AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Turkey Earthquake: ಟರ್ಕಿ, ಸಿರಿಯಾ ಭೂಕಂಪ: ಮೃತರ ಸಂಖ್ಯೆ 21 ಸಾವಿರಕ್ಕೆ ಏರಿಕೆ

ಟರ್ಕಿ ಹಾಗೂ ಸಿರಿಯಾದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿತ್ತು, ಅದರಲ್ಲಿ ಮೃತಪಟ್ಟಿರುವವರ ಸಂಖ್ಯೆ 21 ಸಾವಿರಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿವೆ

Turkey Earthquake: ಟರ್ಕಿ, ಸಿರಿಯಾ ಭೂಕಂಪ: ಮೃತರ ಸಂಖ್ಯೆ 21 ಸಾವಿರಕ್ಕೆ ಏರಿಕೆ
ಟರ್ಕಿ ಭೂಕಂಪ
Follow us
ನಯನಾ ರಾಜೀವ್
|

Updated on: Feb 10, 2023 | 7:37 AM

ಟರ್ಕಿ ಹಾಗೂ ಸಿರಿಯಾದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿತ್ತು, ಅದರಲ್ಲಿ ಮೃತಪಟ್ಟಿರುವವರ ಸಂಖ್ಯೆ 21 ಸಾವಿರಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿವೆ. ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ಸಿರಿಯಾಕ್ಕೆ ತೆರಳುತ್ತಿದ್ದಾರೆ, ಚಳಿಯಿಂದಾಗಿ ರಕ್ಷಣಾ ಕಾರ್ಯಾಚರಣೆ ನಿಧಾನವಾಗುತ್ತಿದೆ. ಆಶ್ರಯ ಮತ್ತು ಕುಡಿಯುವ ನೀರಿಲ್ಲದ ಅನೇಕ ಮಂದಿ ಸಮಸ್ಯೆ ಎದುರಿಸುತ್ತಿದ್ದಾರೆ.

ಟರ್ಕಿಯ ದಕ್ಷಿಣ ನಗರವಾದ ಅಂಟಾಕ್ಯಾದಲ್ಲಿನ ಆಸ್ಪತ್ರೆಯ ಬಳಿ ಇರಿಸಲಾಗಿದ್ದ, ಮೃತದೇಹಗಳನ್ನು ಸಂಬಂಧಿಕರು ಹುಡುಕುತ್ತಿದ್ದರು. ಭೂಕಂಪ ಸಂಭವಿಸಿ 72 ಗಂಟೆಯಾಗಿದ್ದರಿಂದ ಅವಶೇಷಗಳಡಿ ಬದುಕುಳಿದಿರುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.

ಈ ನಡುವೆ ಭೂಕಂಪನದಿಂದಾಗಿ ನೆಲಕಚ್ಚಿರುವ ಸಹಸ್ರಾರು ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಜರನ್ನು ರಕ್ಷಣಾ ಸಿಬ್ಬಂದಿ ಹಗಲು-ರಾತ್ರಿ ಎನ್ನದೆ ರಕ್ಷಿಸಲು ಟರ್ಕಿಯಲ್ಲಿ ಅತೀವ ಪ್ರಯತ್ನ ಮುಂದುರೆಸಿದ್ದಾರೆ. ಆದರೆ, ಇಂತಹ ಸಿಬ್ಬಂದಿ ಸಂಖ್ಯೆ ಕೇವಲ 60 ಸಾವಿರದಷ್ಟಿದೆ. ಭೂಕಂಪದಿಂದ ಹಾನಿಗೆ ಒಳಗಾದ ಪ್ರದೇಶಗಳು ಅಪಾರವಾಗಿರುವುದರಿಂದ ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಜನರು ನೆರವಿಗಾಗಿ ಮೊರೆ ಇಡುತ್ತಿದ್ದಾರೆ.

ಮತ್ತಷ್ಟು ಓದಿ: Turkey Earthquake: ಟರ್ಕಿಯಲ್ಲಿ ಬೆಂಗಳೂರಿನ ಒಬ್ಬ ವ್ಯಕ್ತಿ ನಾಪತ್ತೆ, ದೂರಸ್ಥಳದಲ್ಲಿ ಸಿಲುಕಿದ ಇತರ 10 ಮಂದಿ

ಅವರ ಆಕ್ರಂದನ ಮುಗಿಲು ಮುಟ್ಟಿದೆ. ಇದೀಗ ಎರಡು ಡಜನ್ ರಾಷ್ಟ್ರಗಳಿಂದ ರಕ್ಷಣಾ ಸಿಬ್ಬಂದಿ ಟರ್ಕಿ ಹಾಗೂ ಸಿರಿಯಾಗೆ ತೆರಳಿ, ಜನರ ರಕ್ಷಣೆಗೆ ನೆರವಾಗುತ್ತಿದ್ದಾರೆ.

ಟರ್ಕಿಯಲ್ಲಿ 8.5 ಕೋಟಿ ಜನಸಂಖ್ಯೆ ಇದ್ದು, ಆ ಪೈಕಿ 1.3 ಕೋಟಿ ಜನರು ಭೂಕಂಪನದಿಂದ ಬಾಧಿತರಾಗಿದ್ದಾರೆ. 10 ಪ್ರಾಂತ್ಯಗಳಲ್ಲಿ ಟರ್ಕಿ ಸರ್ಕಾರ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಸದ್ಯ 3.8 ಲಕ್ಷ ಜನರು ಮಾತ್ರ ಸರ್ಕಾರಿ ನಿರಾಶ್ರಿತ ಕೇಂದ್ರ ಅಥವಾ ಹೋಟೆಲ್ ಗಳಲ್ಲಿ ಆಶ್ರಯ ಪಡೆದಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

WHO ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಸಿರಿಯಾಕ್ಕೆ ತೆರಳುತ್ತಿದ್ದಾರೆ ಎಂದು ಹೇಳಿದ್ದಾರೆ. 2011ರಲ್ಲಿ ಜಪಾನ್ ನಲ್ಲಿ ಭೂಕಂಪನ ಹಾಗೂ ಅದರಿಂದ ಸೃಷ್ಟಿಯಾದ ಸುನಾಮಿಗೆ 20000 ಮಂದಿ ಬಲಿಯಾಗಿದ್ದರು. ಅದಾದ ನಂತರ ಕಳೆದೊಂದು ದಶಕದ ಅವಧಿಯಲ್ಲಿ ಸಂಭವಿಸಿದ ಘೋರ ಪ್ರಕೃತಿ ವಿಕೋಪ ಈ ಭೂಕಂಪವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ