AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ನರೇಂದ್ರ ಮೋದಿಯ ಹಾಡಿಹೊಗಳಿದ ಬ್ರಿಟನ್ ಸಂಸದ; ಪ್ರಪಂಚದ ಅತ್ಯಂತ ಪ್ರಭಾವಿ ವ್ಯಕ್ತಿ ಎಂದು ಬಣ್ಣನೆ

ಬ್ರಿಟನ್​ ಅನ್ನು ಹಿಂದಿಕ್ಕಿರುವ ಭಾರತವೀಗ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದ್ದು, ವೇಗವಾಗಿ ಬೆಳವಣಿಗೆ ಹೊಂದುತ್ತಿದೆ ಎಂದು ಲಾರ್ಡ್ ಕರನ್ ಹೇಳಿದ್ದಾರೆ.

Narendra Modi: ನರೇಂದ್ರ ಮೋದಿಯ ಹಾಡಿಹೊಗಳಿದ ಬ್ರಿಟನ್ ಸಂಸದ; ಪ್ರಪಂಚದ ಅತ್ಯಂತ ಪ್ರಭಾವಿ ವ್ಯಕ್ತಿ ಎಂದು ಬಣ್ಣನೆ
ಲಾರ್ಡ್ ಕರನ್ ಬಿಲಿಮೋರಿಯಾ ಮತ್ತು ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on:Jan 21, 2023 | 4:19 PM

Share

ಲಂಡನ್: ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರಪಂಚದ ಅತ್ಯಂತ ಪ್ರಭಾವಿ ವ್ಯಕ್ತಿ ಎಂದು ಬ್ರಿಟನ್ ಸಂಸದ ಲಾರ್ಡ್ ಕರನ್ ಬಿಲಿಮೋರಿಯಾ (Lord Karan Bilimoria) ಬಣ್ಣಿಸಿದ್ದಾರೆ. ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆಗಳ ಜತೆ ಒಪ್ಪಂದಗಳನ್ನು ಮಾಡಿಕೊಳ್ಳಬೇಕಾದ ಅಗತ್ಯತೆ ಬಗ್ಗೆ ಸಂಸತ್​​ನಲ್ಲಿ ಪ್ರಸ್ತಾಪಿಸುವಾಗ ಅವರು ಭಾರತದ ಪ್ರಧಾನಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಗುಜರಾತ್​ನ ರೈಲು ನಿಲ್ದಾಣದಲ್ಲಿ ಚಹಾ ಮಾರಾಟ ಮಾಡಿದ್ದ ಹುಡುಗ ಇಂದು ವಿಶ್ವದ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಇಂದು ಭಾರತವು ಜಿ20 ಅಧ್ಯಕ್ಷತೆ ವಹಿಸಿಕೊಂಡಿದೆ. ಮುಂದಿನ 25 ವರ್ಷಗಳಲ್ಲಿ ಏನಾಗಬೇಕು ಎಂಬ ದೃಷ್ಟಿಕೋನವನ್ನು ಹೊಂದಿದೆ. 32 ಶತಕೋಟಿ ಡಾಲರ್ ಜಿಡಿಪಿಯೊಂದಿಗೆ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ಅವರು ಹೇಳಿದ್ದಾರೆ. ಭಾರತವು ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ. ಮುಂದಿನ ದಶಕಗಳಲ್ಲಿ ಬ್ರಿಟನ್ ಅದರ ಹತ್ತಿರದ ಮತ್ತು ಅತ್ಯಂತ ವಿಶ್ವಾಸಾರ್ಹ ಸ್ನೇಹಿತ ಆಗಿರಬೇಕು ಎಂದು ಅವರು ಆಗ್ರಹಿಸಿದ್ದಾರೆ. ‘ಬ್ರಿಟನ್ ಮತ್ತು ಭಾರತದ ನಡುವಣ ಬಾಂಧವ್ಯದ ಮಹತ್ವ’ ಎಂಬ ವಿಷಯದ ಮೇಲೆ ನಡೆದ ಚರ್ಚೆಯಲ್ಲಿ ಅವರು ಮಾತನಾಡಿದ್ದಾರೆ.

ಬ್ರಿಟನ್​ ಅನ್ನು ಹಿಂದಿಕ್ಕಿರುವ ಭಾರತವೀಗ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದ್ದು, ವೇಗವಾಗಿ ಬೆಳವಣಿಗೆ ಹೊಂದುತ್ತಿದೆ ಎಂದು ಲಾರ್ಡ್ ಕರನ್ ಹೇಳಿದ್ದಾರೆ.

ಇದನ್ನೂ ಓದಿ: World Economic Forum: ಜಾಗತಿಕ ಪರಿಸ್ಥಿತಿ ಹದಗೆಟ್ಟ ಸಂದರ್ಭದಲ್ಲಿ ಮೋದಿ ನಾಯಕತ್ವ ನಿರ್ಣಾಯಕ; ವಿಶ್ವ ಆರ್ಥಿಕ ವೇದಿಕೆ

75 ವರ್ಷಗಳ ಪ್ರಜಾಪ್ರಭುತ್ವದೊಂದಿಗೆ ಭಾರತವೀಗ ಯುವ ದೇಶವಾಗಿದೆ. ಕಳೆದ ಹಣಕಾಸು ವರ್ಷದಲ್ಲಿ ಶೇ 8.7ರ ಬೆಳವಣಿಗೆ ದರ ದಾಖಲಿಸಿದೆ. ನವೀಕರಿಸಬಹುದಾದ ಇಂಧನ ಮತ್ತು ಸೌರ ಶಕ್ತಿಯ ಅತಿದೊಡ್ಡ ಉತ್ಪಾದಕ ದೇಶವಾಗಿದೆ ಎಂದು ಅವರು ಹೇಳಿದ್ದಾರೆ. ಭಾರತ ಈಗ ಬ್ರಿಟನ್​​ನ 12ನೇ ಅತಿದೊಡ್ಡ ವ್ಯಾಪಾರ ಪಾಲುದಾರ ದೇಶವಾಗಿದೆ. ಇದು ಸಾಲದು. ಇದನ್ನು ಇನ್ನೂ ಹೆಚ್ಚಿಸಬೇಕು ಎಂದೂ ಅವರು ಹೇಳಿದ್ದಾರೆ.

ಭಾರತದ ಜಿ20 ಅಧ್ಯಕ್ಷ ಸ್ಥಾನವು ನಿರ್ಣಾಯಕ ಸಮಯದಲ್ಲಿ ಬಂದಿದೆ. ಜಾಗತಿಕ ಆರ್ಥಿಕ ಪರಿಸ್ಥಿತಿ ಹದಗೆಟ್ಟ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವವು ನಿರ್ಣಾಯಕವಾಗಿದೆ ಎಂದು ವಿಶ್ವ ಆರ್ಥಿಕ ವೇದಿಕೆಯ ಸ್ಥಾಪಕ, ಕಾರ್ಯನಿರ್ವಾಹಕ ಅಧ್ಯಕ್ಷ ಕ್ಲೌಸ್ ಶ್ವಾಬ್ ಶುಕ್ರವಾರ ಬಿಡುಗಡೆ ಮಾಡಿದ್ದ ವಿಶೇಷ ಹೇಳಿಕೆಯಲ್ಲಿ ಉಲ್ಲೇಖಿಸಿದ್ದರು.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:15 pm, Sat, 21 January 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್