AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ- ಪಾಕ್ ವಿಭಜನೆ ವೇಳೆ ಬೇರ್ಪಟ್ಟು 76 ವರ್ಷಗಳ ನಂತರ ಒಂದಾದ ಸೋದರ ಸಂಬಂಧಿಗಳು

ಮೊಹಮ್ಮದ್ ಇಸ್ಮಾಯಿಲ್ ಲಾಹೋರ್‌ನಿಂದ ಸುಮಾರು 200 ಕಿಮೀ ದೂರದಲ್ಲಿರುವ ಪಂಜಾಬ್‌ನ ಸಾಹಿವಾಲ್ ಜಿಲ್ಲೆಗೆ ಸೇರಿದವರು ಮತ್ತು ಸುರೀಂದರ್ ಕೌರ್ ಜಲಂಧರ್‌ನವರು. ಮೊಹಮ್ಮದ್ ಇಸ್ಮಾಯಿಲ್ ಮತ್ತು ಸುರೀಂದರ್ ಕೌರ್ ಅವರ ಕುಟುಂಬಗಳು ವಿಭಜನೆಯ ಮೊದಲು ಜಲಂಧರ್ ಜಿಲ್ಲೆಯ ಶಾಕೋಟ್ ಪಟ್ಟಣದಲ್ಲಿ ವಾಸಿಸುತ್ತಿದ್ದು ಗಲಭೆಗಳಿಂದಾಗಿ ಅವರಿಬ್ಬರೂ ಬೇರ್ಪಡಬೇಕಾಯಿತು.

ಭಾರತ- ಪಾಕ್ ವಿಭಜನೆ ವೇಳೆ ಬೇರ್ಪಟ್ಟು 76 ವರ್ಷಗಳ ನಂತರ ಒಂದಾದ ಸೋದರ ಸಂಬಂಧಿಗಳು
ಮೊಹಮ್ಮದ್ ಇಸ್ಮಾಯಿಲ್ ಮತ್ತು ಅವರ ಸೋದರಸಂಬಂಧಿ ಸುರೀಂದರ್ ಕೌರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Oct 23, 2023 | 8:31 PM

Share

ಲಾಹೋರ್ ಅಕ್ಟೋಬರ್ 23: 76 ವರ್ಷಗಳ ಹಿಂದೆ ಭಾರತ- ಪಾಕಿಸ್ತಾನ (India- Pakisatan) ವಿಭಜನೆಯ ಸಂದರ್ಭದಲ್ಲಿ ಬೇರ್ಪಟ್ಟ ಇಬ್ಬರು ಸೋದರ ಸಂಬಂಧಿಗಳು ಕರ್ತಾರ್‌ಪುರ ಕಾರಿಡಾರ್‌ನಲ್ಲಿ (Kartarpur Corridor) ಒಂದಾಗಿದ್ದಾರೆ. ಈ ಭಾವನಾತ್ಮಕ ಭೇಟಿಗೆ ಕಾರಣವಾಗಿದ್ದು ಸಾಮಾಜಿಕ ಮಾಧ್ಯಮ ಎಂದು ಪಾಕಿಸ್ತಾನದ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. 80 ರ ಹರೆಯದವರಾಗಿರುವ ಮೊಹಮ್ಮದ್ ಇಸ್ಮಾಯಿಲ್ ಮತ್ತು ಅವರ ಸೋದರಸಂಬಂಧಿ ಸುರೀಂದರ್ ಕೌರ್,  ಪಾಕಿಸ್ತಾನ ಮತ್ತು ಭಾರತದ ತಮ್ಮ ನಗರಗಳಿಂದ ಕರ್ತಾರ್‌ಪುರದ ಗುರುದ್ವಾರ ದರ್ಬಾರ್ ಸಾಹಿಬ್(Gurdwara Darbar Sahib )ತಲುಪಿ ಭಾನುವಾರ ಪರಸ್ಪರ ಭೇಟಿಯಾಗಿದ್ದಾರೆ.

ಕರಾತಾರ್‌ಪುರ ಸಾಹಿಬ್ ಆಡಳಿತವು ಸೋದರಸಂಬಂಧಿಗಳ ಪುನರ್ಮಿಲನಕ್ಕೆ ಅನುಕೂಲ ಮಾಡಿಕೊಟ್ಟಿತು ಮತ್ತು ಅವರಿಗೆ ಸಿಹಿತಿಂಡಿಗಳು ಮತ್ತು ಲಾಂಗರ್ ನೀಡಿತು ಎಂದು ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ) ಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಮೊಹಮ್ಮದ್ ಇಸ್ಮಾಯಿಲ್ ಲಾಹೋರ್‌ನಿಂದ ಸುಮಾರು 200 ಕಿಮೀ ದೂರದಲ್ಲಿರುವ ಪಂಜಾಬ್‌ನ ಸಾಹಿವಾಲ್ ಜಿಲ್ಲೆಗೆ ಸೇರಿದವರು ಮತ್ತು ಸುರೀಂದರ್ ಕೌರ್ ಜಲಂಧರ್‌ನವರು. ಮೊಹಮ್ಮದ್ ಇಸ್ಮಾಯಿಲ್ ಮತ್ತು ಸುರೀಂದರ್ ಕೌರ್ ಅವರ ಕುಟುಂಬಗಳು ವಿಭಜನೆಯ ಮೊದಲು ಜಲಂಧರ್ ಜಿಲ್ಲೆಯ ಶಾಕೋಟ್ ಪಟ್ಟಣದಲ್ಲಿ ವಾಸಿಸುತ್ತಿದ್ದು ಗಲಭೆಗಳಿಂದಾಗಿ ಅವರಿಬ್ಬರೂ ಬೇರ್ಪಡಬೇಕಾಯಿತು.

ಪಾಕಿಸ್ತಾನಿ ಪಂಜಾಬಿ ಯೂಟ್ಯೂಬ್ ಚಾನೆಲ್ ಮೊಹಮ್ಮದ್ ಇಸ್ಮಾಯಿಲ್ ಕಥೆಯನ್ನು ಪೋಸ್ಟ್ ಮಾಡಿದ್ದು, ಅದರ ನಂತರ ಆಸ್ಟ್ರೇಲಿಯಾದ ಸರ್ದಾರ್ ಮಿಷನ್ ಸಿಂಗ್ ಅವರನ್ನು ಸಂಪರ್ಕಿಸಿ ಭಾರತದಲ್ಲಿ ಕಾಣೆಯಾದ ಅವರ ಕುಟುಂಬ ಸದಸ್ಯರ ಬಗ್ಗೆ ಮಾಹಿತಿ ನೀಡಿದರು.

ಸಿಂಗ್ ಮೊಹಮ್ಮದ್ ಇಸ್ಮಾಯಿಲ್‌ಗೆ ಸುರೀಂದರ್ ಕೌರ್ ಅವರ ದೂರವಾಣಿ ಸಂಖ್ಯೆಯನ್ನು ನೀಡಿದರು, ನಂತರ ಇಬ್ಬರೂ ಸೋದರಸಂಬಂಧಿಗಳು ಮಾತನಾಡಿದ್ದು ಕರ್ತಾರ್‌ಪುರ ಕಾರಿಡಾರ್ ಮೂಲಕ ಗುರುದ್ವಾರ ದರ್ಬಾರ್ ಸಾಹಿಬ್‌ನಲ್ಲಿ ಭೇಟಿಯಾಗಲು ನಿರ್ಧರಿಸಿದರು.

ಇದನ್ನೂ ಓದಿ: Viral Video: 22 ವರ್ಷಗಳ ನಂತರ ಒಡಹುಟ್ಟಿದವರ ಪುನರ್ಮಿಲನ

ಅವರ ಮಿಲನದ ಸಂದರ್ಭದಲ್ಲಿ ಭಾವನಾತ್ಮಕ ದೃಶ್ಯಗಳು ಕಂಡುಬಂದವು.

ಭಾರತದ ಸುರಿಂದರ್ ಕೌರ್ ಮತ್ತು ಅವರ ಕುಟುಂಬ ಸದಸ್ಯರು ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿದರು.ಕರ್ತಾರ್‌ಪುರ ಕಾರಿಡಾರ್ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಗುರುದ್ವಾರ ದರ್ಬಾರ್ ಸಾಹಿಬ್ ಅನ್ನು ಸಿಖ್ ಧರ್ಮದ ಸಂಸ್ಥಾಪಕ ಗುರುನಾನಕ್ ದೇವ್ ಅವರ ಅಂತಿಮ ವಿಶ್ರಾಂತಿ ಸ್ಥಳವನ್ನು ಭಾರತದ ಪಂಜಾಬ್ ರಾಜ್ಯದ ಗುರುದಾಸ್‌ಪುರ ಜಿಲ್ಲೆಯ ಡೇರಾ ಬಾಬಾ ನಾನಕ್ ದೇಗುಲದೊಂದಿಗೆ ಸಂಪರ್ಕಿಸುತ್ತದೆ. ಭಾರತೀಯ ಸಿಖ್ ಯಾತ್ರಿಕರು 4 ಕಿಮೀ ಉದ್ದದ ಕಾರಿಡಾರ್ ಅನ್ನು ಪ್ರವೇಶಿಸಬಹುದು ಮತ್ತು ವೀಸಾಗಳಿಲ್ಲದೆ ದರ್ಬಾರ್ ಸಾಹಿಬ್ ಅನ್ನು ಭೇಟಿ ಮಾಡಬಹುದು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:28 pm, Mon, 23 October 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು