AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tulsi Gabbard Resigns: ಟ್ರಂಪ್ ಸರ್ಕಾರದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಟ್ರಂಪ್ ಆಡಳಿತಕ್ಕೆ ರಾಜೀನಾಮೆ ನೀಡಿದ್ದಾರೆ. ಪತಿ ಅಬ್ರಹಾಂ ಅವರಿಗೆ ಅಪರೂಪದ ಮೂಳೆ ಕ್ಯಾನ್ಸರ್ ಇರುವುದು ರಾಜೀನಾಮೆಗೆ ಮುಖ್ಯ ಕಾರಣ ಎಂದು ಹೇಳಿದ್ದರೂ, ಇರಾನ್ ನೀತಿಯ ಕುರಿತು ಟ್ರಂಪ್ ಜೊತೆಗಿನ ಭಿನ್ನಾಭಿಪ್ರಾಯಗಳೂ ಇದಕ್ಕೆ ಕಾರಣವಾಗಿರಬಹುದು ಎಂದು ಮೂಲಗಳು ಸೂಚಿಸಿವೆ. ಅವರ ಈ ನಿರ್ಧಾರ ಟ್ರಂಪ್ ಸರ್ಕಾರದಲ್ಲಿ ಸಂಚಲನ ಮೂಡಿಸಿದೆ.

Tulsi Gabbard Resigns: ಟ್ರಂಪ್ ಸರ್ಕಾರದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ ರಾಜೀನಾಮೆ
ತುಳಸಿImage Credit source: Economist
ನಯನಾ ರಾಜೀವ್
|

Updated on: May 23, 2026 | 6:56 AM

Share

ವಾಷಿಂಗ್ಟನ್, ಮೇ 23: ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿಯಾಗಿದ್ದ 45 ವರ್ಷದ ತುಳಸಿ ಗಬ್ಬಾರ್ಡ್(Tulsi Gabbard) ಅವರು ಶುಕ್ರವಾರ ಟ್ರಂಪ್ ಆಡಳಿತವನ್ನು ತೊರೆದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ‘X’ (ಟ್ವಿಟರ್) ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ತುಳಸಿ ಗಬ್ಬಾರ್ಡ್ ಅವರ ಈ ನಿರ್ಧಾರದ ಹಿಂದೆ ಅವರ ಕುಟುಂಬಕ್ಕೆ ಎದುರಾಗಿರುವ ದೊಡ್ಡ ಸವಾಲಿದೆ. ಅವರ ಪತಿ ಅಬ್ರಹಾಂ ಅವರಿಗೆ ಅತ್ಯಂತ ಅಪರೂಪದ ಮೂಳೆ ಕ್ಯಾನ್ಸರ್ (Bone Cancer) ಇರುವುದು ಇತ್ತೀಚೆಗಷ್ಟೇ ಪತ್ತೆಯಾಗಿದೆ. ತಮ್ಮ 11 ವರ್ಷಗಳ ದಾಂಪತ್ಯ ಜೀವನದಲ್ಲಿ ಪ್ರತಿ ಕಷ್ಟದಲ್ಲೂ ತಮಗೆ ಬೆಂಬಲವಾಗಿ ನಿಂತ ಪತಿಯನ್ನು ಈ ಕಠಿಣ ಪರಿಸ್ಥಿತಿಯಲ್ಲಿ ಏಕಾಂಗಿಯಾಗಿ ಬಿಡಲು ಸಾಧ್ಯವಿಲ್ಲ ಎಂದು ಗಬ್ಬಾರ್ಡ್ ಹೇಳಿದ್ದಾರೆ.

ಮುಂಬರುವ ದಿನಗಳಲ್ಲಿ ಪತಿಯ ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಜೊತೆಯಾಗಿರಲು ಅವರು ಸಾರ್ವಜನಿಕ ಸೇವೆಯಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದ್ದಾರೆ. ಜೂನ್ 30 ರಂದು ಅವರು ಅಧಿಕೃತವಾಗಿ ಆಡಳಿತದಿಂದ ಹೊರನಡೆಯಲಿದ್ದಾರೆ.

ತಮ್ಮ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ತುಳಸಿ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದ ಅರ್ಪಿಸಿದ್ದು, ಸುಗಮ ಅಧಿಕಾರ ಹಸ್ತಾಂತರಕ್ಕೆ ಬದ್ಧವಾಗಿರುವುದಾಗಿ ಹೇಳಿದ್ದಾರೆ. ಟ್ರಂಪ್ ಕೂಡ ಗಬ್ಬಾರ್ಡ್ ಅವರ ರಾಜೀನಾಮೆಯನ್ನು ದುರದೃಷ್ಟಕರ ಎಂದು ಕರೆದಿದ್ದಾರೆ ಹಾಗೂ ಅವರು ತಮ್ಮ ಅವಧಿಯಲ್ಲಿ ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಮತ್ತಷ್ಟು ಓದಿ: ತುಳಸಿ ಗಬ್ಬಾರ್ಡ್ ಭೇಟಿ ವೇಳೆ ಅಮೆರಿಕದಲ್ಲಿ ಖಲಿಸ್ತಾನಿ ಚಟುವಟಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಜನಾಥ್ ಸಿಂಗ್

ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಗಬ್ಬಾರ್ಡ್ ಪತಿಯ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದು, ಸದ್ಯ ರಾಷ್ಟ್ರೀಯ ಗುಪ್ತಚರ ಪ್ರಧಾನ ಉಪ ನಿರ್ದೇಶಕರಾಗಿರುವ ಆರನ್ ಲುಕಾಸ್ ಅವರು ಹಂಗಾಮಿ ನಿರ್ದೇಶಕರಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು ಪ್ರಕಟಿಸಿದ್ದಾರೆ. ಹವಾಯಿಯ ಮಾಜಿ ಡೆಮಾಕ್ರಟಿಕ್ ಕಾಂಗ್ರೆಸ್ ಮಹಿಳೆಯಾಗಿದ್ದ ಗಬ್ಬಾರ್ಡ್ ಅವರನ್ನು ಕಳೆದ ವರ್ಷ ಟ್ರಂಪ್ ಅವರು ಗುಪ್ತಚರ ಮುಖ್ಯಸ್ಥರನ್ನಾಗಿ ನೇಮಿಸಿದ್ದರು.

ರಾಜೀನಾಮೆ ಪತ್ರ

ರಾಜೀನಾಮೆಯ ಹಿಂದೆ ರಾಜಕೀಯ ಭಿನ್ನಾಭಿಪ್ರಾಯಗಳಿದ್ದವೇ? ಮೇಲ್ನೋಟಕ್ಕೆ ಪತಿಯ ಅನಾರೋಗ್ಯದ ಕಾರಣ ನೀಡಲಾಗಿದ್ದರೂ, ಇರಾನ್ ಮೇಲಿನ ದಾಳಿಯ ವಿಷಯದಲ್ಲಿ ಟ್ರಂಪ್ ಮತ್ತು ಗಬ್ಬಾರ್ಡ್ ನಡುವೆ ಭಿನ್ನಾಭಿಪ್ರಾಯಗಳು ತಲೆದೂರಿದ್ದವು ಎನ್ನಲಾಗಿದೆ. ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ತಯಾರಿಸುತ್ತಿದೆ ಎಂದು ಟ್ರಂಪ್ ಪದೇ ಪದೇ ಹೇಳುತ್ತಿದ್ದರೆ, ಗಬ್ಬಾರ್ಡ್ ಮಾತ್ರ ಇರಾನ್ ತನ್ನ ಪರಮಾಣು ಸಾಮರ್ಥ್ಯವನ್ನು ಪುನರ್ನಿರ್ಮಿಸಲು ಯಾವುದೇ ಹೊಸ ಪ್ರಯತ್ನ ಮಾಡಿಲ್ಲ ಎಂದು ಸೆನೆಟ್ ಸಮಿತಿಗೆ ಲಿಖಿತವಾಗಿ ತಿಳಿಸಿದ್ದರು.

ಇತ್ತೀಚೆಗಷ್ಟೇ ವಲಸೆ ಮತ್ತು ವಿಪತ್ತು ನಿರ್ವಹಣೆ ಟೀಕೆಗಳ ಹಿನ್ನೆಲೆಯಲ್ಲಿ ಟ್ರಂಪ್ ಅವರು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ಹಾಗೂ ಅಟಾರ್ನಿ ಜನರಲ್ ಪ್ಯಾಮ್ ಬೋಂಡಿ ಅವರನ್ನು ವಜಾಗೊಳಿಸಿದ್ದರು. ಇದರ ಬೆನ್ನಲ್ಲೇ ಈಗ ತುಳಸಿ ಗಬ್ಬಾರ್ಡ್ ಅವರ ರಾಜೀನಾಮೆ ಬಂದಿರುವುದು ಟ್ರಂಪ್ ಸರ್ಕಾರದಲ್ಲಿ ಭಾರಿ ಸಂಚಲನ ಮೂಡಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್