AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Turkey Earthquake: ಟರ್ಕಿಯಲ್ಲಿ ಎರಡು ದಿನಗಳಲ್ಲಿ 4ನೇ ಬಾರಿಗೆ ಕಂಪಿಸಿದ ಭೂಮಿ, 5.6 ತೀವ್ರತೆ ದಾಖಲು

ಟರ್ಕಿಯಲ್ಲಿ ಎರಡು ದಿನಗಳಲ್ಲಿ ನಾಲ್ಕನೇ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ.

Turkey Earthquake: ಟರ್ಕಿಯಲ್ಲಿ ಎರಡು ದಿನಗಳಲ್ಲಿ 4ನೇ ಬಾರಿಗೆ ಕಂಪಿಸಿದ ಭೂಮಿ, 5.6 ತೀವ್ರತೆ ದಾಖಲು
ಟರ್ಕಿಯಲ್ಲಿ ಭೂಕಂಪ
ನಯನಾ ರಾಜೀವ್
|

Updated on:Feb 07, 2023 | 11:39 AM

Share

ಟರ್ಕಿಯಲ್ಲಿ ಎರಡು ದಿನಗಳಲ್ಲಿ ನಾಲ್ಕನೇ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ. ಸೋಮವಾರ ಟರ್ಕಿಯಲ್ಲಿ ಮೂರು ಭೂಕಂಪಗಳು ಸಂಭವಿಸಿತ್ತು, 4 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು, ಕಟ್ಟಡ ಅವಶೇಷಗಳಡಿ ಇನ್ನೂ ಹಲವು ಮಂದಿ ಸಿಲುಕಿರುವ ಸಾಧ್ಯತೆ ಇದೆ. 2020 ರ ಜನವರಿಯಲ್ಲಿ ಮತ್ತೊಂದು ದೊಡ್ಡ ಭೂಕಂಪದಿಂದ ಟರ್ಕಿಯು ಅಪ್ಪಳಿಸಿತ್ತು, ಇದು 6.7 ರ ತೀವ್ರತೆಯು ದೇಶದ ಪೂರ್ವ ಭಾಗದಲ್ಲಿ ಗಮನಾರ್ಹ ಹಾನಿಯನ್ನುಂಟುಮಾಡಿತು. 1999 ರಲ್ಲಿ, ಇಸ್ತಾನ್‌ಬುಲ್ ಬಳಿ 7.4 ತೀವ್ರತೆಯ ಭೂಕಂಪ ಸಂಭವಿಸಿತು ಮತ್ತು ಅಂದಾಜು 18,000 ಜನರು ಸಾವನ್ನಪ್ಪಿದರು.

ಈ ವಾರದ ಪ್ರಮುಖ ಭೂಕಂಪದ ನಂತರ ಟರ್ಕಿಯ ಪರಿಹಾರ ಪ್ರಯತ್ನಗಳಿಗೆ ಸಹಾಯ ಮಾಡಲು ಚೀನಾ ಮೊದಲ ಕಂತು 40 ಮಿಲಿಯನ್ ಯುವಾನ್ ($5.9 ಮಿಲಿಯನ್) ತುರ್ತು ಸಹಾಯವನ್ನು ನೀಡುತ್ತದೆ ಹೇಳಲಾಗಿದೆ.

ಭೂಕಂಪವು ಟರ್ಕಿ ಮತ್ತು ಸಿರಿಯಾ ನಡುವಿನ ಗಡಿಯ ಎರಡೂ ಬದಿಯ ನಿವಾಸಿಗಳ ನಿದ್ದೆ ಕಸಿದು ಸಾವಿನ ಭಯ ಹುಟ್ಟಿಸುವಂತೆ ಮಾಡಿದೆ. ಒಂದೆಡೆ ಕಟ್ಟಡಗಳು ವಾಲಿವೆ, ಇನ್ನೊಂದೆಡೆ, ಮಳೆ, ಹಿಮಪಾತದಿಂದ ಜನರು ರಾತ್ರಿ ಬಯಲು ಪ್ರದೇಶದಲ್ಲಿ ಕಾಲ ಕಳೆಯುವಂತಾಗಿತ್ತು.

ಕೈರೋದವರೆಗೂ ಕಂಪನದ ಅನುಭವವಾಯಿತು. ಯುಎಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪದ ಕೇಂದ್ರಬಿಂದು ಗಾಜಿಯಾಂಟೆಪ್‌ನಿಂದ ಸುಮಾರು 33 ಕಿಮೀ ದೂರದಲ್ಲಿ 18 ಕಿಮೀ ಆಳದಲ್ಲಿತ್ತು.

ಯುಎಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಮೊದಲ ಭೂಕಂಪದ ಕೇಂದ್ರಬಿಂದುವು ಟರ್ಕಿಯ ಕಹ್ರಮನ್ಮರಸ್ ಪ್ರಾಂತ್ಯದ ಗಾಜಿಯಾಂಟೆಪ್ ನಗರದಿಂದ 30 ಕಿಲೋಮೀಟರ್ ದೂರದಲ್ಲಿದೆ ಮತ್ತು ನೆಲದಿಂದ ಸುಮಾರು 24 ಕಿಲೋಮೀಟರ್ ಆಳದಲ್ಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:29 am, Tue, 7 February 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು