AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದ ಮಾಸ್ಕೋ ಮೇಲೆ ಉಕ್ರೇನ್ ಭಾರಿ ಡ್ರೋನ್ ದಾಳಿ: ಒಬ್ಬ ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ

One Indian Worker Killed, Three Others Injured In Moscow Drone Attack: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವು ಮತ್ತಷ್ಟು ತೀವ್ರಗೊಂಡಿದ್ದು, ಮಾಧ್ಯಮಗಳ ವರದಿಯ ಪ್ರಕಾರ ರಷ್ಯಾದ ರಾಜಧಾನಿ ಮಾಸ್ಕೋ ಮೇಲೆ ಉಕ್ರೇನ್ ಭಾರಿ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ರಷ್ಯಾದಲ್ಲಿದ್ದ ಒಬ್ಬ ಭಾರತೀಯ ಕಾರ್ಮಿಕ ಮೃತಪಟ್ಟಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.

ರಷ್ಯಾದ ಮಾಸ್ಕೋ ಮೇಲೆ ಉಕ್ರೇನ್ ಭಾರಿ ಡ್ರೋನ್ ದಾಳಿ: ಒಬ್ಬ ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ
ಉಕ್ರೇನ್ ಭಾರಿ ಡ್ರೋನ್ ದಾಳಿImage Credit source: AI/Mediaforge/TV9
ಸುಗ್ಗನಹಳ್ಳಿ ವಿಜಯಸಾರಥಿ
|

Updated on:May 17, 2026 | 6:43 PM

Share

ನವದೆಹಲಿ, ಮೇ 17: ಉಕ್ರೇನ್ ಸೈನ್ಯವು ರಷ್ಯಾದ ರಾಜಧಾನಿ ಮಾಸ್ಕೋ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ (Ukraine drone attack) ಮಾಡಿದೆ. ಇತ್ತೀಚಿನ ದಿನಗಳಲ್ಲೇ ಅತಿ ದೊಡ್ಡದಾದ ಜಂಟಿ ಡ್ರೋನ್ ದಾಳಿ ಇದಾಗಿದೆ. ರಷ್ಯಾದ ವಾಯು ರಕ್ಷಣಾ ಪಡೆಗಳು (Russian defence forces) ನೂರಾರು ಡ್ರೋನ್‌ಗಳನ್ನು ಹೊಡೆದುರುಳಿಸಿದೆಯಾದರೂ, ಕೆಲವು ಡ್ರೋನ್‌ಗಳು ಜನವಸತಿ ಪ್ರದೇಶಗಳು ಮತ್ತು ಮೂಲಸೌಕರ್ಯಗಳ ಮೇಲೆ ಬಿದ್ದಿವೆ. ಈ ಭೀಕರ ದಾಳಿಯಲ್ಲಿ ಒಬ್ಬ ಭಾರತೀಯ ಕಾರ್ಮಿಕ ಮೃತಪಟ್ಟಿದ್ದಾರೆ, ಇತರ ಮೂವರಿಗೆ ತೀವ್ರ ಗಾಯಗಳಾಗಿವೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಈ ದುರಂತದ ಕುರಿತು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು (Embassy of India in Russia) ಅಧಿಕೃತ ಪ್ರಕಟಣೆ ಹೊರಡಿಸಿದೆ:

“ಮಾಸ್ಕೋ ಪ್ರದೇಶದಲ್ಲಿ ಇಂದು ನಡೆದ ಡ್ರೋನ್ ದಾಳಿಯಲ್ಲಿ ಓರ್ವ ಭಾರತೀಯ ಕಾರ್ಮಿಕ ತನ್ನ ಪ್ರಾಣ ಕಳೆದುಕೊಂಡಿದ್ದು, ಇತರ ಮೂವರು ಭಾರತೀಯರು ಗಾಯಗೊಂಡಿದ್ದಾರೆ. ರಾಯಭಾರ ಕಚೇರಿಯ ಅಧಿಕಾರಿಗಳು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಮಾತನಾಡಿಸಿದ್ದಾರೆ.”

ಇದನ್ನೂ ಓದಿ: 18 ವರ್ಷದಿಂದ ಜಪಾನ್​ನಲ್ಲಿ ಬ್ಯುಸಿನೆಸ್ ಮಾಡ್ತಿದ್ದವನಿಗೆ ಅಂದ್ರು ‘ಗೋ ಬ್ಯಾಕ್ ಟು ಇಂಡಿಯಾ’

ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿರುವ ರಾಯಭಾರ ಕಚೇರಿಯು, ಗಾಯಗೊಂಡವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಮತ್ತು ಕಾನೂನು ನೆರವು ನೀಡಲು ಸ್ಥಳೀಯ ಅಧಿಕಾರಿಗಳು ಹಾಗೂ ಅವರು ಕೆಲಸ ಮಾಡುತ್ತಿದ್ದ ಕಂಪನಿಯ ಆಡಳಿತ ಮಂಡಳಿಯೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ತಿಳಿಸಿದೆ.

ದಾಳಿಯ ತೀವ್ರತೆ ಮತ್ತು ಸಾವು-ನೋವುಗಳು

ರಷ್ಯಾ ರಕ್ಷಣಾ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ 1,000 ಕ್ಕೂ ಹೆಚ್ಚು ಉಕ್ರೇನಿಯನ್ ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ. ಆದರೆ ಮಾಸ್ಕೋ ನಗರಕ್ಕೆ ಸಮೀಪವಿರುವ ಖಿಮ್ಕಿ (Khimki) ಮತ್ತು ಮೈತಿಶ್ಚಿ (Mytishchi) ನಗರಗಳ ವಸತಿ ಸಂಕೀರ್ಣಗಳ ಮೇಲೆ ಡ್ರೋನ್ ಅವಶೇಷಗಳು ಬಿದ್ದಿದ್ದರಿಂದ ಭಾರಿ ಹಾನಿಯಾಗಿದೆ.

ಈ ದಾಳಿಗಳಲ್ಲಿ ಒಬ್ಬ ಭಾರತೀಯ ಕಾರ್ಮಿಕ ಸೇರಿದಂತೆ ಒಟ್ಟು ನಾಲ್ಕು ಜನರು ಸಾವನ್ನಪ್ಪಿದ್ದಾರೆ. 12 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಾಸ್ಕೋದ ಪ್ರಮುಖ ತೈಲ ಸಂಸ್ಕರಣಾಗಾರ (Oil Refinery) ಹಾಗೂ ವಸತಿ ಕಟ್ಟಡಗಳಿಗೆ ಹಾನಿಯಾಗಿದ್ದು, ಉಂಟಾದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಟಾಟಾ-ASML ಡೀಲ್; ಚಿಪ್ ಕ್ಷೇತ್ರದಲ್ಲಿ ಸಂಚಲನ; ಯಾಕಿದು ಮಹಾ ಡೀಲ್? ಎಲ್ಲರಿಗೂ ಅಚ್ಚರಿ ಎನಿಸುವಂಥದ್ದು ಏನಿದೆ?

ದಾಳಿಯನ್ನು ಸಮರ್ಥಿಸಿಕೊಂಡ ಉಕ್ರೇನ್ ಅಧ್ಯಕ್ಷ ಜೆಲೆನ್ಸ್ಕಿ

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರು ಈ ದಾಳಿಯ ವೀಡಿಯೊಗಳನ್ನು ಹಂಚಿಕೊಳ್ಳುವ ಮೂಲಕ ದಾಳಿಯನ್ನು ದೃಢಪಡಿಸಿದ್ದಾರೆ. ರಷ್ಯಾವು ಉಕ್ರೇನ್ ನಗರಗಳ ಮೇಲೆ ಇತ್ತೀಚೆಗೆ ನಡೆಸಿದ ಕ್ಷಿಪಣಿ ದಾಳಿಗಳಿಗೆ ಪ್ರತಿಕಾರವಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ರಷ್ಯಾದ ಯುದ್ಧ ಸಾಮರ್ಥ್ಯವನ್ನು ಕುಂದಿಸಲು ನಮ್ಮ ಈ ದಾಳಿಗಳು ‘ನ್ಯಾಯಸಮ್ಮತವಾಗಿವೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:43 pm, Sun, 17 May 26

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More