AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದ ಇತಿಹಾಸದಲ್ಲೇ ಅತಿದೊಡ್ಡ ಅಟ್ಯಾಕ್; ಮಾಸ್ಕೋ ಮೇಲೆ ಉಕ್ರೇನ್‌ನಿಂದ 1,000ಕ್ಕೂ ಹೆಚ್ಚು ಡ್ರೋನ್‌ಗಳ ದಾಳಿ

ರಷ್ಯಾದಲ್ಲಿ 3 ದಿನಗಳ ಕಾಲ ನಡೆದ ಸಂಸತ್ ಚುನಾವಣೆ ಮುಕ್ತಾಯಗೊಳ್ಳುವ ಹಂತದಲ್ಲಿರುವಾಗಲೇ ಉಕ್ರೇನ್ ಪಡೆಗಳು ರಷ್ಯಾದ ಮೇಲೆ ಏಕಕಾಲದಲ್ಲಿ 1,000ಕೂ ಹೆಚ್ಚು ಡ್ರೋನ್‌ಗಳನ್ನು ಹಾರಿಸಿ ಬೃಹತ್ ದಾಳಿ ನಡೆಸಿವೆ. ಈ ಪೈಕಿ ನೂರಾರು ಡ್ರೋನ್‌ಗಳು ನೇರವಾಗಿ ರಷ್ಯಾದ ರಾಜಧಾನಿ ಮೊಸ್ಕೋವನ್ನು ಗುರಿಯಾಗಿಸಿಕೊಂಡಿದ್ದವು ಎಂದು ರಷ್ಯಾದ ಅಧಿಕಾರಿಗಳು ತಿಳಿಸಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧ ಆರಂಭವಾದ ನಂತರ ರಷ್ಯಾದ ರಾಜಧಾನಿ ಮಾಸ್ಕೋ ಮೇಲೆ ನಡೆದ ಅತ್ಯಂತ ಬೃಹತ್ ದಾಳಿ ಇದಾಗಿದೆ.

ರಷ್ಯಾದ ಇತಿಹಾಸದಲ್ಲೇ ಅತಿದೊಡ್ಡ ಅಟ್ಯಾಕ್; ಮಾಸ್ಕೋ ಮೇಲೆ ಉಕ್ರೇನ್‌ನಿಂದ 1,000ಕ್ಕೂ ಹೆಚ್ಚು ಡ್ರೋನ್‌ಗಳ ದಾಳಿ
ರಷ್ಯಾ ಮೇಲೆ ಉಕ್ರೇನ್‌ ಡ್ರೋನ್‌ಗಳ ದಾಳಿImage Credit source: x
ಸುಷ್ಮಾ ಚಕ್ರೆ
|

Updated on: Sep 20, 2026 | 4:56 PM

Share

ಮಾಸ್ಕೋ, ಸೆಪ್ಟೆಂಬರ್ 20: ರಷ್ಯಾದಲ್ಲಿ 3 ದಿನಗಳ ಕಾಲ ನಡೆದ ಸಂಸತ್ ಚುನಾವಣೆ ಮುಕ್ತಾಯದ ಹಂತ ತಲುಪಿದ್ದಾಗ, ಉಕ್ರೇನಿಯನ್ ಪಡೆಗಳು ರಷ್ಯಾದ ಮೇಲೆ ಏಕಕಾಲದಲ್ಲಿ 1,000ಕ್ಕೂ ಹೆಚ್ಚು ಡ್ರೋನ್‌ಗಳನ್ನು ಹಾರಿಸಿ ದಾಳಿ ನಡೆಸಿವೆ. ಈ ಬೃಹತ್ ದಾಳಿಯಲ್ಲಿ ನೂರಾರು ಡ್ರೋನ್‌ಗಳು ನೇರವಾಗಿ ರಷ್ಯಾದ ರಾಜಧಾನಿ ಮೊಸ್ಕೋವನ್ನು ಗುರಿಯಾಗಿಸಿಕೊಂಡಿದ್ದವು ಎಂದು ರಷ್ಯಾ ಅಧಿಕಾರಿಗಳು ತಿಳಿಸಿದ್ದಾರೆ.ಉಕ್ರೇನಿಯನ್ ಡ್ರೋನ್ ದಾಳಿಯಿಂದಾಗಿ ಮಾಸ್ಕೋದಲ್ಲಿರುವ ಪ್ರಮುಖ ತೈಲ ಸಂಸ್ಕರಣಾಗಾರ ಹಾಗೂ ವಸತಿ ಕಟ್ಟಡವೊಂದಕ್ಕೆ ಹಾನಿಯಾಗಿದೆ.

ಮಾಸ್ಕೋದ ಮೇಯರ್ ಸೆರ್ಗೆಯ್ ಸೊಬ್ಯಾನಿನ್ ಮಾತನಾಡಿ, “ಇದು ಮಾಸ್ಕೋ ನಗರದ ಮೇಲೆ ಇದುವರೆಗೆ ನಡೆದ ಅತಿ ದೊಡ್ಡ ಡ್ರೋನ್ ದಾಳಿಯಾಗಿದೆ. ದಾಳಿಯಿಂದಾಗಿ ತೈಲ ಶುದ್ಧೀಕರಣ ಘಟಕ ಹಾಗೂ ವಸತಿ ಕಟ್ಟಡವೊಂದಕ್ಕೆ ಹಾನಿಯಾಗಿದೆ” ಎಂದು ತಿಳಿಸಿದ್ದಾರೆ.

ಇಬ್ಬರು ಸಾವು, 20 ಜನರಿಗೆ ಗಾಯ:

ಮಾಸ್ಕೋ ಪ್ರಾಂತ್ಯದ ಗವರ್ನರ್ ಆಂಡ್ರೇ ವೊರೊಬ್ಯೋವ್ ನೀಡಿದ ಮಾಹಿತಿ ಪ್ರಕಾರ, ಡ್ರೋನ್ ದಾಳಿಯಿಂದ 74 ವರ್ಷದ ವೃದ್ಧ ಹಾಗೂ 44 ವರ್ಷದ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, 20 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: 3 ದಿನ ಉಕ್ರೇನ್ ಮೇಲೆ ದಾಳಿ ನಡೆಸಬೇಡಿ ಎಂದ ಪುಟಿನ್; ರಷ್ಯಾದ ನಿರ್ಧಾರಕ್ಕೆ ಕಾರಣ ಇಲ್ಲಿದೆ

ರಷ್ಯಾದ ರಕ್ಷಣಾ ಸಚಿವಾಲಯವು, ತಮ್ಮ ವಾಯು ರಕ್ಷಣಾ ಪಡೆಗಳು ರಷ್ಯಾದ ಭೂಭಾಗ, ಅಕ್ರಮವಾಗಿ ವಶಪಡಿಸಿಕೊಂಡ ಕ್ರೈಮಿಯಾ ಪರ್ಯಾಯ ದ್ವೀಪ ಹಾಗೂ ಕಪ್ಪು ಸಮುದ್ರದ ಮೇಲೆ ಒಟ್ಟು 1 ಸಾವಿರ ಉಕ್ರೇನಿಯನ್ ಡ್ರೋನ್‌ಗಳನ್ನು ಹೊಡೆದುರುಳಿಸಿರುವುದಾಗಿ ಹೇಳಿಕೊಂಡಿದೆ. ಮೇಯರ್ ಸೊಬ್ಯಾನಿನ್ ಪ್ರಕಾರ, ಮೊಸ್ಕೋ ನಗರದತ್ತ ಧಾವಿಸುತ್ತಿದ್ದ 450 ಡ್ರೋನ್‌ಗಳನ್ನು ಆಕಾಶದಲ್ಲೇ ಧ್ವಂಸಗೊಳಿಸಲಾಗಿದೆ.

ರಷ್ಯಾದ ಸಂಸತ್ ಚುನಾವಣೆಯನ್ನು ಬುಡಮೇಲು ಮಾಡುವ ಉದ್ದೇಶದಿಂದ ಉಕ್ರೇನ್ ಈ ದಾಳಿ ನಡೆಸಿದೆ ಎಂದು ರಷ್ಯಾ ಆರೋಪಿಸಿದೆ. ಆದರೆ ಈ ಯತ್ನ ವಿಫಲವಾಗಿದೆ ಎಂದು ರಷ್ಯಾದ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಇಂಧನ ಘಟಕಗಳ ಮೇಲಿನ ದಾಳಿ ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಂದ: ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ

ಈ ಬೃಹತ್ ದಾಳಿಯ ಕುರಿತು ಉಕ್ರೇನ್ ಕಡೆಯಿಂದ ತಕ್ಷಣದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ರಷ್ಯಾ-ಉಕ್ರೇನ್ ಸಮರ ಶುರುವಾದ ಬಳಿಕ ರಷ್ಯಾದಲ್ಲಿ ನಡೆದ ಮೊದಲ ಸಂಸತ್ ಚುನಾವಣೆ ಇದಾಗಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನೀತಿಗಳಿಗೆ ಆಡಳಿತಾರೂಢ ಕ್ರೆಮ್ಲಿನ್‌ನಲ್ಲಿ ಯಾವುದೇ ಬಲವಾದ ವಿರೋಧ ಪಕ್ಷವಿಲ್ಲದೆ ಈ ಚುನಾವಣೆ ನಡೆದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು