ಎಲ್ಲ ಧರ್ಮಗಳ ಬಗ್ಗೆ ಗೌರವವಿರಲಿ, ಜಾಗತಿಕವಾಗಿ ಸಾಮರಸ್ಯ ಮತ್ತು ಶಾಂತಿಯಿಂದ ಬದುಕುವುದನ್ನು ಖಚಿತಪಡಿಸಿಕೊಳ್ಳಲು ಕರೆ ನೀಡಿದ ವಿಶ್ವಸಂಸ್ಥೆ

ಪತ್ರಕರ್ತರು ಏನು ಬರೆಯುತ್ತಾರೆ, ಅವರು ಏನು ಟ್ವೀಟ್ ಮಾಡುತ್ತಾರೆ ಮತ್ತು ಅವರು ಏನು ಹೇಳುತ್ತಾರೆಂದು ಜೈಲಿಗೆ ಹಾಕಬಾರದು. ಯಾವುದೇ ಕಿರುಕುಳದ ಬೆದರಿಕೆಯಿಲ್ಲದೆ ಜನರು ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡುವುದು ಮುಖ್ಯವಾಗಿದೆ

ಎಲ್ಲ ಧರ್ಮಗಳ ಬಗ್ಗೆ ಗೌರವವಿರಲಿ, ಜಾಗತಿಕವಾಗಿ ಸಾಮರಸ್ಯ ಮತ್ತು ಶಾಂತಿಯಿಂದ ಬದುಕುವುದನ್ನು ಖಚಿತಪಡಿಸಿಕೊಳ್ಳಲು ಕರೆ ನೀಡಿದ ವಿಶ್ವಸಂಸ್ಥೆ
ಉದಯಪುರದಲ್ಲಿನ ನಿರ್ಜನ ರಸ್ತೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 30, 2022 | 3:19 PM

ಎಲ್ಲಾ ಧರ್ಮಗಳನ್ನು ಗೌರವಿಸಬೇಕು, ವಿವಿಧ ಸಮುದಾಯಗಳು ಜಾಗತಿಕವಾಗಿ ಸಾಮರಸ್ಯ ಮತ್ತು ಶಾಂತಿಯಿಂದ ಬದುಕುವುದನ್ನು ಖಚಿತಪಡಿಸಿಕೊಳ್ಳಲು ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ (UN Secretary-General Antonio Guterres) ಅವರು ಕರೆ ನೀಡಿದ್ದಾರೆ ಎಂದು ಅವರ ವಕ್ತಾರ ಸ್ಟೀಫನ್ ಡುಜಾರಿಕ್ (Stephane Dujarric) ಹೇಳಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ (Udaipur Horror) ಟೈಲರ್ ಕನ್ಹಯ್ಯಾ ಲಾಲ್ ಹತ್ಯೆಯ ನಂತರ ಕೋಮು ಉದ್ವಿಗ್ನತೆಯ ನಡುವೆ ಈ ಹೇಳಿಕೆ ಬಂದಿದೆ. ಕನ್ಹಯ್ಯಾ ಲಾಲ್ ಹತ್ಯೆಯ ನಂತರ ಭಾರತದಲ್ಲಿನ ಧಾರ್ಮಿಕ ಉದ್ವಿಗ್ನತೆಗಳ ಕುರಿತು ಯುಎನ್ ಮುಖ್ಯಸ್ಥರು ಪ್ರತಿಕ್ರಿಯಿಸಿದ್ದಾರೆಯೇ ಎಂಬ ಪ್ರಶ್ನೆಗೆ ಡುಜಾರಿಕ್ ಈ ರೀತಿ ಹೇಳಿದ್ದಾರೆ. ರಿಯಾಜ್ ಅಖ್ತರಿ ಮತ್ತು ಘೌಸ್ ಮೊಹಮ್ಮದ್ ಎಂದು ಗುರುತಿಸಲಾದ ಇಬ್ಬರು ವ್ಯಕ್ತಿಗಳು, ಉದಯಪುರ ನಗರದಲ್ಲಿ ಕನ್ಹಯ್ಯಾ ಲಾಲ್ ಅವರ ಶಿರಚ್ಛೇದ ಮಾಡಿದ್ದರು. ಕನ್ಹಯ್ಯಾ ಅವರನ್ನು ಹತ್ಯೆ ಮಾಡಿದ ನಂತರ ವಿಡಿಯೊ ಪೋಸ್ಟ್ ಮಾಡಿದ ಹಂತಕರು ಇಸ್ಲಾಂ ಧರ್ಮಕ್ಕೆ ಮಾಡಿದ ಅವಮಾನಕ್ಕೆ ಪ್ರತೀಕಾರ ಇದು ಎಂದಿದ್ದರು.

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ (Mohammed Zubair) ಬಂಧನದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡುಜಾರಿಕ್ “ನಾವು ಅಭಿವ್ಯಕ್ತಿಯ ಮೂಲಭೂತ ಹಕ್ಕನ್ನು ನಂಬುತ್ತೇವೆ. ಪತ್ರಕರ್ತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಮೂಲಭೂತ ಹಕ್ಕನ್ನು ನಾವು ನಂಬುತ್ತೇವೆ. ಜನರು ಇತರ ಸಮುದಾಯಗಳು ಮತ್ತು ಇತರ ಧರ್ಮಗಳನ್ನು ಗೌರವಿಸುವ ಮೂಲಭೂತ ಅಗತ್ಯವನ್ನು ಸಹ ನಾವು ನಂಬುತ್ತೇವೆ. ಆ ಎರಡು ಭಾವನೆಗಳು ತುಂಬಾ ಹೊಂದಿಕೆಯಾಗುತ್ತವೆ ಎಂದು ನಾವು ನಂಬುತ್ತೇವೆ ಎಂದಿದ್ದಾರೆ. ಹಿಂದೂ ದೇವರ ವಿರುದ್ಧ 2018 ರಲ್ಲಿ ಪೋಸ್ಟ್ ಮಾಡಿದ “ಆಕ್ಷೇಪಾರ್ಹ ಟ್ವೀಟ್” ಗಾಗಿ ಜುಬೇರ್ ಅವರನ್ನು ಸೋಮವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಪತ್ರಕರ್ತರನ್ನು ಜೈಲಿಗೆ ಹಾಕಬಾರದು

ಇದನ್ನೂ ಓದಿ
Image
ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್​​ನ್ನು ಬೆಂಗಳೂರಿಗೆ ಕರೆತಂದ ಐಎಫ್​​ಎಸ್​​​ಒ
Image
ಟೈಲರ್ ಹತ್ಯೆ ಪ್ರಕರಣ: ಜೈಪುರದಲ್ಲಿ ಸರಣಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ ಹಂತಕರು
Image
ನಾನು ಬಡವ, ನನ್ನ ಕತ್ತು ಸೀಳ ಬೇಡಿ: ಉದಯಪುರ ಹತ್ಯೆ ಖಂಡಿಸಿ ಮೈಸೂರಿನಲ್ಲಿ ವಿಭಿನ್ನ ಅಭಿಯಾನ

ಪತ್ರಕರ್ತರು ಏನು ಬರೆಯುತ್ತಾರೆ, ಅವರು ಏನು ಟ್ವೀಟ್ ಮಾಡುತ್ತಾರೆ ಮತ್ತು ಅವರು ಏನು ಹೇಳುತ್ತಾರೆಂದು ಜೈಲಿಗೆ ಹಾಕಬಾರದು. ಯಾವುದೇ ಕಿರುಕುಳದ ಬೆದರಿಕೆಯಿಲ್ಲದೆ ಜನರು ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡುವುದು ಮುಖ್ಯವಾಗಿದೆ ಎಂದು ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ಅವರ ವಕ್ತಾರರು ಹೇಳಿದ್ದಾರೆ. ಭಾರತದಲ್ಲಿ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಬಂಧನ ಬಗ್ಗೆ ಪ್ರತಿಕ್ರಿಯಿಸಿದ ಅವರು ಮೊದಲನೆಯದಾಗಿ, ಪ್ರಪಂಚದಾದ್ಯಂತ ಯಾವುದೇ ಸ್ಥಳದಲ್ಲಿ, ಜನರು ತಮ್ಮನ್ನು ಮುಕ್ತವಾಗಿ ವ್ಯಕ್ತಪಡಿಸಲು ಅವಕಾಶ ನೀಡುವುದು ಬಹಳ ಮುಖ್ಯ, ಪತ್ರಕರ್ತರು ತಮ್ಮನ್ನು ಮುಕ್ತವಾಗಿ ಮತ್ತು ಯಾವುದೇ ಕಿರುಕುಳದ ಬೆದರಿಕೆಯಿಲ್ಲದೆ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದ್ದಾರೆ.