ಜಾಗತಿಕ ರಾಜಕೀಯದಲ್ಲಿ ಬದಲಾದ ಲೆಕ್ಕಾಚಾರ, ಪಾಕಿಸ್ತಾನ ಭೇಟಿಗೆ ಇರಾನ್ ಒಪ್ಪಂದದ ಷರತ್ತು ವಿಧಿಸಿದ ಟ್ರಂಪ್

ಅಮೆರಿಕ ಅಧ್ಯಕ್ಷ ಟ್ರಂಪ್ ಇರಾನ್ ಜೊತೆಗಿನ ಶಾಂತಿ ಒಪ್ಪಂದಕ್ಕೆ ಪಾಕಿಸ್ತಾನಕ್ಕೆ ಭೇಟಿ ನೀಡುವ ಸೂಚನೆ ನೀಡಿದ್ದಾರೆ. ಇರಾನ್ ಯುರೇನಿಯಂ ತ್ಯಾಗಕ್ಕೆ ಒಪ್ಪಿಕೊಂಡರೆ, ಪಾಕಿಸ್ತಾನದಲ್ಲಿ ಒಪ್ಪಂದಕ್ಕೆ ಸಹಿ ಹಾಕುವುದಾಗಿ ಟ್ರಂಪ್ ಹೇಳಿದ್ದಾರೆ. ಪಾಕಿಸ್ತಾನ ಇಸ್ರೇಲ್-ಲೆಬನಾನ್ ಕದನ ವಿರಾಮದಲ್ಲಿ ಮಧ್ಯಸ್ಥಿಕೆ ವಹಿಸಿದೆ. ಇದು ಜಾಗತಿಕ ರಾಜಕೀಯದಲ್ಲಿ ಹೊಸ ಅಧ್ಯಾಯ ತೆರೆದಿದೆ.

ಜಾಗತಿಕ ರಾಜಕೀಯದಲ್ಲಿ ಬದಲಾದ ಲೆಕ್ಕಾಚಾರ, ಪಾಕಿಸ್ತಾನ ಭೇಟಿಗೆ ಇರಾನ್ ಒಪ್ಪಂದದ ಷರತ್ತು ವಿಧಿಸಿದ ಟ್ರಂಪ್
ಡೊನಾಲ್ಡ್​ ಟ್ರಂಪ್

Updated on: Apr 17, 2026 | 7:13 AM

ವಾಷಿಂಗ್ಟನ್, ಏಪ್ರಿಲ್ 17: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಮತ್ತೊಮ್ಮೆ ತಮ್ಮ ಎಂದಿನ ಶೈಲಿಯ ಭರವಸೆಯ ಮಾತುಗಳ ಮೂಲಕ ಜಗತ್ತಿನ ಗಮನಸೆಳೆದಿದ್ದಾರೆ. ನೆವಾಡಾ ಪ್ರವಾಸಕ್ಕೆ ತೆರಳುವ ಮುನ್ನ ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇರಾನ್ ಬಹುತೇಕ ಎಲ್ಲದಲ್ಲೂ ಒಪ್ಪಿಕೊಂಡಿದೆ. ಒಂದು ವೇಳೆ ಪಾಕಿಸ್ತಾನದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕುವ ಸಂದರ್ಭ ಬಂದರೆ ನಾನು ಖಂಡಿತ ಅಲ್ಲಿಗೆ ಹೋಗುತ್ತೇನೆ, ಏಕೆಂದರೆ ಪಾಕಿಸ್ತಾನಿಗಳನ್ನು ನನ್ನನ್ನು ಬಯಸುತ್ತಾರೆ ಎಂದು ಹೇಳಿದ್ದಾರೆ. ಜತೆಗೆ ಇರಾನ್ ಒಪ್ಪಂದಕ್ಕೆ ಬಂದರೆ ಮಾತ್ರ ತಾವು ಪಾಕಿಸ್ತಾನಕ್ಕೆ ಹೋಗುವುದಾಗಿಯೂ ಹೇಳಿದ್ದಾರೆ.

ಇರಾನ್‌ನಿಂದ ಯುರೇನಿಯಂ ತ್ಯಾಗದ ಭರವಸೆ?
ಯಾವುದೇ ಬಲವಾದ ಪುರಾವೆಗಳನ್ನು ನೀಡದಿದ್ದರೂ,  ಟೆಹ್ರಾನ್ ತನ್ನ ಪರಮಾಣು ಕಾರ್ಯಕ್ರಮವನ್ನು ಕೈಬಿಡಬೇಕು ಎಂಬ ಅಮೆರಿಕದ ದೀರ್ಘಕಾಲದ ಒತ್ತಾಯಕ್ಕೆ ಇರಾನ್ ಮಣಿಯುತ್ತಿರುವ ಸೂಚನೆಯನ್ನು ಟ್ರಂಪ್ ನೀಡಿದ್ದಾರೆ.

ರಾಜಕೀಯ ತಲೆನೋವಾದ ತೈಲ ಬೆಲೆ ಮತ್ತು ಯುದ್ಧ
ಫೆಬ್ರವರಿ 28 ರಿಂದ ಆರಂಭವಾದ ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷವು ಸಾವಿರಾರು ಜೀವಗಳನ್ನು ಬಲಿಪಡೆದಿದೆ. ಜಾಗತಿಕವಾಗಿ ತೈಲ ಬೆಲೆ ಏರಿಕೆಗೆ ಕಾರಣವಾಗಿರುವ ಈ ಯುದ್ಧವು ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿ ಪರಿಣಮಿಸಿತ್ತು. “ಈ ಯುದ್ಧವು ಶೀಘ್ರದಲ್ಲೇ ಕೊನೆಗೊಳ್ಳಬೇಕು ಎಂದು ಲಾಸ್ ವೇಗಾಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಂಪ್ ಘೊಷಿಸಿದ್ದಾರೆ.

ಇಸ್ರೇಲ್-ಲೆಬನಾನ್ ಕದನ ವಿರಾಮದ ಗೆಲುವು
ಇಸ್ರೇಲ್ ಪ್ರಧಾನಿ ನೆತನ್ಯಾಹು ಮತ್ತು ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ಅವರೊಂದಿಗೆ ಸಮಾಲೋಚನೆ ನಡೆಸಿರುವುದಾಗಿ ಹೇಳಿದ ಟ್ರಂಪ್, ಇಬ್ಬರನ್ನೂ ಶ್ವೇತಭವನಕ್ಕೆ ಆಹ್ವಾನಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಗುರುವಾರದಿಂದಲೇ ಇಸ್ರೇಲ್ ಮತ್ತು ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಜಾರಿಗೆ ಬಂದಿದ್ದು, ಇದನ್ನು ಶಾಶ್ವತ ಶಾಂತಿಯನ್ನಾಗಿ ಪರಿವರ್ತಿಸಲು ಜೆಡಿ ವ್ಯಾನ್ಸ್ ಮತ್ತು ಮಾರ್ಕೊ ರೂಬಿಯೊ ನೇತೃತ್ವದ ತಂಡಕ್ಕೆ ಟ್ರಂಪ್ ಜವಾಬ್ದಾರಿ ನೀಡಿದ್ದಾರೆ.

ಮತ್ತಷ್ಟು ಓದಿ: ಪ್ರಧಾನಿ ಮೋದಿ ಜೊತೆ ಟ್ರಂಪ್ 40 ನಿಮಿಷ ಫೋನ್ ಸಂಭಾಷಣೆ; ಹಾರ್ಮುಜ್ ಕುರಿತು ಚರ್ಚೆ

ಪಾಕಿಸ್ತಾನದ ಮಧ್ಯಸ್ಥಿಕೆ ಮತ್ತು ಇರಾನ್ ಸ್ವಾಗತ
ವಿಶೇಷವೆಂದರೆ, ಈ ಶಾಂತಿ ಪ್ರಕ್ರಿಯೆಯಲ್ಲಿ ಪಾಕಿಸ್ತಾನವು ಪ್ರಮುಖ ಮಧ್ಯಸ್ಥಿಕೆ ವಹಿಸುತ್ತಿದೆ. ಲೆಬನಾನ್ ಕದನ ವಿರಾಮವನ್ನು ಇರಾನ್ ಕೂಡ ಸ್ವಾಗತಿಸಿದ್ದು, ಇದು ಅಮೆರಿಕದೊಂದಿಗೆ ಪಾಕಿಸ್ತಾನದ ಮೂಲಕ ತಲುಪಿರುವ ಮಹತ್ವದ ತಿಳುವಳಿಕೆಯ ಭಾಗವಾಗಿದೆ ಎಂದು ಟೆಹ್ರಾನ್ ಮೂಲಗಳು ತಿಳಿಸಿವೆ.

ಒಂದು ಕಾಲದಲ್ಲಿ ಯುದ್ಧದ ಅಂಚಿನಲ್ಲಿದ್ದ ಅಮೆರಿಕ ಮತ್ತು ಇರಾನ್, ಈಗ ಪಾಕಿಸ್ತಾನದ ನೆಲದಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕುವ ಹಂತಕ್ಕೆ ಬಂದಿರುವುದು ಜಾಗತಿಕ ರಾಜಕೀಯದ ದೊಡ್ಡ ತಿರುವು. ಟ್ರಂಪ್ ಅವರ ಈ ‘ಇಸ್ಲಾಮಾಬಾದ್ ಪ್ರವಾಸ’ ಅಂತಿಮವಾದರೆ, ಅದು ದಕ್ಷಿಣ ಏಷ್ಯಾದ ಭೌಗೋಳಿಕ ರಾಜಕೀಯದ ಮೇಲೆಯೂ ದೊಡ್ಡ ಪರಿಣಾಮ ಬೀರಲಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us