AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter Logo: ಟ್ವಿಟ್ಟರ್ ಲೋಗೋ ಬದಲಾಯಿಸಿದ ಎಲಾನ್ ಮಸ್ಕ್​: ನೀಲಿ ಹಕ್ಕಿ ಬದಲು ನಾಯಿ ಚಿತ್ರ

ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್(Elon Musk) ನಿತ್ಯ ಒಂದಲ್ಲಾ ಒಂದು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಇದೀಗ ಟ್ವಿಟ್ಟರ್ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರವನ್ನು ಹಾಕಿದ್ದು ಕುತೂಹಲ ಮೂಡಿಸಿದೆ.

Twitter Logo: ಟ್ವಿಟ್ಟರ್ ಲೋಗೋ ಬದಲಾಯಿಸಿದ ಎಲಾನ್ ಮಸ್ಕ್​: ನೀಲಿ ಹಕ್ಕಿ ಬದಲು ನಾಯಿ ಚಿತ್ರ
ಟ್ವಿಟ್ಟರ್ ಲೋಗೋImage Credit source: India TV
ನಯನಾ ರಾಜೀವ್
|

Updated on: Apr 04, 2023 | 8:52 AM

Share

ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್(Elon Musk) ನಿತ್ಯ ಒಂದಲ್ಲಾ ಒಂದು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಇದೀಗ ಟ್ವಿಟ್ಟರ್ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರವನ್ನು ಹಾಕಿದ್ದು ಕುತೂಹಲ ಮೂಡಿಸಿದೆ. ಹಕ್ಕಿಯ ಜಾಗಕ್ಕೆ ಕ್ರಿಪ್ಟೋಕರೆನ್ಸಿ ಡಾಗ್​ಕಾಯಿನ್​ನ ನಾಯಿಯ ಮೀಮ್ಸ್ ಫೋಟೋವನ್ನು ಬಳಸಿದ್ದಾರೆ. ಮಸ್ಕ್​ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಆದರೆ ಇಲ್ಲೊಂದು ಟ್ವಿಸ್ಟ್​ ಇದೆ. ಟ್ವಿಟ್ಟರ್ ಬದಲಾವಣೆ ಕೇವಲ ವೆಬ್​ ಆವೃತ್ತಿಗೆ ಮಾತ್ರ ಸೀಮಿತವಾಗಿದೆ, ಮೊಬೈಲ್​ನಲ್ಲಿ ಪಕ್ಷಿಯ ಲೋಗೋನೆ ಕಾಣಿಸಲಿದೆ.

ಬಿಟ್​ ಕಾಯಿನ್​ನಂತಹ ಇತರೆ ಕ್ರಿಪ್ಟೋ ಕರೆನ್ಸಿಯನ್ನು ಅಪಹಾಸ್ಯ ಮಾಡಲು 2013ರಲ್ಲಿ ತಮಾಷೆಗಾಗಿ ಈ ನಾಯಿ ಚಿತ್ರ ರಚಿಸಲಾಗಿತ್ತು. 2022ರ ಏಪ್ರಿಲ್​ನಲ್ಲಿ ಟ್ವಿಟ್ಟರ್ ಖರೀದಿಸುವ 22 ಬಿಲಿಯನ್ ಡಾಲರ್ ಒಪ್ಪಂದವನ್ನು ಮಸ್ಕ್ ಆರಮಭಿಸಿದ್ದರು. ಅವರು ಸ್ಪ್ಯಾಮ್ ಖಾತೆಗಳನ್ನು ತೆಗೆದುಹಾಕಲು ಯೋಜಿಸಿದ್ದರು.

ಇದಲ್ಲದೆ, Twitter ನ CEO ತನ್ನ ಮತ್ತು ಅನಾಮಧೇಯ ಖಾತೆಯ ನಡುವಿನ ಸಂಭಾಷಣೆಯ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ, ಅಲ್ಲಿ ನಂತರದವರು ಪಕ್ಷಿ ಲೋಗೋವನ್ನು ನಾಯಿಗೆ ಬದಲಾಯಿಸಲು ಕೇಳುತ್ತಿದ್ದಾರೆ. ಈ ಪೋಸ್ಟ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡ ಮಸ್ಕ್, ಭರವಸೆ ನೀಡಿದಂತೆ ಎಂದು ಬರೆದಿದ್ದಾರೆ. ಈ ಚರ್ಚೆಯು ಮಾರ್ಚ್ 26, 2022 ರಂದು ನಡೆಯಿತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ