ಬಾಂಗ್ಲಾದೇಶದಲ್ಲಿ ರೈಲು ಡಿಕ್ಕಿ; 15 ಮಂದಿ ಸಾವು, ಹಲವರಿಗೆ ಗಾಯ

ರಾಜಧಾನಿ ಢಾಕಾದಿಂದ ಸುಮಾರು 80 ಕಿಲೋಮೀಟರ್ (50 ಮೈಲಿ) ದೂರದಲ್ಲಿರುವ ಭೈರಬ್‌ನಲ್ಲಿ ಪ್ರಯಾಣಿಕ ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಸಿರಾಜುಲ್ ಇಸ್ಲಾಂ ತಿಳಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ರೈಲು ಡಿಕ್ಕಿ; 15 ಮಂದಿ ಸಾವು, ಹಲವರಿಗೆ ಗಾಯ
ಬಾಂಗ್ಲಾದೇಶ ರೈಲು ಡಿಕ್ಕಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 23, 2023 | 6:08 PM

ಢಾಕಾ ಅಕ್ಟೋಬರ್23: ಬಾಂಗ್ಲಾದೇಶದಲ್ಲಿ (Bangladesh )ಸೋಮವಾರ ಎರಡು ರೈಲುಗಳು ಡಿಕ್ಕಿ ಹೊಡೆದು 15 ಜನರು ಸಾವಿಗೀಡಾಗಿದ್ದು , ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಧಾನಿ ಢಾಕಾದಿಂದ (Dhaka) ಸುಮಾರು 80 ಕಿಲೋಮೀಟರ್ (50 ಮೈಲಿ) ದೂರದಲ್ಲಿರುವ ಭೈರಬ್‌ನಲ್ಲಿ (Bhairab) ಪ್ರಯಾಣಿಕ ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಸಿರಾಜುಲ್ ಇಸ್ಲಾಂ ತಿಳಿಸಿದ್ದಾರೆ.

ನಾವು 15 ಶವಗಳನ್ನು ಹೊರತೆಗೆದಿದ್ದೇವೆ, ಅನೇಕರು ಗಾಯಗೊಂಡಿದ್ದಾರೆ” ಎಂದು ಭೈರಬ್‌ನ ಸರ್ಕಾರಿ ಆಡಳಿತಾಧಿಕಾರಿ ಸಾದಿಕುರ್ ರೆಹಮಾನ್ ಎಎಫ್​​ಪಿಗೆ ತಿಳಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುತ್ತದೆೆ. ಕನಿಷ್ಠ 100 ಜನರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಸಂಜೆ 4:00 ಗಂಟೆಗೆ (1000 GMT) ಸಂಭವಿಸಿದ ಈ ಅಪಘಾತವು ಒಂದು ರೈಲು ಇನ್ನೊಂದು ಮಾರ್ಗವನ್ನು ಪ್ರವೇಶಿಸಿದಾಗ ಸಂಭವಿಸಿದೆ ಎಂದು ರೆಹಮಾನ್ ಹೇಳಿದರು.

ರೈಲು ಅಪಘಾತಗಳು ಬಾಂಗ್ಲಾದೇಶದಲ್ಲಿ ಸಾಮಾನ್ಯವಾಗಿದೆ. ಸಾಮಾನ್ಯವಾಗಿ ಕಳಪೆ ಸಿಗ್ನಲಿಂಗ್, ನಿರ್ಲಕ್ಷ್ಯ, ಹಳೆಯ ಟ್ರ್ಯಾಕ್‌ಗಳು ಅಥವಾ ಇತರ ಕಡಿಮೆ ಮೂಲಸೌಕರ್ಯಗಳಿಂದ ಉಂಟಾಗುತ್ತದೆ.

ವರದಿಗಳ ಪ್ರಕಾರ, ಹಾನಿಗೊಳಗಾದ ಕೋಚ್‌ಗಳ ಕೆಳಗೆ ಗಾಯಗೊಂಡ ವ್ಯಕ್ತಿಗಳು ಇದ್ದು ಹಲವಾರು ಜನರು ರೈಲಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಇದನ್ನೂ ಓದಿ: ವೇಶ್ಯಾವಾಟಿಕೆಯನ್ನು ಕೂಲ್ ವೃತ್ತಿ ಎಂದ ಕಾಮಿಡಿಯನ್ ವಿದುಷಿ ಸ್ವರೂಪ್; ಜನರಿಂದ ಟೀಕೆ

ಎಗರೋಸಿಂಧೂರು ಗೋಧೂಳಿ ರೈಲಿನ ಎರಡು ಹಿಂಬದಿ ಬೋಗಿಗಳಿಗೆ ಹಾನಿಯಾಗಿದೆ. “ಘಟನೆಯು ಮಧ್ಯಾಹ್ನ 3.30 ರ ಸುಮಾರಿಗೆ ನಡೆದಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಢಾಕಾದಿಂದ ಚಿತ್ತಗಾಂಗ್, ಸಿಲ್ಹೆಟ್ ಮತ್ತು ಕಿಶೋರ್ಗಂಜ್ಗೆ ರೈಲು ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ” ಎಂದು ಭೈರಬ್ ಸ್ಟೇಷನ್ ಮಾಸ್ಟರ್ ಯೂಸುಫ್ ಹೇಳಿದ್ದಾರೆ. ಅಪಘಾತಕ್ಕೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:48 pm, Mon, 23 October 23

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್