AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಗತಿಕ ಮಾರುಕಟ್ಟೆಯಲ್ಲಿ ಮತ್ತೊಂದು ವ್ಯಾಪಾರ ಯುದ್ಧ, ಟ್ರಂಪ್ ಎಚ್ಚರಿಕೆ ಕೊಟ್ಟಿದ್ದು ಯಾರಿಗೆ ಗೊತ್ತಾ?

ಡಿಜಿಟಲ್ ಸೇವಾ ತೆರಿಗೆ ವಿಧಿಸಲು ಮುಂದಾಗಿರುವ ಯುರೋಪಿಯನ್ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಟ್ರಂಪ್ ತೀವ್ರ ಆರ್ಥಿಕ ಎಚ್ಚರಿಕೆ ನೀಡಿದ್ದಾರೆ. ಅಮೆರಿಕನ್ ಕಂಪನಿಗಳಿಗೆ ತೆರಿಗೆ ವಿಧಿಸಿದರೆ, ಆ ದೇಶದ ಸರಕುಗಳ ಮೇಲೆ 100% ಆಮದು ಸುಂಕ ವಿಧಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದು ಜಾಗತಿಕ ಮಾರುಕಟ್ಟೆಯಲ್ಲಿ ಮತ್ತೊಂದು ಸುತ್ತಿನ ವ್ಯಾಪಾರ ಯುದ್ಧಕ್ಕೆ ಕಾರಣವಾಗಿ, ವಸ್ತುಗಳ ಬೆಲೆ ಏರಿಕೆಗೆ ದಾರಿ ಮಾಡಿಕೊಡಬಹುದು.

ಜಾಗತಿಕ ಮಾರುಕಟ್ಟೆಯಲ್ಲಿ ಮತ್ತೊಂದು ವ್ಯಾಪಾರ ಯುದ್ಧ, ಟ್ರಂಪ್ ಎಚ್ಚರಿಕೆ ಕೊಟ್ಟಿದ್ದು ಯಾರಿಗೆ ಗೊತ್ತಾ?
ಡೊನಾಲ್ಡ್​ ಟ್ರಂಪ್
ನಯನಾ ರಾಜೀವ್
|

Updated on: Jun 27, 2026 | 9:40 AM

Share

ವಾಷಿಂಗ್ಟನ್, ಜೂನ್ 27: ಗೂಗಲ್, ಮೆಟಾ, ಅಮೆಜಾನ್‌ನಂತಹ ಅಮೆರಿಕದ ದೈತ್ಯ ತಂತ್ರಜ್ಞಾನ ಕಂಪನಿಗಳನ್ನು ಗುರಿಯಾಗಿಸಿಕೊಂಡು ಹೊಸ ‘ಡಿಜಿಟಲ್ ಸೇವಾ ತೆರಿಗೆ’ (Digital Services Tax) ವಿಧಿಸಲು ಮುಂದಾಗಿರುವ ಯುರೋಪಿಯನ್ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಆರ್ಥಿಕ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಅಮೆರಿಕನ್ ಕಂಪನಿಗಳಿಗೆ ತೆರಿಗೆ ವಿಧಿಸುವ ಯಾವುದೇ ದೇಶದ ಸರಕುಗಳ ಮೇಲೆ ವಾಷಿಂಗ್ಟನ್ ತಕ್ಷಣವೇ ಬರೋಬ್ಬರಿ ಶೇ. 100 ರಷ್ಟು ಆಮದು ಸುಂಕ ವಿಧಿಸಲಿದೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಟ್ರಂಪ್ ಆರ್ಭಟ ಯುರೋಪಿಯನ್ ರಾಷ್ಟ್ರಗಳು ಅಮೆರಿಕದ ಕಂಪನಿಗಳ ಮೇಲೆ ತೆರಿಗೆಗಳನ್ನು ಪರಿಚಯಿಸಲು ಸಜ್ಜಾಗುತ್ತಿರುವುದನ್ನು ತೀವ್ರವಾಗಿ ಟೀಕಿಸಿರುವ ಟ್ರಂಪ್, ತಮ್ಮ ಪೋಸ್ಟ್‌ನಲ್ಲಿ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಯಾವ ದೇಶವಾದರೂ ನಮ್ಮ ಕಂಪನಿಗಳಿಗೆ ಡಿಜಿಟಲ್ ತೆರಿಗೆ ವಿಧಿಸಿದರೆ, ಆ ದೇಶದಿಂದ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಕ್ಕೆ ರಫ್ತಾಗುವ ಪ್ರತಿಯೊಂದು ಸರಕಿನ ಮೇಲೂ ತಕ್ಷಣವೇ ಶೇ. 100 ರಷ್ಟು ಸುಂಕ ಹೇರಲಾಗುವುದು. ಈ ಹೊಸ ಕಟ್ಟುನಿಟ್ಟಿನ ನೀತಿಯು ಈ ಹಿಂದೆ ಮಾಡಿಕೊಳ್ಳಲಾದ ಯಾವುದೇ ವ್ಯಾಪಾರ ಒಪ್ಪಂದಗಳನ್ನು ಅತಿಕ್ರಮಿಸಿ ಜಾರಿಗೆ ಬರಲಿದೆ.

ಇತ್ತೀಚಿನ ದಿನಗಳಲ್ಲಿ ಯುರೋಪ್‌ನ ಹಲವು ದೇಶಗಳು ತಮ್ಮ ಮಾರುಕಟ್ಟೆಯಲ್ಲಿ ಆನ್‌ಲೈನ್ ಜಾಹೀರಾತು, ಇಂಟರ್ನೆಟ್ ಸೇವೆಗಳು ಹಾಗೂ ಡಿಜಿಟಲ್ ಮಾರ್ಕೆಟ್‌ಗಳ ಮೂಲಕ ಭಾರಿ ಆದಾಯ ಗಳಿಸುವ ಬಹುರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಗಳಿಂದ ಹೆಚ್ಚಿನ ತೆರಿಗೆ ವಸೂಲಿ ಮಾಡಲು ಹೊಸ ನಿಯಮಗಳನ್ನು ರೂಪಿಸುತ್ತಿವೆ.

ಮತ್ತಷ್ಟು ಓದಿ: ನನ್ನೊಂದಿಗೆ ಫ್ರೆಂಡ್ ಆಗಲು ಮೆಲೋನಿ ಹಾತೊರೆಯುತ್ತಿದ್ದಾರೆ! ಮತ್ತೆ ಹಳೇ ರಾಗ ಹಾಡಿದ ಟ್ರಂಪ್

ಈ ಡಿಜಿಟಲ್ ತೆರಿಗೆಗಳ ವ್ಯಾಪ್ತಿಗೆ ಬರುವ ಬಹುತೇಕ ಎಲ್ಲಾ ಪ್ರಮುಖ ಕಂಪನಿಗಳು ಅಮೆರಿಕ ಮೂಲದ ಸಂಸ್ಥೆಗಳೇ ಆಗಿವೆ. ಹೀಗಾಗಿ ಈ ಹೊಸ ತೆರಿಗೆಗಳು ಕೇವಲ ಅಮೆರಿಕದ ತಂತ್ರಜ್ಞಾನ ದೈತ್ಯರನ್ನು ಮಾತ್ರ ಅನ್ಯಾಯವಾಗಿ ಮತ್ತು ಅಸಮಾನವಾಗಿ ಗುರಿಯಾಗಿಸಿಕೊಂಡಿವೆ ಎಂಬುದು ಟ್ರಂಪ್​ ವಾದವಾಗಿದೆ.

ಇಡೀ ವಿಶ್ವದ ಆರ್ಥಿಕತೆಗೆ ಹೊಸ ತಲ್ಲಣ ಸದ್ಯ ಜಗತ್ತಿನಲ್ಲಿ ಚಾಲ್ತಿಯಲ್ಲಿರುವ ಹಳೆಯ ಅಂತರರಾಷ್ಟ್ರೀಯ ತೆರಿಗೆ ನಿಯಮಗಳು ಇಂದಿನ ಆಧುನಿಕ ಡಿಜಿಟಲ್ ಆರ್ಥಿಕತೆಗೆ ಹೊಂದಿಕೆಯಾಗುತ್ತಿಲ್ಲ. ಜಾಗತಿಕ ತಂತ್ರಜ್ಞಾನ ಸಂಸ್ಥೆಗಳು ಸ್ಥಳೀಯವಾಗಿ ನ್ಯಾಯಯುತ ತೆರಿಗೆಯನ್ನು ಪಾವತಿಸುವುದನ್ನು ಖಚಿತಪಡಿಸಿಕೊಳ್ಳಲು ಈ ಹೊಸ ನಿಯಮಗಳು ಅತ್ಯಗತ್ಯ ಎಂದು ಯುರೋಪಿಯನ್ ಸರ್ಕಾರಗಳು ವಾದಿಸುತ್ತಿವೆ.

ಟ್ರಂಪ್ ಅವರ ಈ ಇತ್ತೀಚಿನ ಶೇ. 100 ರಷ್ಟು ಸುಂಕದ ಬೆದರಿಕೆಯು ಅಮೆರಿಕ ಮತ್ತು ಯುರೋಪ್ ನಡುವೆ ಮತ್ತೊಂದು ಸುತ್ತಿನ ಭೀಕರ ಆರ್ಥಿಕ ಮತ್ತು ವ್ಯಾಪಾರ ಉದ್ವಿಗ್ನತೆಗೆ ಕಾರಣವಾಗುವ ಎಲ್ಲಾ ಲಕ್ಷಣಗಳನ್ನು ಎದ್ದು ಕಾಣಿಸುತ್ತಿದೆ. ಒಂದು ವೇಳೆ ಯುರೋಪ್ ರಾಷ್ಟ್ರಗಳು ಈ ತೆರಿಗೆಯನ್ನು ಜಾರಿಗೊಳಿಸಿ, ಅಮೆರಿಕ ಸುಂಕ ವಿಧಿಸಿದರೆ ಜಾಗತಿಕ ಮಾರುಕಟ್ಟೆಯಲ್ಲಿ ವಸ್ತುಗಳ ಬೆಲೆ ಗಗನಕ್ಕೇರಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ