊನಾಲ್ಡ್ಟ್ರಂಪ್(Donald Trump) ಅಕ್ಟೋಬರ್​​ನಲ್ಲಿ ದಕ್ಷಿಣ ಕೊರಿಯಾಗೆ ಭೇಟಿ ನೀಡಲಿದ್ದು ಅಲ್ಲಿ ಚೀನಾ ಅಧ್ಯಕ್ಷ ಷಿ ಜಿನ್​​ಪಿಂಗ್ ಅವರನ್ನು  ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಟ್ರಂಪ್ ಏಷ್ಯಾ ಪೆಸಿಫಿಕ್ ಆರ್ಥಿಕ ಸಹಕಾರ (APEC) ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಟ್ರಂಪ್ ಮತ್ತು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ನಡುವಿನ ದ್ವಿಪಕ್ಷೀಯ ಮಾತುಕತೆಗಳು ಕೂಡ ನಡೆಯಲಿವೆ ಎನ್ನಲಾಗಿದೆ.

APEC ಶೃಂಗಸಭೆ ಯಾವಾಗ ನಡೆಯಲಿದೆ?

APEC ಶೃಂಗಸಭೆಯು ದಕ್ಷಿಣ ಕೊರಿಯಾದ ಜಿಯೊಂಗ್ಜು ನಗರದಲ್ಲಿ ನಡೆಯಲಿದೆ. ಈ ಸಮ್ಮೇಳನದ ನಿಖರವಾದ ದಿನಾಂಕಗಳನ್ನು ಇನ್ನೂ ಘೋಷಿಸಲಾಗಿಲ್ಲ. ಆದರೆ ಈ ಶೃಂಗಸಭೆಯು ಅಕ್ಟೋಬರ್ ಅಂತ್ಯದಲ್ಲಿ ಅಥವಾ ನವೆಂಬರ್ ಆರಂಭದಲ್ಲಿ ನಡೆಯಬಹುದು ಎಂದು ಊಹಿಸಲಾಗಿದೆ. ಈ ಸಮಯದಲ್ಲಿ, ಟ್ರಂಪ್ ಮತ್ತು ಜಿನ್‌ಪಿಂಗ್ ಕೂಡ ಮುಖಾಮುಖಿಯಾಗಲಿದ್ದಾರೆ.

ಟ್ರಂಪ್ ಮತ್ತು ಷಿ ಜಿನ್‌ಪಿಂಗ್ ನಡುವೆ ಗಂಭೀರ ವಿಷಯಗಳನ್ನು ಚರ್ಚಿಸಬಹುದು. ಕಳೆದ ತಿಂಗಳು ಕೂಡ ಟ್ರಂಪ್ ಅವರು ಷಿ ಜಿನ್‌ಪಿಂಗ್ ಅವರೊಂದಿಗೆ ಫೋನ್ ಸಂಭಾಷಣೆ ನಡೆಸಿದ್ದರು. ಈ ಸಮಯದಲ್ಲಿ, ಷಿ ಜಿನ್‌ಪಿಂಗ್ ಅವರು ಟ್ರಂಪ್ ಮತ್ತು ಅವರ ಪತ್ನಿಯನ್ನು ಚೀನಾಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು.

ಮತ್ತಷ್ಟು ಓದಿ:

ಪ್ರಧಾನಿ ಮೋದಿ ಟ್ರಂಪ್​ಗೆ ಬಹಳ ಪ್ರಾಮುಖ್ಯತೆ ನೀಡಿದ್ದಾರೆ; ಅಮೆರಿಕ ತನ್ನ ರಾಗ ಬದಲಾಯಿಸುತ್ತಿದ್ದಂತೆ ವಿದೇಶಾಂಗ ಸಚಿವ ಜೈಶಂಕರ್ ಪ್ರತಿಕ್ರಿಯೆ

ದಕ್ಷಿಣ ಕೊರಿಯಾ ಪ್ರವಾಸದ ಸಮಯದಲ್ಲಿ ಟ್ರಂಪ್ ಬೇರೆ ಯಾವುದೇ ದೇಶಕ್ಕೆ ಭೇಟಿ ನೀಡುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ದಕ್ಷಿಣ ಕೊರಿಯಾ ಪ್ರವಾಸದ ಸಮಯದಲ್ಲಿ ಟ್ರಂಪ್ ಮತ್ತೊಮ್ಮೆ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರನ್ನು ಭೇಟಿ ಮಾಡಬಹುದು ಎನ್ನಲಾಗಿದೆ.

ದಕ್ಷಿಣ ಕೊರಿಯಾದ ಅಧ್ಯಕ್ಷ ಲೀ ಜೇ ಮ್ಯುಂಗ್ ಕಳೆದ ವಾರ APEC ಶೃಂಗಸಭೆಯಲ್ಲಿ ಭಾಗವಹಿಸಲು ಟ್ರಂಪ್ ಅವರನ್ನು ಆಹ್ವಾನಿಸಿದ್ದರು. ಈ ಸಂದರ್ಭದಲ್ಲಿ, ಟ್ರಂಪ್ ಆಹ್ವಾನವನ್ನು ಸ್ವೀಕರಿಸಿ ದಕ್ಷಿಣ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರನ್ನು ಭೇಟಿ ಮಾಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು.

ಸೆಪ್ಟೆಂಬರ್ 3 ರಂದು ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಯಿತು. ಇತ್ತೀಚೆಗೆ, ಚೀನಾದ ಟಿಯಾಂಜಿನ್‌ನಲ್ಲಿ ನಡೆದ SCO ಶೃಂಗಸಭೆಯಲ್ಲಿ ಷಿ ಜಿನ್‌ಪಿಂಗ್, ಕಿಮ್ ಜಾಂಗ್ ಉನ್, ಪುಟಿನ್ ಮತ್ತು ನರೇಂದ್ರ ಮೋದಿ ಭೇಟಿಯಾಗಿದ್ದರು.

ನಾವು ಭಾರತ ಮತ್ತು ರಷ್ಯಾವನ್ನು ಕಳೆದುಕೊಂಡಂತೆ ತೋರುತ್ತಿದೆ, ಅವರು ಈಗ ಚೀನಾದ ಜತೆಗೂ ಹೋಗಿದ್ದಾರೆ ಎಂದು ಟ್ರಂಪ್ ಬರೆದಿದ್ದರು. ಆದರೆ, ಮರುದಿನವೇ ಟ್ರಂಪ್ ಭಾರತದೊಂದಿಗಿನ ಸಂಬಂಧವನ್ನು ವಿಶೇಷವೆಂದು ಬಣ್ಣಿಸಿ, ತಾವು ಮತ್ತು ಪ್ರಧಾನಿ ಮೋದಿ ಒಳ್ಳೆಯ ಸ್ನೇಹಿತರು ಎಂದು ಹೇಳಿದ್ದರು. ಇದಕ್ಕೆ ಮೋದಿ ಕೂಡ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!