ಬೇಕಿರುವುದು ತೈಲವಲ್ಲ ವೆನೆಜುವೆಲಾದ ಕೀಲಿಕೈ, ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್

ಇರಾನ್ ಮತ್ತು ಗ್ರೀನ್‌ಲ್ಯಾಂಡ್‌ಗೆ ಬೆದರಿಕೆಗಳ ನಡುವೆ ಡೊನಾಲ್ಡ್ ಟ್ರಂಪ್ ಪೋಸ್ಟ್​ ಹೊಸ ಸಂಚಲನ ಮೂಡಿಸಿದೆ. ಟ್ರಂಪ್ ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷರೆಂದು ಘೋಷಿಸಿಕೊಂಡಿದ್ದಾರೆ.ಅದರ ಫೋಟೋವನ್ನು ಅವರು ಟ್ರೂತ್ ಸೋಷಿಯಲ್‌ನಲ್ಲಿ ಹಂಚಿಕೊಂಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ವೆನೆಜುವೆಲಾ ವಿರುದ್ಧ ಮಿಲಿಟರಿ ಕ್ರಮ ಕೈಗೊಂಡು ಅದರ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸುವ ಮೂಲಕ ಜಾಗತಿಕ ಕೋಲಾಹಲಕ್ಕೆ ಕಾರಣರಾಗಿದ್ದರು. ಈಗ, ವೆನೆಜುವೆಲಾಗೆ ಸಂಬಂಧಿಸಿದ ಪೋಸ್ಟ್‌ನೊಂದಿಗೆ, ಟ್ರಂಪ್ ಹೊಸ ಸಂಚಲನ ಮೂಡಿಸಿದ್ದಾರೆ.

ಬೇಕಿರುವುದು ತೈಲವಲ್ಲ ವೆನೆಜುವೆಲಾದ ಕೀಲಿಕೈ, ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್
ಡೊನಾಲ್ಡ್​ ಟ್ರಂಪ್
Image Credit source: PBS

Updated on: Jan 12, 2026 | 9:16 AM

ವಾಷಿಂಗ್ಟನ್, ಜನವರಿ 12: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​(Donald Trump)ನ ಇತ್ತೀಚಿನ ಹೇಳಿಕೆಗಳನ್ನು ಗಮನಿಸಿದಾಗ ಅವರಿಗೆ ಬೇಕಾಗಿರುವುದು ಕೇವಲ ವೆನೆಜುವೆಲಾದ ತೈಲ ಮಾತ್ರವಲ್ಲ, ದೇಶದ ಕೀಲಿಕೈ ಕೂಡ ಎಂಬುದು ಸ್ಪಷ್ಟವಾಗುತ್ತದೆ. ಅಮೆರಿಕವು ಇತ್ತೀಚೆಗೆ ವೆನೆಜುವೆಲಾ ವಿರುದ್ಧ ಮಿಲಿಟರಿ ದಾಳಿ ನಡೆಸಿ, ಅದರ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸಿತ್ತು. ಈಗ ಅಷ್ಟೇ ಅಲ್ಲ ಡೊನಾಲ್ಡ್​ ಟ್ರಂಪ್ ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿರುವುದು ಅಚ್ಚರಿಯನ್ನುಂಟು ಮಾಡಿದೆ.

ಅವರು ತಮ್ಮ ಟ್ರುತ್ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಇದರ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಜನರು ನಿಜವಾಗಿಯೂ ನಿಮಗೆ ಬೇಕಾಗಿರುವುದು ಏನು ಎಂದು ಟ್ರಂಪ್​ರನ್ನು ಪ್ರಶ್ನೆ ಮಾಡಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ, ಅಮೆರಿಕದ ಅಧ್ಯಕ್ಷ ಟ್ರಂಪ್ ತಮ್ಮನ್ನು “ವೆನೆಜುವೆಲಾದ ಹಂಗಾಮಿ ಅಧ್ಯಕ್ಷರು” ಎಂದು ಬಣ್ಣಿಸಿಕೊಂಡಿದ್ದಾರೆ.

ದೇಶದ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರನ್ನು ವೆನೆಜುವೆಲಾದ ಮಧ್ಯಂತರ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.ಈ ಪೋಸ್ಟ್ ತ್ವರಿತವಾಗಿ ವೈರಲ್ ಆಗಿದ್ದು, ಜನರು ಟ್ರಂಪ್ ಅವರ ಉದ್ದೇಶಗಳನ್ನು ಪ್ರಶ್ನಿಸಿದ್ದಾರೆ.

ಮತ್ತಷ್ಟು ಓದಿ: ಮೋದಿ ಟ್ರಂಪ್​ಗೆ ಕರೆ ಮಾಡ್ಲಿಲ್ಲ, ಭಾರತ-ಅಮೆರಿಕದ ವ್ಯಾಪಾರ ಒಪ್ಪಂದ ಮುಂದುವರೀಲಿಲ್ಲ: ವಾಣಿಜ್ಯ ಕಾರ್ಯದರ್ಶಿ

ವೆನೆಜುವೆಲಾದ ತೈಲ ನಿಕ್ಷೇಪಗಳ ಕುರಿತು ಟ್ರಂಪ್ ನಿರಂತರವಾಗಿ ತೈಲ ಕಂಪನಿಗಳೊಂದಿಗೆ ಸಭೆ ನಡೆಸುತ್ತಿರುವ ಮತ್ತು ಇರಾನ್ ಮತ್ತು ಗ್ರೀನ್‌ಲ್ಯಾಂಡ್ ಕುರಿತು ನಿರಂತರವಾಗಿ ಬೆದರಿಕೆ ಹೇಳಿಕೆಗಳನ್ನು ನೀಡುತ್ತಿರುವ ಸಮಯದಲ್ಲಿ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

ವೆನೆಜುವೆಲಾದ ನಾಯಕ ನಿಕೋಲಸ್ ಮಡುರೊ ಅವರ ಬಂಧನದ ನಂತರ, ಸುರಕ್ಷಿತ, ನ್ಯಾಯಯುತ ಮತ್ತು ವಿವೇಚನಾಯುಕ್ತ ಅಧಿಕಾರ ವರ್ಗಾವಣೆಯನ್ನು ಖಚಿತಪಡಿಸಿಕೊಳ್ಳುವವರೆಗೆ ಅಮೆರಿಕವು ವೆನೆಜುವೆಲಾದ ಸರ್ಕಾರವನ್ನು ನಡೆಸುತ್ತದೆ ಎಂದು ಟ್ರಂಪ್ ಹೇಳಿಕೊಂಡರು.

ಭಾನುವಾರದಂದು ಟ್ರಂಪ್, ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ಅವರೊಂದಿಗಿನ ಮಾತುಕತೆ ಸಕಾರಾತ್ಮಕವಾಗಿದೆ ಎಂದು ಹೇಳಿದರು. ವೆನೆಜುವೆಲಾದ ಪರಿಸ್ಥಿತಿಯ ಕುರಿತು ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೇಶದಲ್ಲಿನ ಬೆಳವಣಿಗೆಗಳು ಸಕಾರಾತ್ಮಕ ದಿಕ್ಕಿನಲ್ಲಿ ಸಾಗುತ್ತಿವೆ ಮತ್ತು ವಾಷಿಂಗ್ಟನ್ ತನ್ನ ನಾಯಕತ್ವದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಇತ್ತೀಚೆಗೆ, ಡೊನಾಲ್ಡ್ ಟ್ರಂಪ್ ಅವರು ಶ್ವೇತಭವನದಲ್ಲಿ ವಿಶ್ವದ ಪ್ರಮುಖ ತೈಲ ಮತ್ತು ಅನಿಲ ಕಂಪನಿಗಳ ಉನ್ನತ ಅಧಿಕಾರಿಗಳನ್ನು ಭೇಟಿಯಾದರು, ಅಲ್ಲಿ ಅವರು ವೆನೆಜುವೆಲಾದಲ್ಲಿ ಹೂಡಿಕೆಗಳು ಈಗ ವೆನೆಜುವೆಲಾ ಸರ್ಕಾರದೊಂದಿಗೆ ಅಲ್ಲ, ನೇರವಾಗಿ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಇರುತ್ತವೆ ಎಂದು ಸ್ಪಷ್ಟಪಡಿಸಿದರು.

ಟ್ರಂಪ್ ಭದ್ರತಾ ಖಾತರಿಗಳನ್ನು ನೀಡಿದರು ಮತ್ತು ಗಮನಾರ್ಹ ಹೂಡಿಕೆಗಳಿಗಾಗಿ ತೈಲ ಉದ್ಯಮಕ್ಕೆ ಮುಕ್ತ ಆಹ್ವಾನವನ್ನು ನೀಡಿದರು. ಯುನೈಟೆಡ್ ಸ್ಟೇಟ್ಸ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ಚೀನಾ ಅಥವಾ ರಷ್ಯಾ ವೆನೆಜುವೆಲಾದಲ್ಲಿ ಬಲವಾದ ಹಿಡಿತ ಸಾಧಿಸುತ್ತಿತ್ತು ಎಂದು ಅವರು ಹೇಳಿದ್ದಾರೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 9:16 am, Mon, 12 January 26