AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mali Gold Mine Collapse: ಪಶ್ಚಿಮ ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿತ, 70 ಮಂದಿ ಸಾವು

ಪಶ್ಚಿಮ ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿದು 70 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗಣಿಕುಸಿತದ ಅಪಾಯವಿರುವ ಪ್ರದೇಶದಲ್ಲೇ ಈ ಅವಘಡ ಸಂಭವಿಸಿದೆ. ನೈಋತ್ಯ ಕೌಲಿಕೊರೊ ಪ್ರದೇಶದ ಕಂಗಾಬಾ ಜಿಲ್ಲೆಯಲ್ಲಿ ಹಲವಾರು ಗಣಿ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ.

Mali Gold Mine Collapse: ಪಶ್ಚಿಮ ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿತ, 70 ಮಂದಿ ಸಾವು
ಚಿನ್ನದಗಣಿImage Credit source: NDTV
ನಯನಾ ರಾಜೀವ್
|

Updated on: Jan 25, 2024 | 9:05 AM

Share

ಪಶ್ಚಿಮ ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ(Gold Mine) ಕುಸಿದು 70 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗಣಿಕುಸಿತದ ಅಪಾಯವಿರುವ ಪ್ರದೇಶದಲ್ಲೇ ಈ ಅವಘಡ ಸಂಭವಿಸಿದೆ. ನೈಋತ್ಯ ಕೌಲಿಕೊರೊ ಪ್ರದೇಶದ ಕಂಗಾಬಾ ಜಿಲ್ಲೆಯಲ್ಲಿ ಹಲವಾರು ಗಣಿ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ.

ಈ ಅಪಘಾತದ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದ ಮಾಲಿ ಸಚಿವಾಲಯವು ಸುರಕ್ಷತಾ ಮಾನದಂಡಗಳನ್ನು ಅನುಸರಿಸಲು ಕೇಳಿಕೊಂಡಿದೆ.

ಸುರಕ್ಷತಾ ಮಾನದಂಡಗಳನ್ನು ಅನುಸರಿಸದೆ ಗಣಿಗಾರರು ಗ್ಯಾಲರಿಯನ್ನು ಅಗೆದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಸಚಿವಾಲಯ ವಕ್ತಾರ ಬೇ ಕೌಲಿಬಾಲಿ ಹೇಳಿದ್ದಾರೆ.

ಇದಕ್ಕೂ ಮೊದಲು ಸುರಕ್ಷತಾ ಮಾನದಂಡಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲು ಹಲವು ಬಾರಿ ಕಾರ್ಮಿಕರಿಗೆ ಸಲಹೆ ನೀಡಲಾಗಿತ್ತು ಎಂದು ಹೇಳಿದ್ದಾರೆ. ಸುದ್ದಿ ಸಂಸ್ಥೆ ಅಲ್​ಜಜೀರಾ ವರದಿ ಪ್ರಕಾರ, ಗಣಿಗಾರಿಕೆ ಸ್ಥಳಗಳ ಸಮೀಪ ವಾಸಿಸುವ ಸಮುದಾಯಗಳು ಹಾಗೂ ಚಿನ್ನದ ಗಣಿಯಲ್ಲಿ ಕೆಲಸ ಮಾಡುವವರು ಪ್ರಾಮಾಣಿಕವಾಗಿ ಸುರಕ್ಷತಾ ಮಾನದಂಡಗಳನ್ನು ಪೂರೈಸುವಂತೆ ಸರ್ಕಾರ ಮನವಿ ಮಾಡಿದೆ.

ಮತ್ತಷ್ಟು ಓದಿ:ಕೆಆರ್​​​​ಎಸ್ ಅಣೆಕಟ್ಟೆ ಸುತ್ತಮುತ್ತ ಗಣಿಗಾರಿಕೆ ನಿರ್ಬಂಧ: ಕರ್ನಾಟಕ ಹೈಕೋರ್ಟ್ ಆದೇಶ

ವಿಶ್ವದ ಬಡ ದೇಶಗಳಲ್ಲಿ ಒಂದಾಗಿರುವ ಮಾಲಿ, ಆಫ್ರಿಕಾದ ಪ್ರಮುಖ ಚಿನ್ನದ ಉತ್ಪಾದಕರಲ್ಲಿ ಒಂದಾಗಿದೆ. ಈ ಪ್ರದೇಶದಲ್ಲಿ 200ಕ್ಕೂ ಅಧಿಕ ಕಾರ್ಮಿಕರಿದ್ದರು. ಹುಡುಕಾಟ ಮುಂದುವರೆದಿದೆ. ಮಾಲಿಯ ಗಣಿ ಸಚಿವಾಲಯ ಮಂಗಳವಾರ ಹೇಳಿಕೆಯಲ್ಲಿ ಹಲವಾರು ಗಣಿಗಾರರ ಸಾವನ್ನು ಘೋಷಿಸಿದೆ ಆದರೆ ನಿಖರವಾದ ಅಂಕಿಅಂಶಗಳನ್ನು ನೀಡಿಲ್ಲ. ಸಹೇಲ್ ಪ್ರದೇಶದಲ್ಲಿ ಚಿನ್ನದ ಗಣಿಗಾರಿಕೆ ತುಂಬಾ ಅಪಾಯಕಾರಿಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ