ಆಗಸದಲ್ಲಿ ತೀವ್ರವಾಗಿ ಅಲುಗಾಡಿದ ವಿಮಾನ : ಓರ್ವ ಪ್ರಯಾಣಿಕ ಸಾವು, 30 ಮಂದಿಗೆ ಗಾಯ

|

Updated on: May 21, 2024 | 5:01 PM

ಲಂಡನ್‌ನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ವಿಮಾನ ಗಾಳಿಗೆ ಆಕಾಶದಲ್ಲಿ ತೀವ್ರವಾಗಿ ಅಲುಗಾಡಿದೆ, ಇದರಿಂದ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಸೋಮವಾರ ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಿಂದ ಸಿಂಗಾಪುರಕ್ಕೆ ಹೊರಟಿದ್ದ SQ321 ವಿಮಾನವು ಮಾರ್ಗ ಮಧ್ಯದಲ್ಲಿ ತೀವ್ರ ಪ್ರಕ್ಷುಬ್ಧತೆಯನ್ನು ಎದುರಿಸಿದೆ. ಮಧ್ಯಾಹ್ನ 3.45 ಕ್ಕೆ (ಸ್ಥಳೀಯ ಕಾಲಮಾನ) ಬ್ಯಾಂಕಾಕ್​​ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. 

ಆಗಸದಲ್ಲಿ ತೀವ್ರವಾಗಿ ಅಲುಗಾಡಿದ ವಿಮಾನ : ಓರ್ವ ಪ್ರಯಾಣಿಕ ಸಾವು, 30 ಮಂದಿಗೆ ಗಾಯ
Follow us on

ಲಂಡನ್‌ನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ತೀವ್ರ ಪ್ರಕ್ಷುಬ್ಧತೆ ಉಂಟಾಗಿ ಓರ್ವ ಪ್ರಯಾಣಿಕರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ಸಿಂಗಾಪುರ ಏರ್‌ಲೈನ್ಸ್ ತಿಳಿಸಿದೆ. ಇದೀಗ ವಿಮಾನ ಬ್ಯಾಂಕಾಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಸೋಮವಾರ ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಿಂದ ಸಿಂಗಾಪುರಕ್ಕೆ ಹೊರಟಿದ್ದ SQ321 ವಿಮಾನವು ಮಾರ್ಗ ಮಧ್ಯದಲ್ಲಿ ತೀವ್ರ ಪ್ರಕ್ಷುಬ್ಧತೆಯನ್ನು ಎದುರಿಸಿದೆ. ವಿಮಾನ ಪ್ರಯಾಣಿಸುವ ವೇಳೆ ವಿಮಾನ ಗಾಳಿಗೆ ತೀವ್ರವಾಗಿ ಅಲುಗಾಡಿದೆ.

ವಿಮಾನವನ್ನು ಮಧ್ಯಾಹ್ನ 3.45 ಕ್ಕೆ (ಸ್ಥಳೀಯ ಕಾಲಮಾನ) ಬ್ಯಾಂಕಾಕ್​​ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಬೋಯಿಂಗ್ 777-300 ಇಆರ್ – ವಿಮಾನದಲ್ಲಿ 211 ಪ್ರಯಾಣಿಕರು ಮತ್ತು 18 ಸಿಬ್ಬಂದಿ ಇದ್ದರು ಎಂದು ಹೇಳಲಾಗಿದೆ. ಇನ್ನು ಸಾವನ್ನಪ್ಪಿದ ಪ್ರಯಾಣಿಕರಿಗೆ ಸಂತಾಪ ಸೂಚಿಸಿದ್ದು, ಅವರ ಕುಟುಂಬಕ್ಕೆ ವಿಷಯವನ್ನು ತಿಳಿಸಿದೆ ಎಂದು ವಿಮಾನಯಾನ ಸಂಸ್ಥೆ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಸಿಂಗಾಪುರದಲ್ಲಿ ಮಾಂಸ ಉತ್ಪನ್ನಗಳ ಕದ್ದು ಕಡಿಮೆ ಬೆಲೆಗೆ ಮಾರಾಟ ಮಾಡ್ತಿದ್ದ ಭಾರತೀಯನಿಗೆ ಜೈಲು ಶಿಕ್ಷೆ

ಇನ್ನು ಗಾಯಾಗಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೂ ಎಲ್ಲ ಪ್ರಯಾಣಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ವಿಮಾನ ಸಂಸ್ಥೆ ಹೇಳಿದೆ. ಅವರಿಗೆ ಬೇಕಾದ ಎಲ್ಲ ಸಹಾಯವನ್ನು ಮಾಡಲಾಗುವುದು. ವೈದ್ಯಕೀಯ ನೆರವು ಒದಗಿಸಲು ನಾವು ಥೈಲ್ಯಾಂಡ್‌ನ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಲಾಗಿದೆ ಎಂದು ಹೇಳಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ