Turkey Earthquake: ಟರ್ಕಿಯಲ್ಲಿ 4 ಭೂಕಂಪ: ಅವಶೇಷಗಳಡಿ 1,80,000 ಮಂದಿ ಸಿಲುಕಿರುವ ಶಂಕೆ, ಎಲ್ಲರೂ ಮೃತಪಟ್ಟಿರುವ ಸಾಧ್ಯತೆ

ಟರ್ಕಿ ಹಾಗೂ ಸಿರಿಯಾದಲ್ಲಿ 4 ಪ್ರಬಲ ಭೂಕಂಪಗಳು ಸಂಭವಿಸಿದ್ದು, ಜನತೆಯನ್ನು ಅಕ್ಷರಶಃ ನರಕಕ್ಕೆ ತಳ್ಳಿದೆ. ಈಗಾಗಲೇ 7,800ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.

Turkey Earthquake: ಟರ್ಕಿಯಲ್ಲಿ 4 ಭೂಕಂಪ: ಅವಶೇಷಗಳಡಿ 1,80,000 ಮಂದಿ ಸಿಲುಕಿರುವ ಶಂಕೆ, ಎಲ್ಲರೂ ಮೃತಪಟ್ಟಿರುವ ಸಾಧ್ಯತೆ
ಟರ್ಕಿ ಭೂಕಂಪ
Follow us
ನಯನಾ ರಾಜೀವ್
|

Updated on: Feb 08, 2023 | 7:49 AM

ಟರ್ಕಿ ಹಾಗೂ ಸಿರಿಯಾದಲ್ಲಿ 4 ಪ್ರಬಲ ಭೂಕಂಪಗಳು ಸಂಭವಿಸಿದ್ದು, ಜನತೆಯನ್ನು ಅಕ್ಷರಶಃ ನರಕಕ್ಕೆ ತಳ್ಳಿದೆ. ಈಗಾಗಲೇ 7,800ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಆದರೆ ಕಟ್ಟಡದ ಅವಶೇಷಗಳಡಿ ಇನ್ನೂ 1,80,000 ಮಂದಿ ಸಿಲುಕಿರುವ ಸಾಧ್ಯತೆ ಇದ್ದು, ಎಲ್ಲರೂ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

ಟರ್ಕಿಯಲ್ಲಿ 5,894 ಮಂದಿ ಮೃತಪಟ್ಟಿದ್ದು, ಸಿರಿಯಾದಲ್ಲಿ 1932 ಮಂದಿ ಸಾವನ್ನಪ್ಪಿದ್ದಾರೆ. ಅಂತಿಮವಾಗಿ ಸಾವಿನ ಸಂಖ್ಯೆ 20,000 ಮೀರಬಹುದು ಎಂದು ಅಂದಾಜಿಸಲಾಗಿದೆ. ಟರ್ಕಿ ಹಾಗೂ ಸಿರಿಯಾದಾದ್ಯಂತ ಸುಮಾರು 23 ಮಿಲಿಯನ್ ಜನರು ಈ ದುರಂತದಿಂದ ಪ್ರಭಾವಿತರಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮೂರು ಪ್ರಬಲ ಭೂಕಂಪದಿಂದ ತತ್ತರಿಸಿರುವ ಟರ್ಕಿ ದೇಶದ ನೆರವಿಗೆ ಭಾರತವು ಧಾವಿಸಿರುವ ಬೆನ್ನಲ್ಲೇ ಈಗ ಭಾರತಕ್ಕೆ ಧನ್ಯವಾದವನ್ನು ಅರ್ಪಿಸಿದೆ.

ಮತ್ತಷ್ಟು ಓದಿ: Earthquake: ಗ್ರಹ ರಚನೆ ಆಧಾರದಲ್ಲಿ 3 ದಿನಗಳ ಹಿಂದೆಯೇ ಭೂಕಂಪದ ಭವಿಷ್ಯ ನುಡಿದಿದ್ದ ಡಚ್ ವ್ಯಕ್ತಿ; ಇದು ಸಾಧ್ಯವಾ?

24 ಗಂಟೆಗಳಲ್ಲಿ ಟರ್ಕಿಯಲ್ಲಿ ಮೂರು ವಿನಾಶಕಾರಿ ಭೂಕಂಪಗಳು ಸಂಭವಿಸಿದ ನಂತರ ದೇಶಕ್ಕೆ ಹಣವನ್ನು ಒದಗಿಸಿದ ಉದಾರತೆಗಾಗಿ ಭಾರತವನ್ನು ದೋಸ್ತ್ ಎಂದು ಕರೆಯುತ್ತಾ, ಭಾರತಕ್ಕೆ ಟರ್ಕಿಯ ರಾಯಭಾರಿ ಫಿರತ್ ಸುನೆಲ್ ನವದೆಹಲಿಗೆ ಧನ್ಯವಾದ ಅರ್ಪಿಸಿದರು ಮತ್ತು ಅಗತ್ಯಕಾಲದಲ್ಲಿ ನೆರವಿಗೆ ಬಂದವನೇ ನಿಜವಾಗಿಯೂ ಸ್ನೇಹಿತ ಎಂದು ಹೇಳಿದರು. ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ಮೂರು ತಿಂಗಳ ಅವಧಿಗೆ ಟರ್ಕಿಯ 10 ಪ್ರಾಂತ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ದಕ್ಷಿಣ ಟರ್ಕಿಯಲ್ಲಿನ ವಿನಾಶಕಾರಿ ಭೂಕಂಪಗಳಿಂದ ನಲುಗಿರುವ 10 ಪ್ರಾಂತ್ಯಗಳನ್ನು ವಿಪತ್ತು ವಲಯವೆಂದು ಘೋಷಿಸಿದ ಎರ್ಡೊಗನ್ ಅವರು, ಮೂರು ತಿಂಗಳ ತುರ್ತು ಪರಿಸ್ಥಿತಿ ಮತ್ತು 7 ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದಾರೆ.

ಟರ್ಕಿಯ ವಿಪತ್ತು ಮತ್ತು ತುರ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಭೂಕಂಪದಿಂದಾಗಿ ಕನಿಷ್ಠ 20,426 ಜನ ಗಾಯಗೊಂಡಿದ್ದಾರೆ ಮತ್ತು 5,775 ಕಟ್ಟಡಗಳು ಧರೆಗುರುಳಿವೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?