US vs Russia: ಅಮೆರಿಕ ಸೆನೆಟ್​ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡ್ಮಿರ್ ಝೆಲೆನ್​ಸ್ಕಿ ಭಾಷಣ

ಉಕ್ರೇನ್​ನಲ್ಲಿ ಸಂಕಷ್ಟ ಪರಿಸ್ಥಿತಿ ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕದ ಕೆಲ ಜನಪ್ರತಿನಿಧಿಗಳು ಅಧ್ಯಕ್ಷ ಜೋ ಬಿಡೆನ್ ಅವರಿಗೆ ಗಟ್ಟಿ ನಿರ್ಧಾರ ತೆಗೆದುಕೊಳ್ಳಿ ಎಂದು ಒತ್ತಾಯ ಮಾಡಿದ್ದಾರೆ.

US vs Russia: ಅಮೆರಿಕ ಸೆನೆಟ್​ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡ್ಮಿರ್ ಝೆಲೆನ್​ಸ್ಕಿ ಭಾಷಣ
ಉಕ್ರೇನ್ ಅಧ್ಯಕ್ಷ ವೊಲೊಡ್ಮಿರ್ ಝೆಲೆನ್​ಸ್ಕಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡೆನ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 05, 2022 | 11:08 AM

ವಾಷಿಂಗ್​ಟನ್: ರಷ್ಯಾ ದಾಳಿಯನ್ನು ಹಿಮ್ಮೆಟ್ಟಿಸಲು ಅವಿರತ ಪ್ರಯತ್ನಿಸುತ್ತಿರುವ ಉಕ್ರೇನ್ ಅಧ್ಯಕ್ಷ ವೊಲೊಡ್ಮಿರ್ ಝೆಲೆನ್​ಸ್ಕಿ (Volodymyr Zelensky) ಅಮೆರಿಕದ ಸೆನೆಟ್​ ಸದಸ್ಯರನ್ನು ಉದ್ದೇಶಿಸಿ ಶನಿವಾರ (ಫೆ.5) ಭಾಷಣ ಮಾಡಲಿದ್ದಾರೆ. ಉಕ್ರೇನ್ (Ukraine) ಸರ್ಕಾರದ ವಿನಂತಿಯ ಮೇಲೆ ನಡೆಯಲಿರುವ ಝೂಂ ಮೀಟಿಂಗ್​ನಲ್ಲಿ ಈ ಸಂವಾದ ನಡೆಯಲಿದೆ. ಉಕ್ರೇನ್​ನಲ್ಲಿ ಸಂಕಷ್ಟ ಪರಿಸ್ಥಿತಿ ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕದ ಕೆಲ ಜನಪ್ರತಿನಿಧಿಗಳು ಅಧ್ಯಕ್ಷ ಜೋ ಬಿಡೆನ್ ಅವರಿಗೆ ಗಟ್ಟಿ ನಿರ್ಧಾರ ತೆಗೆದುಕೊಳ್ಳಿ ಎಂದು ಒತ್ತಾಯ ಮಾಡಿದ್ದಾರೆ. ರಷ್ಯಾದಿಂದ ಕಚ್ಚಾತೈಲ ಆಮದು ಮಾಡಿಕೊಳ್ಳುವುದನ್ನೂ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಮನವಿಗಳನ್ನು ಅಧ್ಯಕ್ಷ ಜೋ ಬಿಡೆನ್ ಈವರೆಗೆ ತಳ್ಳಿ ಹಾಕುತ್ತಲೇ ಇದ್ದರು. ರಷ್ಯಾದಿಂದ ಕಚ್ಚಾ ತೈಲದ ಆಮದು ನಿರ್ಬಂಧಿಸಿದರೆ ಜಾಗತಿಕ ಮಟ್ಟದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಹೆಚ್ಚಾಗಬಹುದು ಎಂಬ ಭೀತಿ ವ್ಯಕ್ತವಾಗಿದೆ. ಈಗಾಗಲೇ ಹಣದುಬ್ಬರದಿಂದ ನಲುಗಿರುವ ಅಮೆರಿಕದ ಜನರಿಗೆ ತೈಲಬೆಲೆ ಏರಿಕೆಯಿಂದ ಮತ್ತಷ್ಟು ಸಮಸ್ಯೆಗಳಾಗುತ್ತವೆ ಎಂದು ಬೈಡೆನ್ ಹೆದರಿದ್ದರು. ಉಕ್ರೇನ್ ಮೇಲೆ ದಾಳಿ ಮಾಡಿದ ನಂತರ ರಷ್ಯಾ ವಿರುದ್ಧ ತಿರುಗಿ ಬಿದ್ದಿರುವ ಅಮೆರಿಕದ ಜನರು ವ್ಯಾಪಕವಾಗಿ ಆಕ್ರೋಶ ವ್ಯಕ್ತಪಡಿಸುತ್ತಾರೆ. ವ್ಲಾದಿಮಿರ್ ಪುಟಿನ್ ಅವರನ್ನು ರಷ್ಯಾದಲ್ಲಿಯೇ ಹತ್ಯೆ ಮಾಡಬೇಕು ಎಂದು ರಿಪಬ್ಲಿಕನ್ ಪಕ್ಷದ ಸೆನೆಟರ್ ಲಿಂಡ್ಸೆ ಗ್ರಾಹಮ್ ಕರೆ ನೀಡಿದ್ದಾರೆ.

ಉಕ್ರೇನ್ ಮೇಲೆ ದಂಡೆತ್ತಿ ಬಂದಿರುವ ರಷ್ಯಾವನ್ನು ಹದ್ದುಬಸ್ತಿನಲ್ಲಿಡಲು ನ್ಯಾಟೊ ಮಿಲಿಟರಿ ಕಾರ್ಯಾಚರಣೆ ನಡೆಸಬೇಕು. ಉಕ್ರೇನ್ ದೇಶದ ವಾಯುಗಡಿಯಲ್ಲಿ ಕಟ್ಟುನಿಟ್ಟಾಗಿ ವಿಮಾನ ಹಾರಾಟ ನಿರ್ಬಂಧ ಹೇರಬೇಕು ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್​ಸ್ಕಿ ಆಗ್ರಹಿಸಿದ್ದರು. ಆದರೆ ಹೀಗೆ ಮಾಡಿದರೆ ರಷ್ಯಾವನ್ನು ಇನ್ನಷ್ಟು ಕೆರಳಿಸಿದಂತೆ ಆಗುತ್ತದೆ. ಪಾಶ್ಚಿಮಾತ್ಯ ದೇಶಗಳು ರಷ್ಯಾ ವಿರುದ್ಧ ನೇರವಾಗಿ ಯುದ್ಧಕ್ಕೆ ನಿಲ್ಲಬೇಕಾಗಬಹುದು ಎಂದು ಬೈಡೆನ್ ಹೆದರಿದ್ದರು. ರಷ್ಯಾ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸಬೇಕು ಎಂದು ಅಮೆರಿಕದ ಸೆನೆಟ್ ಕಾರ್ಯಕರ್ತರು ಇಂದಿಗೂ ಒತ್ತಾಯಿಸುತ್ತಲೇ ಇದ್ದಾರೆ.

ಇದನ್ನೂ ಓದಿ: ಉಕ್ರೇನ್​ ಮೇಲಿನ ಯುದ್ಧ ಖಂಡಿಸಿ ನೇರ ಪ್ರಸಾರದಲ್ಲಿ ರಾಜೀನಾಮೆ ನೀಡಿದ ರಷ್ಯಾದ ಟಿವಿ ಚಾನೆಲ್​ ಸಿಬ್ಬಂದಿ ವರ್ಗ: ಪ್ರಸಾರ ಸ್ಥಗಿತ

ಇದನ್ನೂ ಓದಿ: Ukraine Crisis: 9,000 ರಷ್ಯನ್ ಸೈನಿಕರನ್ನು ಕೊಂದಿರುವುದಾಗಿ ಹೇಳಿಕೊಂಡ ಉಕ್ರೇನ್; ಬೆಳವಣಿಗೆಯ 10 ಮುಖ್ಯಾಂಶಗಳು ಇಲ್ಲಿವೆ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ