AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಸುರಕ್ಷತೆ ಕಡೆಗೆ ಬ್ರಿಟನ್ ಮಹಾ ಹೆಜ್ಜೆ: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ

ಬ್ರಿಟನ್ ಸರ್ಕಾರವು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸಿದೆ. ಇದು ಮಕ್ಕಳ ಮಾನಸಿಕ ಆರೋಗ್ಯ, ಶಿಕ್ಷಣ ಮತ್ತು ಬಾಲ್ಯವನ್ನು ರಕ್ಷಿಸುವ ಮುಖ್ಯ ಉದ್ದೇಶ ಹೊಂದಿದೆ. ಸಾಮಾಜಿಕ ಮಾಧ್ಯಮ ವ್ಯಸನವು ಮಕ್ಕಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಆಸ್ಟ್ರೇಲಿಯಾ, ಫ್ರಾನ್ಸ್‌ನಂತಹ ಇತರ ದೇಶಗಳು ಇದೇ ರೀತಿ ಮಾಡುತ್ತಿವೆ. ತಂತ್ರಜ್ಞಾನ ಕಂಪನಿಗಳ ವಿರೋಧವಿದ್ದರೂ, ಮಕ್ಕಳ ಸುರಕ್ಷತೆಯೇ ಆದ್ಯತೆ ಎಂದು ಸರ್ಕಾರ ಹೇಳಿದೆ.

ಮಕ್ಕಳ ಸುರಕ್ಷತೆ ಕಡೆಗೆ ಬ್ರಿಟನ್ ಮಹಾ ಹೆಜ್ಜೆ: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ
ಮಕ್ಕಳು Image Credit source: The Guardian
ನಯನಾ ರಾಜೀವ್
|

Updated on: Jun 16, 2026 | 7:46 AM

Share

ಲಂಡನ್, ಜೂನ್ 16: ಮಕ್ಕಳ ಮಾನಸಿಕ ಆರೋಗ್ಯ(Mental Health)ವನ್ನು ಕಾಪಾಡುತ್ತಾ ಶಿಕ್ಷಣ ಮತ್ತು ಬಾಲ್ಯವನ್ನು ಮೊಬೈಲ್ ಚಟದಿಂದ ರಕ್ಷಿಸಲು ಬ್ರಿಟನ್ ಸರ್ಕಾರವು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸಿದೆ. ಆಸ್ಟ್ರೇಲಿಯಾ ಮತ್ತು ಫ್ರಾನ್ಸ್​ ದೇಶಗಳು ಕೂಡ ಇದೇ ಹಾದಿಯಲ್ಲಿ ಮುನ್ನಡೆಯುತ್ತಿವೆ.

ಸಾಮಾಜಿಕ ಮಾಧ್ಯಮಗಳ ಅತಿಯಾದ ವ್ಯಸನವು ಮಕ್ಕಳ ಮಾನಸಿಕ ಆರೋಗ್ಯ, ನಿದ್ರೆ, ಶಿಕ್ಷಣ, ಆಟ ಮತ್ತು ಕುಟುಂಬ ಜೀವನದ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಆದ್ದರಿಂದ ಮಕ್ಕಳಿಗೆ ಅವರ ಮುಗ್ಧ ಬಾಲ್ಯವನ್ನು ಮರಳಿ ನೀಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ.

ಈ ನಿರ್ಧಾರಕ್ಕೆ ಜಗತ್ತಿನ ಪ್ರಭಾವಿ ತಂತ್ರಜ್ಞಾನ ಕಂಪನಿಗಳಿಂದ ವಿರೋಧ ವ್ಯಕ್ತವಾಗಬಹುದು. ಆದರೆ, ಯಾವುದೇ ವಾಣಿಜ್ಯ ಲಾಭಕ್ಕಿಂತ ಮಕ್ಕಳ ಸುರಕ್ಷತೆಯೇ ನಮಗೆ ಮುಖ್ಯ ಎಂದು ಪ್ರಧಾನಿ ಕೀರ್ ಸ್ಟಾರ್ಮರ್ ಸ್ಪಷ್ಟಪಡಿಸಿದ್ದಾರೆ.

ಕೇವಲ ಬ್ರಿಟನ್ ಮಾತ್ರವಲ್ಲದೆ, ಈಗಾಗಲೇ ಆಸ್ಟ್ರೇಲಿಯಾ 16 ವರ್ಷದೊಳಗಿನ ಮಕ್ಕಳಿಗೆ ನಿಷೇಧ ಹೇರಿದೆ. ಫ್ರಾನ್ಸ್ 15 ವರ್ಷದೊಳಗಿನ ಮಕ್ಕಳಿಗೆ ಕಠಿಣ ಕಾನೂನು ತರುತ್ತಿದೆ ಹಾಗೂ ಜಪಾನ್, ಸ್ಪೇನ್ ಮತ್ತು ಡೆನ್ಮಾರ್ಕ್ ದೇಶಗಳು ಕೂಡ ಅಪ್ರಾಪ್ತ ವಯಸ್ಕರ ಸಾಮಾಜಿಕ ಮಾಧ್ಯಮ ಬಳಕೆಯನ್ನು ಬಿಗಿಗೊಳಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ.

ಮತ್ತಷ್ಟು ಓದಿ: ಮೊಬೈಲ್​ನಲ್ಲಿ ಗೇಮ್ ಆಡದಂತೆ ತಂದೆ ತಡೆದಿದ್ದಕ್ಕೆ ಮನೆಬಿಟ್ಟು ಹೋದ ಮೂವರು ಮಕ್ಕಳು

ಬ್ರಿಟನ್‌ನ ಪ್ರಸಿದ್ಧ ‘ದಿ ಗಾರ್ಡಿಯನ್’ ಪತ್ರಿಕೆಯ ವರದಿಯ ಪ್ರಕಾರ, ಈ ಪ್ರಸ್ತಾವಿತ ವಯೋಮಿತಿ ನಿಷೇಧವು ಮಕ್ಕಳ ನೆಚ್ಚಿನ ಅಪ್ಲಿಕೇಶನ್‌ಗಳಾದ ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಫೇಸ್‌ಬುಕ್, ಥ್ರೆಡ್ಸ್, ಎಕ್ಸ್ (ಟ್ವಿಟರ್), ಯೂಟ್ಯೂಬ್, ಸ್ನ್ಯಾಪ್‌ಚಾಟ್ ಮತ್ತು ರೆಡ್ಡಿಟ್ ಸೇರಿದಂತೆ ಬಹುತೇಕ ಎಲ್ಲಾ ಪ್ರಮುಖ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಗೆ ಅನ್ವಯಿಸಲಿದೆ. ಮಕ್ಕಳ ಭಾವನಾತ್ಮಕ ಆರೋಗ್ಯದ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ.

ಈ ಕಠಿಣ ನಿರ್ಧಾರದ ಬಗ್ಗೆ ಯೂಟ್ಯೂಬ್ ಮತ್ತು ಸ್ನ್ಯಾಪ್‌ಚಾಟ್ ಸೇರಿದಂತೆ ಪ್ರಮುಖ ತಂತ್ರಜ್ಞಾನ ಕಂಪನಿಗಳು ಕಳವಳ ವ್ಯಕ್ತಪಡಿಸಿವೆ. ವಯಸ್ಸಿನ ಪರಿಶೀಲನೆ ಮತ್ತು ಪೋಷಕರ ನಿಯಂತ್ರಣವನ್ನು ಬಲಪಡಿಸುವುದು ನಿಷೇಧಕ್ಕಿಂತ ಉತ್ತಮ ಎಂದು ಕಂಪನಿಗಳು ವಾದಿಸಿವೆ. ಆದರೆ, ತಂತ್ರಜ್ಞಾನ ಕಂಪನಿಗಳ ವಿರೋಧವನ್ನು ಎದುರಿಸಲು ಸರ್ಕಾರ ಸಿದ್ಧವಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಆನ್‌ಲೈನ್‌ನಲ್ಲಿ ಮಕ್ಕಳನ್ನು ರಕ್ಷಿಸುವ ಈ ಕಠಿಣ ನಿಯಮವು ಇತ್ತೀಚಿನ ಜಾಗತಿಕ ಟ್ರೆಂಡ್ ಆಗಿದೆ. ಈಗಾಗಲೇ ಆಸ್ಟ್ರೇಲಿಯಾ, ಕೆನಡಾ, ಬ್ರೆಜಿಲ್ ಮತ್ತು ಇಂಡೋನೇಷ್ಯಾ ದೇಶಗಳು ಇಂತಹ ವಯೋಮಿತಿ ನಿರ್ಬಂಧಗಳನ್ನು ಜಾರಿಗೆ ತಂದಿದ್ದು, ಫ್ರಾನ್ಸ್ ಮತ್ತು ಸ್ಪೇನ್ ದೇಶಗಳು ಕೂಡ ಇದರ ಪರಿಶೀಲನೆಯಲ್ಲಿವೆ.

ಬ್ರಿಟನ್ ಸರ್ಕಾರದ ಈ ಪ್ರಸ್ತಾವನೆಗೆ ಅಲ್ಲಿನ ಸಾರ್ವಜನಿಕರಿಂದ ಅಭೂತಪೂರ್ವ ಬೆಂಬಲ ಸಿಕ್ಕಿದ್ದು, ಬರೋಬ್ಬರಿ 1.16 ಲಕ್ಷಕ್ಕೂ ಹೆಚ್ಚು ಜನ ನಿಷೇಧದ ಪರವಾಗಿ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ನಾವು ದೇಶದ ಕುಟುಂಬಗಳ ಪರವಾಗಿ ನಿಲ್ಲಬೇಕೇ ಹೊರತು, ಡಿಜಿಟಲ್ ವ್ಯವಸ್ಥೆಯ ಪರವಾಗಿ ಅಲ್ಲ ಎಂದು ಪ್ರಧಾನಿ ಸ್ಟಾರ್ಮರ್ ಖಡಕ್ ಆಗಿ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!