AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್ ಸಂಧಾನ ಯಶಸ್ವಿ: ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಶಾಂತಿ ಒಪ್ಪಂದ, ಮಿಲಿಟರಿ ಕಾರ್ಯಾಚರಣೆ ಸ್ಥಗಿತ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯಶಸ್ವಿ ಸಂಧಾನದಿಂದಾಗಿ ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಶಾಂತಿ ಒಪ್ಪಂದ ಏರ್ಪಟ್ಟಿದೆ. ಇಸ್ರೇಲ್ ಲೆಬನಾನ್‌ನಿಂದ ಸೇನೆ ಹಿಂಪಡೆಯಲು, ಹಿಜ್ಬುಲ್ಲಾ ದಾಳಿ ನಿಲ್ಲಿಸಲು ಒಪ್ಪಿವೆ. ಈ ಮಹತ್ವದ ಬೆಳವಣಿಗೆ ಪಶ್ಚಿಮ ಏಷ್ಯಾದಲ್ಲಿ ದೀರ್ಘಕಾಲದ ಬಿಕ್ಕಟ್ಟಿಗೆ ಅಂತ್ಯ ಹಾಡಿ, ಪ್ರಾದೇಶಿಕ ಶಾಂತಿಯನ್ನು ಪುನಃಸ್ಥಾಪಿಸುವ ಭರವಸೆ ಮೂಡಿಸಿದೆ.

ಟ್ರಂಪ್ ಸಂಧಾನ ಯಶಸ್ವಿ: ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಶಾಂತಿ ಒಪ್ಪಂದ, ಮಿಲಿಟರಿ ಕಾರ್ಯಾಚರಣೆ ಸ್ಥಗಿತ
ಡೊನಾಲ್ಡ್​ ಟ್ರಂಪ್ Image Credit source: PTI
ನಯನಾ ರಾಜೀವ್
|

Updated on: Jun 02, 2026 | 7:46 AM

Share

ವಾಷಿಂಗ್ಟನ್, ಜೂನ್ 02: ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಮಹತ್ವದ ರಾಜತಾಂತ್ರಿಕ ಯಶಸ್ಸು ಸಿಕ್ಕಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ತೀವ್ರ ಪ್ರಯತ್ನಗಳ ಫಲವಾಗಿ, ಇಸ್ರೇಲ್ ಮತ್ತು ಹಿಜ್ಬುಲ್ಲಾ ಸಂಘಟನೆಗಳು ಪರಸ್ಪರ ದಾಳಿಗಳನ್ನು ನಿಲ್ಲಿಸಲು ಒಪ್ಪಿಕೊಂಡಿವೆ. ಲೆಬನಾನ್‌ನಲ್ಲಿ ಇಸ್ರೇಲ್ ನಡೆಸುತ್ತಿರುವ ಸರಣಿ ಮಿಲಿಟರಿ ದಾಳಿಗಳು ಮತ್ತು ನಾಗರಿಕ ಸಾವುನೋವುಗಳ ಕುರಿತು ಅಮೆರಿಕದ ಅಧಿಕಾರಿಗಳು ಆರಂಭದಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಇಸ್ರೇಲ್ ಕ್ರಮಗಳು ಇರಾನ್ ಜೊತೆಗಿನ ಅಮೆರಿಕದ ಮಾತುಕತೆಗಳಿಗೆ ಅಡ್ಡಿಪಡಿಸುತ್ತವೆ ಎಂದು ಟ್ರಂಪ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಆರಂಭದಲ್ಲಿ ಅತ್ಯಂತ ಕಠಿಣ ಮಾತುಕತೆ ನಡೆಸಿದ್ದರು ಎನ್ನಲಾಗಿತ್ತು. ಆದರೆ, ಈ ಎಲ್ಲಾ ಉದ್ವಿಗ್ನತೆಗಳಿಗೆ ಟ್ರಂಪ್ ಈಗ ಸೌಹಾರ್ದಯುತ ತೆರೆ ಎಳೆದಿದ್ದಾರೆ.

ಟ್ರಂಪ್ ಸಂಧಾನದ ಪ್ರಮುಖ ಅಂಶಗಳು ಇಸ್ರೇಲ್ ಸೇನೆ ವಾಪಸ್: ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಅತ್ಯಂತ ಯಶಸ್ವಿ ಮಾತುಕತೆ ನಡೆಸಲಾಗಿದ್ದು, ಇಸ್ರೇಲ್ ಇನ್ನು ಮುಂದೆ ಬೈರುತ್‌ಗೆ ಯಾವುದೇ ಸೈನಿಕರನ್ನು ಕಳುಹಿಸುವುದಿಲ್ಲ ಮತ್ತು ಈಗಾಗಲೇ ಹೊರಟಿದ್ದ ಸೈನಿಕರನ್ನು ವಾಪಸ್ ಕರೆಸಿಕೊಳ್ಳಲಾಗಿದೆ ಎಂದು ಟ್ರಂಪ್ ದೃಢಪಡಿಸಿದ್ದಾರೆ.

ಹಿಜ್ಬುಲ್ಲಾ ಒಪ್ಪಿಗೆ: ಉನ್ನತ ಪ್ರತಿನಿಧಿಗಳ ಮೂಲಕ ಹಿಜ್ಬುಲ್ಲಾ ಸಂಘಟನೆಯೊಂದಿಗೂ ಉತ್ತಮ ಸಂಪರ್ಕ ಸಾಧಿಸಲಾಗಿದ್ದು, ಅವರು ಇನ್ಮುಂದೆ ಇಸ್ರೇಲ್ ಮೇಲೆ ಯಾವುದೇ ರೀತಿಯ ಶೂಟಿಂಗ್ ಮಾಡದೆ ಸಂಪೂರ್ಣ ಕದನ ವಿರಾಮ ಪಾಲಿಸಲು ಒಪ್ಪಿಕೊಂಡಿದ್ದಾರೆ.

ಮತ್ತಷ್ಟು ಓದಿ: ಇರಾನ್ ಮೇಲೆ ಮತ್ತೆ ಅಮೆರಿಕದ ‘ಆತ್ಮರಕ್ಷಣಾ ದಾಳಿ’: ಸೈನಿಕರು ಸುರಕ್ಷಿತ

ಡೊನಾಲ್ಡ್ ಟ್ರಂಪ್ ಹೇಳಿಕೆ: ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರೊಂದಿಗೆ ನಾನು ಬಹಳ ಫಲಪ್ರದವಾದ ಮಾತುಕತೆ ನಡೆಸಿದ್ದೇನೆ. ಇಸ್ರೇಲ್ ಇನ್ನು ಹಿಜ್ಬುಲ್ಲಾ ಮೇಲೆ ದಾಳಿ ಮಾಡುವುದಿಲ್ಲ ಮತ್ತು ಹಿಜ್ಬುಲ್ಲಾ ಕೂಡ ಇಸ್ರೇಲ್ ಮೇಲೆ ದಾಳಿ ನಡೆಸುವುದಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಟ್ರಂಪ್ ತಮ್ಮ ‘ಟ್ರುತ್ ಸೋಶಿಯಲ್’ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಈ ಮಹತ್ವದ ಬೆಳವಣಿಗೆಯಿಂದಾಗಿ ಲೆಬನಾನ್ ಮತ್ತು ಇಸ್ರೇಲ್ ಗಡಿಯಲ್ಲಿ ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿದ್ದ ಬಿಕ್ಕಟ್ಟು ಶಮನಗೊಂಡಿದ್ದು, ಪ್ರಾದೇಶಿಕ ಶಾಂತಿ ಪುನಃಸ್ಥಾಪನೆಯಾಗುವ ನಿರೀಕ್ಷೆ ಮೂಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ