AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಯುದ್ಧದ ನಡುವೆ ತೈಲ ರಫ್ತು ಸಂಘಟನೆಯಾದ OPECನಿಂದ ಹೊರಬಂದ ಯುಎಇ

ಇರಾನ್ ಯುದ್ಧದ ನಡುವೆ ತೈಲ ರಫ್ತು ಗುಂಪುಗಳಾದ OPEC, OPEC+ಗಳಿಂದ ಹೊರಬರುವುದಾಗಿ ಯುಎಇ ಘೋಷಿಸಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಪ್ರಮುಖ ತೈಲ ಉತ್ಪಾದಕ ಗುಂಪುಗಳಾದ OPEC ಮತ್ತು OPEC+ಗಳಿಂದ ಮೇ 1ರಿಂದ ಜಾರಿಗೆ ಬರುವಂತೆ ಹೊರಬರುವುದಾಗಿ ಘೋಷಿಸಿದೆ. ಯುನೈಟೆಡ್ ಸ್ಟೇಟ್ಸ್, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷವು ಈಗಾಗಲೇ ಭಾರಿ ಇಂಧನ ಬಿಕ್ಕಟ್ಟನ್ನು ಉಂಟುಮಾಡಿದೆ.

ಇರಾನ್ ಯುದ್ಧದ ನಡುವೆ ತೈಲ ರಫ್ತು ಸಂಘಟನೆಯಾದ OPECನಿಂದ ಹೊರಬಂದ ಯುಎಇ
Oil ProductionImage Credit source: TV9
ಸುಷ್ಮಾ ಚಕ್ರೆ
|

Updated on: Apr 28, 2026 | 10:28 PM

Share

ನವದೆಹಲಿ, ಏಪ್ರಿಲ್ 28: ಜಾಗತಿಕ ತೈಲ ಬಿಕ್ಕಟ್ಟಿನ ಮಧ್ಯೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಪೆಟ್ರೋಲಿಯಂ ಪೂರೈಕೆ ಮಾಡುವ ಸಂಘಟನೆಗಳಾದ ಒಪೆಕ್ ಮತ್ತು ಒಪೆಕ್+ನಿಂದ ಯುಎಇ ಹಿಂದೆ ಸರಿದಿದೆ. ಯುಎಇಯ ಇಂಧನ ಸಚಿವ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಈ ನಿರ್ಧಾರವನ್ನು ಸ್ವತಂತ್ರವಾಗಿ ತೆಗೆದುಕೊಳ್ಳಲಾಗಿದೆ. ಸೌದಿ ಅರೇಬಿಯಾ (Saudi Arabia) ಸೇರಿದಂತೆ ಯಾವುದೇ ಇತರ ದೇಶದೊಂದಿಗೆ ನೇರ ಸಮಾಲೋಚನೆ ನಡೆಸಿಲ್ಲ. ನಾವು ನಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದೇವೆ” ಎಂದು ಹೇಳಿದ್ದಾರೆ.

ಇರಾನಿನ ಬೆದರಿಕೆಗಳು ಮತ್ತು ಹಡಗುಗಳ ಮೇಲಿನ ದಾಳಿಗಳಿಂದಾಗಿ OPEC ದೇಶಗಳು ಈಗಾಗಲೇ ಹಾರ್ಮುಜ್ ಜಲಸಂಧಿಯ ಮೂಲಕ ರಫ್ತುಗಳನ್ನು ಕಳುಹಿಸುವಲ್ಲಿ ತೊಂದರೆಗಳನ್ನು ಎದುರಿಸುತ್ತಿವೆ. ಹಾರ್ಮುಜ್ ಜಲಸಂಧಿಯು ಇರಾನ್ ಮತ್ತು ಒಮಾನ್ ನಡುವಿನ ಕಿರಿದಾದ ಚಾನಲ್ ಆಗಿದ್ದು, ವಿಶ್ವದ ಐದನೇ ಒಂದು ಭಾಗದಷ್ಟು ಕಚ್ಚಾ ತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲವನ್ನು ಈ ಮಾರ್ಗದ ಮೂಲಕ ಸಾಗಿಸಲಾಗುತ್ತದೆ. ಈಗಾಗಲೇ ಹಾರ್ಮುಜ್ ಜಲಸಂಧಿಯ ದಿಗ್ಬಂಧನವನ್ನು ಎದುರಿಸುತ್ತಿರುವ OPEC, ಯುಎಇಯ ಈ ಕ್ರಮದಿಂದ ದೊಡ್ಡ ಹಿನ್ನಡೆಯನ್ನು ಎದುರಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅಮೆರಿಕ-ಇರಾನ್ ನಡುವೆ ಶಾಂತಿ ಮಾತುಕತೆಯ ಪಾಕ್ ಪ್ರಯತ್ನ ವಿಫಲ; ಯುಎಸ್​ ನಿಯೋಗದ ಭೇಟಿಗೆ ಒಪ್ಪದ ಟೆಹ್ರಾನ್

ಯುಎಇಯ ಉತ್ಪಾದನಾ ನೀತಿ ಮತ್ತು ಅದರ ಪ್ರಸ್ತುತ ಮತ್ತು ಭವಿಷ್ಯದ ಸಾಮರ್ಥ್ಯದ ಸಮಗ್ರ ಪರಿಶೀಲನೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಮ್ಮ ರಾಷ್ಟ್ರೀಯ ಹಿತಾಸಕ್ತಿಗೆ ಕೊಡುಗೆ ನೀಡುವ ಮತ್ತು ಮಾರುಕಟ್ಟೆಯ ತಕ್ಷಣದ ಅಗತ್ಯಗಳನ್ನು ಪೂರೈಸುವ ನಮ್ಮ ಬದ್ಧತೆಯನ್ನು ಈ ನಿರ್ಧಾರ ಆಧರಿಸಿದೆ ಎಂದು ಯುಎಇ ಸರ್ಕಾರ ಹೇಳಿದೆ.

ತೈಲ ಬೆಲೆಗಳನ್ನು ಹೆಚ್ಚಿಸುವ ಮೂಲಕ ಜಗತ್ತಿನ ಉಳಿದ ಭಾಗಗಳನ್ನು ದೋಚುತ್ತಿದೆ ಎಂದು ಆರೋಪಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಒಪೆಕ್ ನಿಂದ ಯುಎಇ ಹಿಂದೆ ಸರಿದಿರುವುದು ದೊಡ್ಡ ಗೆಲುವಾಗಿದೆ. ರಷ್ಯಾ ಮತ್ತು ಸೌದಿ ಅರೇಬಿಯಾ ಪ್ರಾಬಲ್ಯ ಹೊಂದಿರುವ ಈ ಸಂಘಟನೆಯನ್ನು ದುರ್ಬಲಗೊಳಿಸಲು ಟ್ರಂಪ್ ಈಗಾಗಲೇ ಬಯಸಿದ್ದಾರೆ.

ಇದನ್ನೂ ಓದಿ: 2 ತಿಂಗಳಿಂದ ಮುಚ್ಚಿದ್ದ ಇರಾನ್​ನ ಟೆಹ್ರಾನ್ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ಆರಂಭ

OPEC ಮತ್ತು OPEC ಪ್ಲಸ್ ಅನ್ನು ತೈಲ ಉತ್ಪಾದನೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ನೀತಿಯನ್ನು ರೂಪಿಸಲು 1960ರಲ್ಲಿ ಸ್ಥಾಪಿಸಲಾಯಿತು. ಆರಂಭದಲ್ಲಿ ಈ ಸಂಸ್ಥೆಯು ಇರಾಕ್, ಇರಾನ್, ಕುವೈತ್, ಸೌದಿ ಅರೇಬಿಯಾ ಮತ್ತು ವೆನೆಜುವೆಲಾಗಳನ್ನು ಒಳಗೊಂಡಿತ್ತು. ನಂತರ, ಅದರ ಸದಸ್ಯತ್ವ ವಿಸ್ತರಿಸಿತು. ಪ್ರಸ್ತುತ, ಇದು ಸೌದಿ ಅರೇಬಿಯಾ, ಇರಾಕ್, ಇರಾನ್, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಲಿಬಿಯಾ, ಇಂಡೋನೇಷ್ಯಾ, ಕುವೈತ್, ನೈಜೀರಿಯಾ ಮತ್ತು ವೆನೆಜುವೆಲಾಗಳನ್ನು ಒಳಗೊಂಡಿದೆ.

ಈ 12 ಸದಸ್ಯರನ್ನು ಹೊರತುಪಡಿಸಿ, OPEC ಪ್ಲಸ್ ದೇಶಗಳಲ್ಲಿ ರಷ್ಯಾ, ಅಜೆರ್ಬೈಜಾನ್, ಬಹ್ರೇನ್, ಬ್ರೂನಿ, ಕಝಾಕಿಸ್ತಾನ್, ಮಲೇಷ್ಯಾ, ಮೆಕ್ಸಿಕೊ, ಓಮನ್ ಮತ್ತು ದಕ್ಷಿಣ ಸುಡಾನ್ ಸೇರಿದಂತೆ ಇನ್ನೂ 10 ದೇಶಗಳಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ