ಪಾಕಿಸ್ತಾನ: ಒಂದು ಹೊತ್ತಿನ ಊಟಕ್ಕೂ ಗತಿಯಿಲ್ಲ, ಪತ್ನಿ ಹಾಗೂ 7 ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ ವ್ಯಕ್ತಿ

ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಕುಟುಂಬವನ್ನು ಸಲಹಲು ಸಾಧ್ಯವಾಗುವುದಿಲ್ಲ ಎನ್ನುವ ಕಾರಣಕ್ಕೆ ಪತ್ನಿ ಹಾಗೂ 7 ಮಂದಿ ಮಕ್ಕಳನ್ನು ವ್ಯಕ್ತಿಯೊಬ್ಬ ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಈ ವ್ಯಕ್ತಿ ಕೊಡಲಿಯಿಂದ ಕೊಚ್ಚಿ 8 ಮಂದಿಯನ್ನು ಹತ್ಯೆ ಮಾಡಿದ್ದಾನೆ, ಸಜ್ಜದ್ ಖೋಖರ್ ಎಂಬ ವ್ಯಕ್ತಿ ತನ್ನ ಮಕ್ಕಳು ಮತ್ತು ಹೆಂಡತಿಯನ್ನು ಪೋಷಿಸಲು ಸಾಧ್ಯವಾಗಲಿಲ್ಲ ಎನ್ನುವ ಕಾರಣಕ್ಕೆ ಎಲ್ಲರನ್ನೂ ಕೊಲೆ ಮಾಡಿದ್ದಾನೆ.

ಪಾಕಿಸ್ತಾನ: ಒಂದು ಹೊತ್ತಿನ ಊಟಕ್ಕೂ ಗತಿಯಿಲ್ಲ, ಪತ್ನಿ ಹಾಗೂ 7 ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ ವ್ಯಕ್ತಿ

Updated on: Apr 12, 2024 | 12:29 PM

ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಕುಟುಂಬವನ್ನು ಸಲಹಲು ಸಾಧ್ಯವಾಗುವುದಿಲ್ಲ ಎನ್ನುವ ಕಾರಣಕ್ಕೆ ಪತ್ನಿ ಹಾಗೂ 7 ಮಂದಿ ಮಕ್ಕಳನ್ನು ವ್ಯಕ್ತಿಯೊಬ್ಬ ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಈ ವ್ಯಕ್ತಿ ಕೊಡಲಿಯಿಂದ ಕೊಚ್ಚಿ 8 ಮಂದಿಯನ್ನು ಹತ್ಯೆ ಮಾಡಿದ್ದಾನೆ, ಸಜ್ಜದ್ ಖೋಖರ್ ಎಂಬ ವ್ಯಕ್ತಿ ತನ್ನ ಮಕ್ಕಳು ಮತ್ತು ಹೆಂಡತಿಯನ್ನು ಪೋಷಿಸಲು ಸಾಧ್ಯವಾಗಲಿಲ್ಲ ಎನ್ನುವ ಕಾರಣಕ್ಕೆ ಎಲ್ಲರನ್ನೂ ಕೊಲೆ ಮಾಡಿದ್ದಾನೆ.

ಪಾಕಿಸ್ತಾನದಲ್ಲಿ ಔಷಧ ಹಾಗೂ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ದಿನನಿತ್ಯ ಬಳಕೆಯ ವಸ್ತುಗಳನ್ನು ಕೂಡ ಎಲ್ಲರು ಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಘೋರ ಕೃತ್ಯದ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಸಜ್ಜದ್ ಅವರ 42 ವರ್ಷದ ಪತ್ನಿ ಕೌಸರ್, ನಾಲ್ವರು ಪುತ್ರಿಯರು ಮತ್ತು ಮೂವರು ಪುತ್ರರು ಸಾವನ್ನಪ್ಪಿದ್ದಾರೆ.

ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ, ಈ ಘಟನೆ ಪಾಕಿಸ್ತಾನ ಸೇರಿದಂತೆ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದೆ. ಇದರರ್ಥ ಪಾಕಿಸ್ತಾನದ ಪರಿಸ್ಥಿತಿ ಹೇಗಿದೆ ಎಂಬುದನ್ನು ಅರಿಯಬಹುದು.

ಮತ್ತಷ್ಟು ಓದಿ: ಈ ವರ್ಷ ಭಾರತ, ಪಾಕಿಸ್ತಾನ ಆರ್ಥಿಕ ಬೆಳವಣಿಗೆ ಹೇಗಿರುತ್ತೆ?; ವಿಶ್ವಬ್ಯಾಂಕ್​ನಿಂದ ಹೋಲಿಕೆ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಅಡಿಯಾಲಾ ಜೈಲಿನಿಂದಲೇ ಸರ್ಕಾರಕ್ಕೆ ಪತ್ರ ಬರೆದಿದ್ದು, ಅದರಲ್ಲಿ ಪಾಕಿಸ್ತಾನದ ಆರ್ಥಿಕ ಸ್ಥಿತಿಯ ಬಗ್ಗೆ ಚರ್ಚಿಸಿದ್ದಾರೆ. ಆರ್ಥಿಕ ಸ್ಥಿರತೆ ಇಲ್ಲದೆ ಯಾವುದೇ ದೇಶ ನಡೆಯಲು ಸಾಧ್ಯವಿಲ್ಲ ಎಂದು ಇಮ್ರಾನ್ ಹೇಳಿದ್ದಾರೆ. ಪಾಕಿಸ್ತಾನದಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಮತ್ತು 1971 ರ ಢಾಕಾ ದುರಂತದ ನಡುವೆ ಅವರು ಹೋಲಿಕೆ ಮಾಡಿದ್ದಾರೆ.

ಪಾಕಿಸ್ತಾನದ ಮುಖ್ಯಮಂತ್ರಿ ಮರ್ಯಮ್ ನವಾಜ್ ಕೂಡ ಈ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದು, ಆರೋಪಿಗಳಿಗೆ ಶಿಕ್ಷೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ