ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಕುರಿತ ತನಿಖೆಗೆ ಸಂಪೂರ್ಣವಾಗಿ ಸಹಕರಿಸಲು ಭಾರತವನ್ನು ಒತ್ತಾಯಿಸಿದ ಅಮೆರಿಕ

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್​(Hardeep Singh Nijjar) ಹತ್ಯೆಗೆ ಸಂಬಂಧಿಸಿದ ತನಿಖೆಗೆ ಸಂಪೂರ್ಣವಾಗಿ ಸಹಕಾರ ನೀಡುವಂತೆ ಅಮೆರಿಕ ಭಾರತವನ್ನು ಒತ್ತಾಯಿಸಿದೆ. ಬ್ರಿಟಿಷ್ ಕೊಲಂಬಿಯಾದಲ್ಲಿ ನಡೆದ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟ್​ಗಳ ಕೈವಾಡವಿದೆ ಎಂದು ಕೆನಡಾ ಆರೋಪಿಸಿದೆ. ಈ ಕುರಿತು ಶ್ವೇತಭವನ ಕಳವಳ ವ್ಯಕ್ತಪಡಿಸಿದ್ದು, ತನಿಖೆಗೆ ಸಹಕಾರ ನೀಡುವಂತೆ ಭಾರತಕ್ಕೆ ಮನವಿ ಮಾಡಿದೆ. ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತವು ಕೆನಡಾದ ಬಳಿ ಪುರಾವೆಗಳನ್ನು ಕೇಳಿದೆ, ಯಾವುದೇ ಸಾಕ್ಷ್ಯಗಳಿಲ್ಲದೆ ಆರೋಪ ಮಾಡಬೇಡಿ ಎಂದು ಹೇಳಿದೆ.

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಕುರಿತ ತನಿಖೆಗೆ ಸಂಪೂರ್ಣವಾಗಿ ಸಹಕರಿಸಲು ಭಾರತವನ್ನು ಒತ್ತಾಯಿಸಿದ ಅಮೆರಿಕ
ವೈಟ್​ಹೌಸ್ ಅಧಿಕಾರಿಗಳುImage Credit source: NDTV
Follow us
|

Updated on: Sep 21, 2023 | 8:10 AM

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್​(Hardeep Singh Nijjar) ಹತ್ಯೆಗೆ ಸಂಬಂಧಿಸಿದ ತನಿಖೆಗೆ ಸಂಪೂರ್ಣವಾಗಿ ಸಹಕಾರ ನೀಡುವಂತೆ ಅಮೆರಿಕ ಭಾರತವನ್ನು ಒತ್ತಾಯಿಸಿದೆ. ಬ್ರಿಟಿಷ್ ಕೊಲಂಬಿಯಾದಲ್ಲಿ ನಡೆದ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟ್​ಗಳ ಕೈವಾಡವಿದೆ ಎಂದು ಕೆನಡಾ ಆರೋಪಿಸಿದೆ. ಈ ಕುರಿತು ಶ್ವೇತಭವನ ಕಳವಳ ವ್ಯಕ್ತಪಡಿಸಿದ್ದು, ತನಿಖೆಗೆ ಸಹಕಾರ ನೀಡುವಂತೆ ಭಾರತಕ್ಕೆ ಮನವಿ ಮಾಡಿದೆ. ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತವು ಕೆನಡಾದ ಬಳಿ ಪುರಾವೆಗಳನ್ನು ಕೇಳಿದೆ, ಯಾವುದೇ ಸಾಕ್ಷ್ಯಗಳಿಲ್ಲದೆ ಆರೋಪ ಮಾಡಬೇಡಿ ಎಂದು ಹೇಳಿದೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್ ಹೊಸ ಸಂಸತ್ತಿನಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು. ಅಲ್ಲದೆ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ರಾಷ್ಟ್ರೀಯ ಭದ್ರತಾ ಏಜೆನ್ಸಿಗಳ ನಡುವೆ ಸಭೆ ಕೂಡ ನಡೆಯಿತು. ಇದಾದ ಬಳಿಕ ಭಾರತ ಕೆನಡಾದಿಂದ ಸಾಕ್ಷ್ಯ ಕೇಳಿದೆ.

ಸಾಕ್ಷ್ಯಾಧಾರಗಳ ಆಧಾರದ ಮೇಲೆ ಕೆನಡಾ ನಡೆಸುವ ತನಿಖೆಗೆ ಸಹಕರಿಸುತ್ತೇವೆ, ಈ ಹತ್ಯೆ ಹಾಗೂ ಭಾರತದ ಗುಪ್ತಚರ ಸಂಸ್ಥೆಗಳಿಗೆ ಯಾವುದೇ ಸಂಬಂಧವಿಲ್ಲ ಹಾಗೂ ಆರೋಪಗಳು ಆಧಾರರಹಿತ ಮತ್ತು ರಾಜಕೀಯ ಪ್ರೇರಿತ ಎಂದು ಹೇಳಿದೆ.

ಮತ್ತಷ್ಟು ಓದಿ: ಕೆನಡಾದಲ್ಲಿ ಭಾರತೀಯ ಸಮುದಾಯದವರ ಸ್ಥಳಗಳ ಮೇಲೆ ಖಲಿಸ್ತಾನೀ ಉಗ್ರರಿಂದ ದಾಳಿಗೆ ಸಂಚು: ಗುಪ್ತಚರರ ಮಾಹಿತಿ

ಜೂನ್​ನಲ್ಲಿ ಹತ್ಯೆಯಾಗಿದ್ದ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಟ್ರುಡೋ ಗಂಭೀರ ಅರೋಪ ಮಾಡಿದ್ದಾರೆ. ಈ ಬಗ್ಗೆ ಅಲ್ಲಿನ ಸಂಸತ್‌ನಲ್ಲಿ ನಡೆದ ತುರ್ತು ಅಧಿವೇಶನದಲ್ಲಿ ಮಾತನಾಡಿದ್ದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ, ನಿಜ್ಜರ್‌ ಹತ್ಯೆ ಹಿಂದೆ ಭಾರತೀಯ ಏಜೆಂಟ್‌ಗಳ ಕೈವಾಡವಿದೆ ಅನ್ನೋದಕ್ಕೆ ನಮ್ಮ ಸರ್ಕಾರದ ಬಳಿ ಸಾಕ್ಷಿಗಳಿವೆ ಎಂದು ಹೇಳಿದ್ದಾರೆ ಆ ಸಾಕ್ಷಿಗಳನ್ನು ನೀಡುವಂತೆ ಭಾರತ ಕೇಳಿದೆ.

ಕೆನಡಾದ ಆರೋಪಕ್ಕೆ ಭಾರತ ತಕ್ಕ ಪ್ರತಿಕ್ರಿಯೆ ನೀಡಿದ್ದು, ಈ ಆರೋಪಗಳು ಆಧಾರರಹಿತ ಮತ್ತು ಉದ್ದೇಶಪೂರ್ವಕ ಎಂದು ತಿರಸ್ಕರಿಸಿದ್ದಷ್ಟೇ ಅಲ್ಲದೆ,  ಕೆನಡಾದ ನಡೆಯನ್ನು ತೀವ್ರವಾಗಿ ಟೀಕಿಸಿರುವ ಭಾರತ, ಭಯೋತ್ಪಾದಕರಿಗೆ ಸಾರ್ವಜನಿಕವಾಗಿ ಸಿಂಪತಿ ತೋರಿಸೋದು ಕಳವಳಕಾರಿ ವಿಷಯ ಅಂತ ಹೇಳಿದೆ.
ಈ ರೀತಿ ಆಧಾರರಹಿತ ಆರೋಪ ಮಾಡುವ ಮೂಲಕ ಕೆನಡಾ ಖಲಿಸ್ತಾನಿ ಭಯೋತ್ಪಾದಕರು ಮತ್ತು ಉಗ್ರಗಾಮಿಗಳ ಮೇಲಿದ್ದ ಗಮನವನ್ನ ಬದಲಿಸಲು ಬಯಸುತ್ತಿದೆ. ಅಲ್ಲದೆ ಕೆನಡಾದಲ್ಲಿ ಆಶ್ರಯ ಪಡೆದಿರುವ ಈ ಉಗ್ರರಿಂದ ಭಾರತದ ಸಾರ್ವಭೌಮತೆಗೆ ಹಾಗೂ ಸಮಗ್ರತೆಗೆ ಬೆದರಿಕೆ ಹಾಕುತ್ತಿವೆ ಎಂದು ಹೇಳಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ