Turkey Blast ಇಸ್ತಾಂಬುಲ್‌ನಲ್ಲಿ ಬಾಂಬ್ ಇರಿಸಿದ್ದು ಸಿರಿಯಾದ ಮಹಿಳೆ: ಟರ್ಕಿ ಪೊಲೀಸ್

ಟರ್ಕಿಯ ಅಧ್ಯಕ್ಷ ತಯ್ಯಿಪ್ ಎರ್ಡೋಗನ್ ಈ ಬಾಂಬ್ ದಾಳಿಯ ಹಿಂದೆ ಭಯೋತ್ಪಾದನೆಯ ಕೈವಾಡದ ಶಂಕೆಯಿದೆ ಎಂದು ಹೇಳಿದ್ದರು. ಇಸ್ತಾಂಬುಲ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 6 ಜನರು ಸಾವನ್ನಪ್ಪಿದ್ದಾರೆ ಮತ್ತು 81 ಮಂದಿ ಗಾಯಗೊಂಡಿದ್ದಾರೆ.

Turkey Blast ಇಸ್ತಾಂಬುಲ್‌ನಲ್ಲಿ ಬಾಂಬ್ ಇರಿಸಿದ್ದು ಸಿರಿಯಾದ ಮಹಿಳೆ: ಟರ್ಕಿ ಪೊಲೀಸ್
ಇಸ್ತಾಂಬುಲ್ ಬಾಂಬ್ ಸ್ಫೋಟ
Follow us
ರಶ್ಮಿ ಕಲ್ಲಕಟ್ಟ
|

Updated on: Nov 14, 2022 | 2:22 PM

ಟರ್ಕಿಯ ಇಸ್ತಾಂಬುಲ್‌ನಲ್ಲಿ(Turkey Blast) ನಡೆದ ಬಾಂಬ್ ಸ್ಫೋಟದ ರೂವಾರಿ ಸಿರಿಯಾದ ಮಹಿಳೆ ಎಂದು ಟರ್ಕಿ ಪೊಲೀಸರು ಹೇಳಿದ್ದಾರೆ. ಈ ಮಹಿಳೆ ಬಾಂಬ್ ಇರಿಸಿದ್ದಳು ಎಂದು ಪೊಲೀಸರು ಹೇಳಿರುವುದಾಗಿ ಎಎಫ್ ಪಿ ಸುದ್ದಿ ಸಂಸ್ಧೆ ವರದಿ ಮಾಡಿದೆ. ಟರ್ಕಿಯ ಇಸ್ತಾಂಬುಲ್‌ನ (Istanbul Blast) ಪ್ರಸಿದ್ಧ ಇಸ್ತಿಕ್‌ಲಾಲ್ ಶಾಪಿಂಗ್ ಸ್ಟ್ರೀಟ್‌ನಲ್ಲಿ ಶನಿವಾರ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ದುರಂತದಲ್ಲಿ 6 ಜನರು ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿದ್ದರು. ಇಸ್ತಿಕ್‌ಲಾಲ್ ಶಾಪಿಂಗ್ ಸ್ಟ್ರೀಟ್‌ ಯಾವಾಗಲೂ ಪ್ರವಾಸಿಗರಿಂದ ತುಂಬಿರುವ ಸ್ಥಳವಾಗಿದ್ದರಿಂದ ಇದೇ ಪ್ರದೇಶವನ್ನು ಬಾಂಬ್ ಸ್ಫೋಟಕ್ಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು.

ಟರ್ಕಿಯ ಅಧ್ಯಕ್ಷ ತಯ್ಯಿಪ್ ಎರ್ಡೋಗನ್ ಈ ಬಾಂಬ್ ದಾಳಿಯ ಹಿಂದೆ ಭಯೋತ್ಪಾದನೆಯ ಕೈವಾಡದ ಶಂಕೆಯಿದೆ ಎಂದು ಹೇಳಿದ್ದರು. ಇಸ್ತಾಂಬುಲ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 6 ಜನರು ಸಾವನ್ನಪ್ಪಿದ್ದಾರೆ ಮತ್ತು 81 ಮಂದಿ ಗಾಯಗೊಂಡಿದ್ದಾರೆ. ಈ ದುರಂತಕ್ಕೆ ಕಾರಣವಾದ ಶಂಕಿತನನ್ನು ಟರ್ಕಿಶ್ ಪೊಲೀಸರು ಬಂಧಿಸಿದ್ದಾರೆ ಎಂದು ಸರ್ಕಾರಿ ಅನಾಡೋಲು ಏಜೆನ್ಸಿ ವರದಿ ಮಾಡಿದೆ.

ಇದನ್ನೂ ಓದಿ: Istanbul Blast: ಟರ್ಕಿಯ ಇಸ್ತಾಂಬುಲ್​ನಲ್ಲಿ ಮಹಿಳಾ ಉಗ್ರರಿಂದ ಬಾಂಬ್ ಸ್ಫೋಟ; 6 ಜನ ಸಾವು, 81 ಮಂದಿಗೆ ಗಾಯ

“ಈ ಭೀಕರ ಭಯೋತ್ಪಾದಕ ದಾಳಿಗೆ ಕಾರಣರಾದವರ ವಿರುದ್ಧ ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ” ಎಂದು ಟರ್ಕಿಶ್ ಅಧಿಕಾರಿಗಳು ಹೇಳಿದ್ದಾರೆ. ಟರ್ಕಿಯ ಉಪಾಧ್ಯಕ್ಷ ಫುವಾಟ್ ಒಕ್ಟೇ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಾ, ಮಹಿಳಾ ಭಯೋತ್ಪಾದಕರು ಶಾಪಿಂಗ್ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟಿಸಿರುವ ಶಂಕೆ ಇದೆ ಎಂದು ಹೇಳಿದ್ದರು.

ಇದುವರೆಗೂ ಯಾವುದೇ ಭಯೋತ್ಪಾದಕ ಸಂಘಟನೆಗಳು ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ. ಮಹಿಳೆಯೊಬ್ಬರು ಸುಮಾರು 40 ನಿಮಿಷಗಳ ಕಾಲ ಬೆಂಚ್ ಮೇಲೆ ಕುಳಿತಿರುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಆಕೆ ಈ ಬಾಂಬ್ ಸ್ಫೋಟ ನಡೆಯುವುದಕ್ಕೂ ಕೆಲವೇ ನಿಮಿಷಗಳ ಮೊದಲು ಆ ಜಾಗದಿಂದ ಹೊರಟುಹೋಗಿದ್ದಾರೆ. ಇಬ್ಬರು ಪುರುಷ ದಾಳಿಕೋರರು ಸಹ ಆ ಮಹಿಳೆಯೊಂದಿಗೆ ಸೇರಿ ಈ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ