ತನ್ನನ್ನೇ ತಾನೇ ಮದುವೆಯಾಗಿದ್ದ ಟಿಕ್​​​ಟಾಕ್ ಇನ್​​ಫ್ಲೂಯೆನ್ಸರ್ ಆತ್ಮಹತ್ಯೆ

ಆಕೆಯ ಆತ್ಮಹತ್ಯೆಗೆ ಮುಂಚಿನ ದಿನಗಳಲ್ಲಿ, ಕುಬ್ರಾ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಬಗ್ಗೆ ಅನೇಕ ಅಭಿಮಾನಿಗಳು ಕಳವಳ ವ್ಯಕ್ತಪಡಿಸಿದ್ದರು. ಅವಳ ಸಾವಿಗೆ ಕೆಲವೇ ಗಂಟೆಗಳ ಮೊದಲು, ಆಕೆ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ತನ್ನ ತೂಕ ಕಡಿಮೆ ಆಗುತ್ತಿರುವ ಬಗ್ಗೆ, ಅದನ್ನು ನಿಯಂತ್ರಿಸಲು ತಾನು ಯಾವ ರೀತಿ ಕಷ್ಟಪಡುತ್ತಿದ್ದೇನೆ ಎಂಬುದರ ಬಗ್ಗೆ ಪೋಸ್ಟ್ ಮಾಡಿದ್ದಾರೆ.

ತನ್ನನ್ನೇ ತಾನೇ ಮದುವೆಯಾಗಿದ್ದ ಟಿಕ್​​​ಟಾಕ್ ಇನ್​​ಫ್ಲೂಯೆನ್ಸರ್ ಆತ್ಮಹತ್ಯೆ
ಕುಬ್ರಾ ಅಯ್ಕುತ್
Follow us
ರಶ್ಮಿ ಕಲ್ಲಕಟ್ಟ
|

Updated on: Sep 30, 2024 | 1:31 PM

ಇಸ್ತಾನ್‌ಬುಲ್‌: ತನ್ನನ್ನು ತಾನೇ ಮದುವೆಯಾಗುವ ಮೂಲಕ ಸುದ್ದಿಯಾಗಿದ್ದ ಟರ್ಕಿಶ್ ಟಿಕ್‌ಟಾಕ್ ಇನ್​​​ಫ್ಲೂಯೆನ್ಸರ್ ಕುಬ್ರಾ ಆಯ್ಕುತ್ (Kubra Aykut) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 26ರ ಹರೆಯದ ಈ ಯುವತಿ ಇಸ್ತಾನ್‌ಬುಲ್​​ನ ಸುಲ್ತಾನ್‌ಬೇಲಿ ಜಿಲ್ಲೆಯ ಐಷಾರಾಮಿ ಅಪಾರ್ಟ್‌ಮೆಂಟ್ ಕಟ್ಟಡದ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿದ್ದಾರೆ ಎಂದು ಟರ್ಕಿಶ್ ಮಾಧ್ಯಮದ ವರದಿಗಳು ಸೂಚಿಸುತ್ತವೆ. ಘಟನೆ ಸೆಪ್ಟೆಂಬರ್ 23 ರಂದು ನಡೆದಿದ್ದು, ಅಧಿಕಾರಿಗಳು ಘಟನಾ ಸ್ಥಳದಲ್ಲಿ ಆತ್ಮಹತ್ಯೆ ಟಿಪ್ಪಣಿ ಪತ್ತೆಹಚ್ಚಿದ್ದಾರೆ.

ಆಕೆಯ ಆತ್ಮಹತ್ಯೆಗೆ ಮುಂಚಿನ ದಿನಗಳಲ್ಲಿ, ಕುಬ್ರಾ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಬಗ್ಗೆ ಅನೇಕ ಅಭಿಮಾನಿಗಳು ಕಳವಳ ವ್ಯಕ್ತಪಡಿಸಿದ್ದರು. ಅವಳ ಸಾವಿಗೆ ಕೆಲವೇ ಗಂಟೆಗಳ ಮೊದಲು, ಆಕೆ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ತನ್ನ ತೂಕ ಕಡಿಮೆ ಆಗುತ್ತಿರುವ ಬಗ್ಗೆ, ಅದನ್ನು ನಿಯಂತ್ರಿಸಲು ತಾನು ಯಾವ ರೀತಿ ಕಷ್ಟಪಡುತ್ತಿದ್ದೇನೆ ಎಂಬುದರ ಬಗ್ಗೆ ಪೋಸ್ಟ್ ಮಾಡಿದ್ದಾರೆ.

“ನಾನು ನನ್ನಿಂದಾದ ಶಕ್ತಿ ಒಗ್ಗೂಡಿಸಲು ಪ್ರಯತ್ನಿಸುತ್ತಿದ್ದೇನೆ. ಆದರೆ ತೂಕ ಹೆಚ್ಚಾಗಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ. ನಾನು ಪ್ರತಿದಿನ ಒಂದು ಕೆಜಿ ಕಳೆದುಕೊಳ್ಳುತ್ತಿದ್ದೇನೆ. ನನಗೆ ಏನು ಮಾಡಬೇಕೆಂದು ನನಗೆ ತಿಳಿದಿಲ್ಲ. ನಾನು ತುರ್ತಾಗಿ ತೂಕವನ್ನು ಹೆಚ್ಚಿಸಬೇಕಾಗಿದೆ ಎಂದು ಅವರು ತಮ್ಮ ಕೊನೇ ಪೋಸ್ಟ್ ನಲ್ಲಿ ಹೇಳಿದ್ದಾರೆ.

ತನ್ನ ಕೊನೆಯ ಟಿಕ್‌ಟಾಕ್ ವಿಡಿಯೊದಲ್ಲಿ, ತನ್ನ ಆತ್ಮಹತ್ಯೆಗೆ ಸ್ವಲ್ಪ ಮೊದಲು, ಕುಬ್ರಾ ತನ್ನ ಮನೆಯನ್ನು ಸ್ವಚ್ಛಗೊಳಿಸುತ್ತಿದ್ದಳು. ಆಯ್ಕುತ್ ತನ್ನ ಟಿಕ್‌ಟಾಕ್ ಖಾತೆಯಲ್ಲಿ ಒಂದು ಮಿಲಿಯನ್ ಅನುಯಾಯಿಗಳನ್ನು ಮತ್ತು ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ 2,07,000 ಅನುಯಾಯಿಗಳನ್ನು ಹೊಂದಿದ್ದಾಳೆ.

ಕುಬ್ರಾ 2023 ರಲ್ಲಿ ಟಿಕ್‌ಟಾಕ್‌ನಲ್ಲಿ ತನ್ನ ವಿಶಿಷ್ಟ ಮತ್ತು ಸಶಕ್ತ “ವೆಡ್ಡಿಂಗ್ ವಿತ್ ಎ ಗ್ರೂಮ್” ಸರಣಿಯೊಂದಿಗೆ ಗಮನಾರ್ಹ ಜನಪ್ರಿಯತೆಯನ್ನು ಗಳಿಸಿದರು. ಆಕೆ ಸುಂದರವಾದ ಬಿಳಿ ಗೌನ್ ಮತ್ತು ಕಿರೀಟವನ್ನು ಧರಿಸಿ, ನನಗೆ ಯೋಗ್ಯ ವರನನ್ನು ನಾನು ಹುಡುಕಲು ಸಾಧ್ಯವಾಗಿಲ್ಲ, ಹಾಗಾಗಿ ನನ್ನನ್ನು ನಾನೇ ಮದುವೆಯಾಗುತ್ತಿದ್ದೇನೆ ಎಂದು ಹೇಳಿ ಮದುವೆಯಾಗಿದ್ದಾರೆ.

ಮತ್ತೊಂದು ವಿಡಿಯೊದಲ್ಲಿ, ಕುಬ್ರಾ ಕಾರಿನಲ್ಲಿ ಹೋಗುವುದನ್ನು ಸೆರೆಹಿಡಿಯಲಾಗಿದೆ, ಆಕೆಯ ಕೈಯಲ್ಲಿ ಹೂಗುಚ್ಛವಿದೆ, ಎಲ್ಲೆಡೆ ಹರ್ಷೋದ್ಗಾರ ಮೊಳಗುತ್ತಿದೆ. ಪ್ರತ್ಯೇಕ ವೈರಲ್ ಕ್ಲಿಪ್‌ನಲ್ಲಿ, ಅವಳು ತನ್ನ ಮದುವೆಯ ಉಡುಪನ್ನು ಧರಿಸಿ ಹೆದರಿಕೊಂಡ ವಧು ಎಂದು ತಮಾಷೆಯಾಗಿ ಶೀರ್ಷಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಸೊಮಾಲಿಯಾದಲ್ಲಿ ಅವಳಿ ಸ್ಫೋಟ: 6 ಮಂದಿ ಸಾವು, 10 ಜನರಿಗೆ ಗಾಯ

ಟರ್ಕಿಯ ಅಧಿಕಾರಿಗಳು ಆಯ್ಕುತ್ ಸಾವಿನ ಸುತ್ತಲಿನ ಸನ್ನಿವೇಶಗಳ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದಾರೆ.ಆಕೆಯ ದೇಹವನ್ನು ಪ್ರಸ್ತುತ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಆಕೆಯ ಅಂತ್ಯಕ್ರಿಯೆಯು ಆಕೆಯ ಪೋಷಕರು ವಾಸಿಸುವ ಆಕೆಯ ತವರೂರಿನಲ್ಲಿ ನಡೆಯಲಿದೆ ಮತ್ತು ಹಲವಾರು ಸಹ ಟಿಕ್‌ಟಾಕ್ ಪ್ರಭಾವಿಗಳು ಭಾಗವಹಿಸುವ ನಿರೀಕ್ಷೆಯಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು