AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದ ಸಮುದ್ರತೀರದಲ್ಲಿ ವಿಮಾನ ಪತನ; ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು

69 ವರ್ಷದ ಪೈಲಟ್ ಮೂವರು ಪ್ರಯಾಣಿಕರನ್ನು ಜಾಯ್ ರೈಡ್‌ಗೆ ವಿಮಾನದಲ್ಲಿ ಕರೆದುಕೊಂಡು ಹೋಗಿದ್ದರು. ಆ ಮೂವರಲ್ಲಿ ಇಬ್ಬರು ಮಕ್ಕಳಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆಸ್ಟ್ರೇಲಿಯಾದ ಸಮುದ್ರತೀರದಲ್ಲಿ ವಿಮಾನ ಪತನ; ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು
ವಿಮಾನ ಪತನ
TV9 Web
| Updated By: ಸುಷ್ಮಾ ಚಕ್ರೆ|

Updated on: Dec 19, 2021 | 1:04 PM

Share

ನವದೆಹಲಿ: ಆಸ್ಟ್ರೇಲಿಯದ ಪೂರ್ವ ಕರಾವಳಿಯಲ್ಲಿ ಇಂದು ಬೆಳಗ್ಗೆ ಹಗುರ ವಿಮಾನವು ಸಮುದ್ರದ ನೀರಿನೊಳಗೆ ಪತನಗೊಂಡಿದ್ದು, ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಮಾನದಲ್ಲಿ ಓರ್ವ ಪೈಲಟ್ ಹಾಗೂ ಮೂವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅವರೆಲ್ಲರೂ ಮೃತಪಟ್ಟಿದ್ದಾರೆ.

69 ವರ್ಷದ ಪೈಲಟ್ ಮೂವರು ಪ್ರಯಾಣಿಕರನ್ನು ಜಾಯ್ ರೈಡ್‌ಗೆ ವಿಮಾನದಲ್ಲಿ ಕರೆದುಕೊಂಡು ಹೋಗಿದ್ದರು. ಆ ಮೂವರಲ್ಲಿ ಇಬ್ಬರು ಮಕ್ಕಳಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಬ್ರಿಸ್ಬೇನ್‌ನ ಈಶಾನ್ಯಕ್ಕೆ ಜೌಗು ಪ್ರದೇಶಕ್ಕೆ ಇಳಿದಿದೆ. ರಾಕ್‌ವೆಲ್ ಇಂಟರ್‌ನ್ಯಾಶನಲ್ ವಿಮಾನವು ಮೊರೆಟನ್ ಕೊಲ್ಲಿಯಲ್ಲಿ ತಲೆಕೆಳಗಾಗಿ ಬಿದ್ದು, ನೀರಿನಲ್ಲಿ ತೇಲುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

“ಇದೊಂದು ದುರಂತ ಅಪಘಾತವಾಗಿದೆ. ಕ್ರಿಸ್‌ಮಸ್‌ಗೆ ಕೆಲವೇ ದಿನಗಳು ಉಳಿದಿರುವಾಗ ಈ ರೀತಿಯ ದುರಂತ ನಡೆಯಬಾರದಿತ್ತು. ಒಂದೇ ಕುಟುಂಬದ ಮೂವರು ಹಾಗೂ ಪೈಲಟ್ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ದಡದತ್ತ ಸಾಗಿಸುವ ಕೆಲಸ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಮಾನ ಪತನಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ. ಮುಂದಿನ ಆರರಿಂದ ಎಂಟು ವಾರಗಳಲ್ಲಿ ಅಪಘಾತದ ಸಂಭವನೀಯ ಕಾರಣದ ವರದಿಯನ್ನು ಪೂರ್ಣಗೊಳಿಸಲಾಗುವುದು ಎಂದು ಆಸ್ಟ್ರೇಲಿಯಾದ ಸಾರಿಗೆ ಸುರಕ್ಷತಾ ಮಂಡಳಿಯ ಆಯುಕ್ತ ಆಂಗಸ್ ಮಿಚೆಲ್ ಹೇಳಿದ್ದಾರೆ.

ಇದನ್ನೂ ಓದಿ: Coronavirus: ಲಂಡನ್, ದುಬೈನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 6 ಜನರಿಗೆ ಕೊರೊನಾ ಸೋಂಕು

ಡೊಮಿನಿಕನ್ ರಿಪಬ್ಲಿಕ್‌ನ ಸ್ಯಾಂಟೋ ಡೊಮಿಂಗೊದಲ್ಲಿ ಖಾಸಗಿ ವಿಮಾನ ಪತನ, 9 ಜನ ದುರ್ಮರಣ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!