AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tsunami: ಆಗ್ನೇಯ ಏಷ್ಯಾದಲ್ಲಿ 6.1 ತೀವ್ರತೆಯ ಭೂಕಂಪನ; ಹಿಂದೂ ಮಹಾಸಾಗರದಲ್ಲಿ ಸುನಾಮಿ ಎಚ್ಚರಿಕೆ

ಪೂರ್ವ ಟಿಮೋರ್ ಮತ್ತು ಇಂಡೋನೇಷ್ಯಾ ನಡುವೆ ವಿಭಜನೆಯಾಗಿರುವ ಟಿಮೋರ್ ದ್ವೀಪದ ಪೂರ್ವ ತುದಿಯಿಂದ 51.4 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಮಹಾಸಾಗರದಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ.

Tsunami: ಆಗ್ನೇಯ ಏಷ್ಯಾದಲ್ಲಿ 6.1 ತೀವ್ರತೆಯ ಭೂಕಂಪನ; ಹಿಂದೂ ಮಹಾಸಾಗರದಲ್ಲಿ ಸುನಾಮಿ ಎಚ್ಚರಿಕೆ
ಸುನಾಮಿ ಭೀತಿImage Credit source: Live Mint
TV9 Web
| Edited By: |

Updated on: May 27, 2022 | 12:17 PM

Share

ನವದೆಹಲಿ: ಪೂರ್ವ ಟಿಮೋರ್ ಕರಾವಳಿಯಲ್ಲಿ ಇಂದು (ಶುಕ್ರವಾರ) 6.1 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸುನಾಮಿ (Tsunami)  ಉಂಟಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಪೂರ್ವ ಟಿಮೋರ್ ಮತ್ತು ಇಂಡೋನೇಷ್ಯಾ ನಡುವೆ ವಿಭಜನೆಯಾಗಿರುವ ಟಿಮೋರ್ ದ್ವೀಪದ ಪೂರ್ವ ತುದಿಯಿಂದ 51.4 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ.

ಹೀಗಾಗಿ, ಹಿಂದೂ ಮಹಾಸಾಗರದ ಸುನಾಮಿ ಎಚ್ಚರಿಕೆ ಮತ್ತು ತಗ್ಗಿಸುವಿಕೆ ವ್ಯವಸ್ಥೆ (IOTWMS) ಈ ಪ್ರದೇಶಕ್ಕೆ ಸುನಾಮಿ ಎಚ್ಚರಿಕೆಯನ್ನು ನೀಡಿದೆ. ಪೂರ್ವ ಟಿಮೋರ್ ಪೆಸಿಫಿಕ್ “ರಿಂಗ್ ಆಫ್ ಫೈರ್” ನಲ್ಲಿ ನೆಲೆಸಿದೆ. ಇದು ಆಗಾಗ ಭೂಕಂಪ ಉಂಟಾಗಲು ಕಾರಣವಾಗುತ್ತದೆ. ಫೆಬ್ರವರಿಯಲ್ಲಿ ನೆರೆಯ ಇಂಡೋನೇಷ್ಯಾದ ಉತ್ತರ ಸುಮಾತ್ರಾದಲ್ಲಿ 6.2 ತೀವ್ರತೆಯ ಭೂಕಂಪ ಉಂಟಾಗಿತ್ತು. ಈ ಭೂಕಂಪದಲ್ಲಿ 12 ಜನರು ಸಾವನ್ನಪ್ಪಿದ್ದರು.

ಇದನ್ನೂ ಓದಿ: Earthquake in Taiwan ತೈವಾನ್, ಜಪಾನ್ ನಡುವಿನ ಸಮುದ್ರದಲ್ಲಿ ಪ್ರಬಲ ಭೂಕಂಪ; ಸುನಾಮಿ ಅಪಾಯವಿಲ್ಲ

2004ರಲ್ಲಿ 9.1 ತೀವ್ರತೆಯ ಭೂಕಂಪವು ಸುಮಾತ್ರಾ ಕರಾವಳಿಯನ್ನು ಅಪ್ಪಳಿಸಿತು. ಪೂರ್ವ ಟಿಮೋರ್ 1.3 ಮಿಲಿಯನ್ ಜನಸಂಖ್ಯೆಯನ್ನು ಹೊಂದಿದೆ. ಇದು ಆಗ್ನೇಯ ಏಷ್ಯಾದ ಅತ್ಯಂತ ಕಿರಿಯ ದೇಶವಾಗಿದೆ. ಈ ದೇಶ ಸ್ವಾತಂತ್ರ್ಯದ 20ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಹಿಂದಿನ ಪೋರ್ಚುಗೀಸ್ ವಸಾಹತು 24 ವರ್ಷಗಳ ಆಕ್ರಮಣದ ನಂತರ 2002ರಲ್ಲಿ ಇಂಡೋನೇಷ್ಯಾದಿಂದ ಸ್ವತಂತ್ರವಾಯಿತು.

ವ್ಯಾಪಕವಾದ ಪ್ರವಾಹವನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿರುವ ಸುನಾಮಿ ಸನ್ನಿಹಿತವಾದಾಗ ಸುನಾಮಿ ಎಚ್ಚರಿಕೆಯನ್ನು ನೀಡಲಾಗುತ್ತದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್