ವಿಶ್ವ ಆರ್ಥಿಕ ವೇದಿಕೆ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಭಾಗಿ

ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ತೆರಳಿದ್ದಾರೆ. ಭಾರತದ ಆಹಾರ ವ್ಯವಸ್ಥೆ, ಸಾರ್ವಜನಿಕ ವಿತರಣೆ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿನ ಕ್ರಾಂತಿ ಹಾಗೂ ಆಡಳಿತ ಸುಧಾರಣೆಗಳು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿವೆ. ಈ ಮೂಲಕ, ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸಲು ಭಾರತಕ್ಕೆ ಉತ್ತಮ ಅವಕಾಶವಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ವಿಶ್ವ ಆರ್ಥಿಕ ವೇದಿಕೆ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಭಾಗಿ
World Economic Forum meeting
Edited By:

Updated on: Jan 18, 2026 | 10:37 PM

ದಾವೋಸ್, ಜನವರಿ 18: ಹೊಸ ವರ್ಷದ ಹೊಸತರಲ್ಲಿ ಸ್ವಿಜ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಸಮ್ಮೇಳನ (WEF) ದಲ್ಲಿ ಕೇಂದ್ರ ಗ್ರಾಹಕ ವ್ಯವಹಾರ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಭಾಗಿಯಾಗಿದ್ದಾರೆ.

ವಿಶ್ವ ಆರ್ಥಿಕ ವೇದಿಕೆ 2026ರ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿರುವ ಕೇಂದ್ರ ಸಚಿವ ಜೋಶಿ ಅವರಿಗೆ ಜ್ಯೂರಿಚ್ ವಿಮಾನ ನಿಲ್ದಾಣದಲ್ಲಿ ರಾಯಭಾರಿ ಕುಮಾರ್ ಆತ್ಮೀಯವಾಗಿ ಸ್ವಾಗತಿಸಿದರು.

ಸಚಿವ ಪ್ರಲ್ಹಾದ್​ ಜೋಶಿ ಟ್ವೀಟ್​


ಇನ್ನು ಈ ವೇಳೆ ಪ್ರತಿಕ್ರಿಯಿಸಿರುವ ಸಚಿವ ಪ್ರಲ್ಹಾದ ಜೋಶಿ, ಭಾರತದಲ್ಲಿನ ಆಹಾರ ವ್ಯವಸ್ಥೆ, ಸಾರ್ವಜನಿಕ ವಿತರಣೆ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ನಮ್ಮ ಕ್ರಾಂತಿ, ಆಡಳಿತ ಸುಧಾರಣೆ ಹಾಗೂ ಕಾರ್ಯವೈಖರಿಯು ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ ಎಂಬುದರ ಸಂಕೇತ ಇದಾಗಿದೆ. ಅಲ್ಲದೇ, ಹೆಚ್ಚಿನ ಹೂಡಿಕೆಯನ್ನು ಸೆಳೆಯಲು ಅವಕಾಶವಾಗಿದೆ ಎಂದು ಹೇಳಿದ್ದಾರೆ.

ಸಚಿವ ಎಂಬಿ ಪಾಟೀಲ್​​​ ನೇತೃತ್ವದ ನಿಯೋಗ ಕೂಡ ದಾವೋಸ್​ಗೆ

ಇನ್ನು ಇದೇ ವಿಶ್ವ ಆರ್ಥಿಕ ಸಮ್ಮೇಳನ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಲು ಬೃಹತ್​​​ ಕೈಗಾರಿಕಾ ಸಚಿವ
ಎಂ.ಬಿ ಪಾಟೀಲ್​​​ ನೇತೃತ್ವದ ರಾಜ್ಯ ಉನ್ನತ ಮಟ್ಟದ ನಿಯೋಗವು ಭಾನುವಾರದಂದು ಪ್ರಯಾಣ ಬೆಳೆಸಿದ್ದಾರೆ.

ಸಚಿವ ಎಂ.ಬಿ ಪಾಟೀಲ್ ಟ್ವೀಟ್​ 

ಅಮೆಜಾನ್​ ವೆಬ್​​ ಸರ್ವೀಸಸ್​, ಲೆನೊವೊ, ವಾಸ್ಟ್​​ ಸ್ಪೇಸ್​​, ಕೋಕಾ-ಕೋಲಾ, ಫಿಲಿಪ್​​ ಮಾರಿಸ್​​​, ಇಂಪೀರಿಯಲ್​​ ಕಾಲೇಜ್​​ ಲಂಡನ್​​​, ಸಿಂಗಪುರ ಆರ್ಥಿಕ ಅಭಿವೃದ್ಧಿ ಮಂಡಳಿ ಜೊತೆಗೆ ರಾಜ್ಯದ ನಿಯೋಗ ಮಾತುಕತೆ ನಡೆಸಲಿದೆ ಎಂದು ಟ್ವೀಟ್ ಮೂಲಕ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ​​​

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:35 pm, Sun, 18 January 26