Sheikh Hasina: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವೀಸಾ ರದ್ದುಗೊಳಿಸಿದ ಅಮೆರಿಕಾ

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಯ ನಂತರ ಬಾಂಗ್ಲಾದೇಶದಿಂದ ಭಾರತಕ್ಕೆ ಪಲಾಯನ ನಡೆಸಿರುವ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾವನ್ನು ಅಮೆರಿಕಾ ರದ್ದುಗೊಳಿಸಿದೆ. ಯುಎಸ್ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳು ಅವರನ್ನು ಅಧಿಕಾರದಿಂದ ಹೊರಹಾಕಲು ಪ್ರಯತ್ನಿಸುತ್ತಿವೆ ಎಂಬ ವರದಿಗಳ ನಡುವೆಯೇ ಈ ಬೆಳವಣಿಗೆ ಉಂಟಾಗಿದೆ.

Sheikh Hasina: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವೀಸಾ ರದ್ದುಗೊಳಿಸಿದ ಅಮೆರಿಕಾ
ಅಮೆರಿಕಾ ಅಧ್ಯಕ್ಷ ಜೋ ಬೈಡೆನ್
Follow us
ಸುಷ್ಮಾ ಚಕ್ರೆ
|

Updated on: Aug 06, 2024 | 7:50 PM

ವಾಷಿಂಗ್ಟನ್: ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಾಂಗ್ಲಾದೇಶದಿಂದ ಪಲಾಯನಗೊಂಡಿರುವ ಶೇಖ್ ಹಸೀನಾ ಕೆಲಕಾಲ ಇಂಗ್ಲೆಂಡ್​ನಲ್ಲಿ ವಾಸ್ತವ್ಯ ಹೂಡಲು ನಿರ್ಧರಿಸಿದ್ದಾರೆ. ಆದರೆ, ಅವರಿಗೆ ಅಲ್ಲಿಗೆ ತೆರಳಲು ಇನ್ನೂ ಅನುಮತಿ ಸಿಗದ ಹಿನ್ನೆಲೆಯಲ್ಲಿ ಸದ್ಯಕ್ಕೆ ಭಾರತದ ದೆಹಲಿಯಲ್ಲಿ ಸುರಕ್ಷಿತ ಸ್ಥಳದಲ್ಲಿದ್ದಾರೆ. ಮೂಲಗಳ ಪ್ರಕಾರ ಯುಕೆ (ಇಂಗ್ಲೆಂಡ್) ಆಕೆಗೆ ಆಶ್ರಯ ನೀಡಲು ಸಿದ್ಧವಾಗಿಲ್ಲ. ಹೀಗಾಗಿ, ಶೇಖ್ ಹಸೀನಾ ಅವರ ಪರಿಸ್ಥಿತಿ ಅತಂತ್ರವಾಗಿದೆ. ಇನ್ನೊಂದೆಡೆ ಅಮೆರಿಕಾ ಶೇಖ್ ಹಸೀನಾ ಅವರ ವೀಸಾವನ್ನು ರದ್ದುಗೊಳಿಸುವ ಮೂಲಕ ಮತ್ತೊಂದು ಶಾಕ್ ನೀಡಿದೆ.

ಸದ್ಯದ ಪರಿಸ್ಥಿತಿಯನ್ನು ನೋಡಿದರೆ ಬಾಂಗ್ಲಾದಿಂದ ಪರಾರಿಯಾಗಿರುವ ಶೇಖ್ ಹಸೀನಾ ಭಾರತದಲ್ಲೇ ಉಳಿಯಬೇಕಾದ ಅನಿವಾರ್ಯತೆ ಎದುರಾಗಬಹುದು. ಶೇಖ್ ಹಸೀನಾ ಪ್ರಸ್ತುತ ಭಾರತದಲ್ಲಿ ಸುರಕ್ಷಿತ ಮತ್ತು ರಹಸ್ಯ ಸ್ಥಳದಲ್ಲಿದ್ದಾರೆ. ಅವರಿಗೆ ಭಾರತದಲ್ಲಿ ಆಶ್ರಯ ನೀಡಿರುವ ಬಗ್ಗೆ ಈಗಾಗಲೇ ಮೋದಿ ಸರ್ಕಾರ ರಾಜ್ಯಸಭೆಯಲ್ಲಿ ಘೋಷಿಸಿದೆ. ಈ ಹಿಂದೆ 1975ರಲ್ಲಿ ಕೂಡ ಶೇಖ್ ಹಸೀನಾ ಆಗಿನ ಪ್ರಧಾನಿ ಇಂದಿರಾ ಗಾಂಧಿಯವರಿಂದ ದೆಹಲಿಯಲ್ಲಿ 6 ವರ್ಷಗಳ ಕಾಲ ಆಶ್ರಯ ಪಡೆದಿದ್ದರು.

ಇದನ್ನೂ ಓದಿ: 49 ವರ್ಷಗಳ ಹಿಂದೆಯೂ ಶೇಖ್ ಹಸೀನಾಗೆ ಆಶ್ರಯ ನೀಡಿ ಪ್ರಾಣ ಉಳಿಸಿತ್ತು ಭಾರತ; ಆಗ ನಡೆದಿದ್ದೇನು?

ಕೆಲವು “ಅನಿಶ್ಚಿತತೆಗಳಿಂದ” ಶೇಖ್ ಹಸೀನಾ ಅವರ ಪ್ರಯಾಣದ ಯೋಜನೆಗಳು ಬದಲಾಗಿವೆ. ಅವರು ಮುಂದಿನ ಒಂದೆರಡು ದಿನಗಳವರೆಗೆ ಭಾರತದಿಂದ ಹೊರಹೋಗುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ. ಭಾರೀ ಹಿಂಸಾತ್ಮಕ ಪ್ರತಿಭಟನೆಗಳ ನಂತರ ಪ್ರಧಾನಿ ಹುದ್ದೆಯಿಂದ ಕೆಳಗಿಳಿದ ಕೆಲವೇ ಗಂಟೆಗಳಲ್ಲಿ ಶೇಖ್ ಹಸೀನಾ ನಿನ್ನೆ ಸಂಜೆ ತನ್ನ ಸಹೋದರಿ ಶೇಖ್ ರೆಹಾನಾ ಅವರೊಂದಿಗೆ ಭಾರತದ ಹಿಂಡನ್ ವಾಯುನೆಲೆಗೆ ಆಗಮಿಸಿದರು. ಅಲ್ಲಿಂದ ಬಿಗಿ ಭದ್ರತೆಯಲ್ಲಿ ಅವರನ್ನು ರಹಸ್ಯ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.

ಶೇಖ್ ಹಸೀನಾ ಅವರ ಸಹೋದರಿ ಶೇಖ್ ರೆಹಾನಾ ಯುಕೆ ಪೌರತ್ವವನ್ನು ಹೊಂದಿದ್ದಾರೆ. ಹೀಗಾಗಿ, ಅವರು ಇಂಗ್ಲೆಂಡ್​ನಲ್ಲಿ ವಾಸವಾಗುವ ಪ್ಲಾನ್ ಮಾಡಿದ್ದರು. ಆದರೆ, ಶೇಖ್ ಹಸೀನಾಗೆ ಆಶ್ರಯ ನೀಡುವ ಬಗ್ಗೆ ಇಂಗ್ಲೆಂಡ್ ಯಾವುದೇ ಖಚಿತತೆ ನೀಡಿಲ್ಲ.

ಇದನ್ನೂ ಓದಿ: Sheikh Hasina: ಆ ಒಂದು ಫೋನ್ ಕಾಲ್​ನಿಂದ ಬಾಂಗ್ಲಾದೇಶ ಬಿಟ್ಟು ಹೊರಟ ಶೇಖ್ ಹಸೀನಾ

“ವೀಸಾ ದಾಖಲೆಗಳು ಯುಎಸ್​ ಕಾನೂನಿನ ಅಡಿಯಲ್ಲಿ ಗೌಪ್ಯವಾಗಿರುತ್ತವೆ. ಆದ್ದರಿಂದ, ನಾವು ವೈಯಕ್ತಿಕ ವೀಸಾ ಪ್ರಕರಣಗಳ ವಿವರಗಳನ್ನು ಚರ್ಚಿಸುವುದಿಲ್ಲ” ಎಂದು ಢಾಕಾದಲ್ಲಿನ ಯುಎಸ್ ರಾಯಭಾರ ಕಚೇರಿಯ ವಕ್ತಾರರು ಇಂದು ಸುದ್ದಿಗಾರರಿಗೆ ತಿಳಿಸಿದ್ದಾರೆ ಎಂದು ಯುನೈಟೆಡ್ ನ್ಯೂಸ್ ಆಫ್ ಬಾಂಗ್ಲಾದೇಶ ವರದಿ ಮಾಡಿದೆ. ಮಾಹಿತಿಗಳ ಪ್ರಕಾರ ಶೇಖ್ ಹಸೀನಾ ಅವರಿಗೆ ಮಾತ್ರವಲ್ಲದೆ ಅವರ ಪಕ್ಷದ ಸದಸ್ಯರು ಮತ್ತು ಅಧಿಕಾರಿಗಳಿಗೆ ಕೂಡ ಅಮೆರಿಕಾ ವೀಸಾ ನಿರ್ಬಂಧಗಳನ್ನು ವಿಧಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ