ನವದೆಹಲಿ: ಆಸ್ಟ್ರೇಲಿಯದ ಪೂರ್ವ ಕರಾವಳಿಯಲ್ಲಿ ಇಂದು ಬೆಳಗ್ಗೆ ಹಗುರ ವಿಮಾನವು ಸಮುದ್ರದ ನೀರಿನೊಳಗೆ ಪತನಗೊಂಡಿದ್ದು, ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಮಾನದಲ್ಲಿ ಓರ್ವ ಪೈಲಟ್ ಹಾಗೂ ಮೂವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅವರೆಲ್ಲರೂ ಮೃತಪಟ್ಟಿದ್ದಾರೆ.
69 ವರ್ಷದ ಪೈಲಟ್ ಮೂವರು ಪ್ರಯಾಣಿಕರನ್ನು ಜಾಯ್ ರೈಡ್‌ಗೆ ವಿಮಾನದಲ್ಲಿ ಕರೆದುಕೊಂಡು ಹೋಗಿದ್ದರು. ಆ ಮೂವರಲ್ಲಿ ಇಬ್ಬರು ಮಕ್ಕಳಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಬ್ರಿಸ್ಬೇನ್‌ನ ಈಶಾನ್ಯಕ್ಕೆ ಜೌಗು ಪ್ರದೇಶಕ್ಕೆ ಇಳಿದಿದೆ. ರಾಕ್‌ವೆಲ್ ಇಂಟರ್‌ನ್ಯಾಶನಲ್ ವಿಮಾನವು ಮೊರೆಟನ್ ಕೊಲ್ಲಿಯಲ್ಲಿ ತಲೆಕೆಳಗಾಗಿ ಬಿದ್ದು, ನೀರಿನಲ್ಲಿ ತೇಲುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
“ಇದೊಂದು ದುರಂತ ಅಪಘಾತವಾಗಿದೆ. ಕ್ರಿಸ್‌ಮಸ್‌ಗೆ ಕೆಲವೇ ದಿನಗಳು ಉಳಿದಿರುವಾಗ ಈ ರೀತಿಯ ದುರಂತ ನಡೆಯಬಾರದಿತ್ತು. ಒಂದೇ ಕುಟುಂಬದ ಮೂವರು ಹಾಗೂ ಪೈಲಟ್ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ದಡದತ್ತ ಸಾಗಿಸುವ ಕೆಲಸ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವಿಮಾನ ಪತನಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ. ಮುಂದಿನ ಆರರಿಂದ ಎಂಟು ವಾರಗಳಲ್ಲಿ ಅಪಘಾತದ ಸಂಭವನೀಯ ಕಾರಣದ ವರದಿಯನ್ನು ಪೂರ್ಣಗೊಳಿಸಲಾಗುವುದು ಎಂದು ಆಸ್ಟ್ರೇಲಿಯಾದ ಸಾರಿಗೆ ಸುರಕ್ಷತಾ ಮಂಡಳಿಯ ಆಯುಕ್ತ ಆಂಗಸ್ ಮಿಚೆಲ್ ಹೇಳಿದ್ದಾರೆ.
ಇದನ್ನೂ ಓದಿ: Coronavirus: ಲಂಡನ್, ದುಬೈನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 6 ಜನರಿಗೆ ಕೊರೊನಾ ಸೋಂಕು
ಡೊಮಿನಿಕನ್ ರಿಪಬ್ಲಿಕ್‌ನ ಸ್ಯಾಂಟೋ ಡೊಮಿಂಗೊದಲ್ಲಿ ಖಾಸಗಿ ವಿಮಾನ ಪತನ, 9 ಜನ ದುರ್ಮರಣ