ಒಮಾನ್​ನ ಶಿನಾಸ್ ಬಂದರು ಬಳಿ 20 ಭಾರತೀಯ ಸಿಬ್ಬಂದಿ ಇದ್ದ ಹಡಗಿನ ಮೇಲೆ ಅಮೆರಿಕದ ಮತ್ತೊಂದು ದಾಳಿ

ಒಮಾನ್‌ನ ಶಿನಾಸ್ ಬಂದರು ಬಳಿ ಭಾರತೀಯ ಸಿಬ್ಬಂದಿ ಇದ್ದ MT ಜಲವೀರ್ ಹಡಗಿನ ಮೇಲೆ ಅಮೆರಿಕ ದಾಳಿ ನಡೆಸಿದೆ. 20 ಭಾರತೀಯ ಸಿಬ್ಬಂದಿಯ ಪೈಕಿ 21 ಮಂದಿಯನ್ನು ರಕ್ಷಿಸಲಾಗಿದ್ದು, 3 ಮಂದಿ ನಾಪತ್ತೆಯಾಗಿದ್ದಾರೆ. ಈ ಘಟನೆ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದ್ದು, ಭಾರತ ಸರ್ಕಾರವು ರಾಜತಾಂತ್ರಿಕ ಕ್ರಮಕ್ಕೆ ಮುಂದಾಗಿದೆ. ಪರಿಸ್ಥಿತಿಯನ್ನು ಭಾರತೀಯ ರಾಯಭಾರ ಕಚೇರಿ ಸೂಕ್ಷ್ಮವಾಗಿ ಗಮನಿಸುತ್ತಿದೆ.

ಒಮಾನ್​ನ ಶಿನಾಸ್ ಬಂದರು ಬಳಿ 20 ಭಾರತೀಯ ಸಿಬ್ಬಂದಿ ಇದ್ದ ಹಡಗಿನ ಮೇಲೆ ಅಮೆರಿಕದ ಮತ್ತೊಂದು ದಾಳಿ
ಹಡಗು

Updated on: Jun 11, 2026 | 1:22 PM

ಮಸ್ಕತ್, ಜೂನ್ 11: ಒಮಾನ್​ನ ಶಿನಾಸ್ ಬಂದಿರಿನ ಬಳಿ ಭಾರತೀಯ ಸಿಬ್ಬಂದಿ ಇದ್ದ ವಾಣಿಜ್ಯ ಹಡಗಿನ ಮೇಲೆ ಅಮೆರಿಕ(America) ಮತ್ತೊಂದು ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಮೆರಿಕ ಹಾಗೂ ಇರಾನ್ ನಡುವಿನ ನಿರಂತರ ದಾಳಿಗಳ ನಂತರ ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಾದ ನಂತರ ಇತ್ತೀಚಿನ ದಿನಗಳಲ್ಲಿ ನಡೆದ ಮೂರನೇ ಘಟನೆ ಇದಾಗಿದೆ. ಈ ಹಡಗನ್ನು ಎಂಟಿ ಜಲವೀರ್ ಎಂದು ಗುರುತಿಸಲಾಗಿದ್ದು,ಇದು ಗಿನಿಯಾ ಧ್ವಜವನ್ನು ಹೊಂದಿರುವ ಹಡಗು. ಎಂಟಿ ಜಲವೀರ್​ನಲ್ಲಿ 20 ಭಾರತೀಯ ಸಿಬ್ಬಂದಿ ಇದ್ದರು ಎಂದು ವರದಿಯಾಗಿದೆ. ಹಡಗು 119.95 ಮೀಟರ್ ಉದ್ದ ಮತ್ತು 16.84 ಮೀಟರ್ ಅಗಲವಿರುವ ಟ್ಯಾಂಕರ್ ಆಗಿತ್ತು.

ಹಡಗಿನಿಂದ ಹೊಗೆ ಏರುತ್ತಿರುವುದನ್ನು ತೋರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಒಮಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಘಟನೆಯ ಬಗ್ಗೆ ತಿಳಿದಿದೆ ಮತ್ತು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಇಂಡಿಯಾ ಟಿವಿ ಡಿಜಿಟಲ್ ವರದಿ ಮಾಡಿದೆ.
ಒಮಾನ್‌ನ ಶಿನಾಸ್ ಬಂದರಿನ ಬಳಿ ಇಂದು ಮುಂಜಾನೆ ಹಡಗೊಂದರ ಘಟನೆ ನಡೆದಿರುವ ಬಗ್ಗೆ ನಮಗೆ ತಿಳಿದುಬಂದಿದೆ.

ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ಹೆಚ್ಚಿನ ವಿವರಗಳಿಗಾಗಿ ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದ್ದೇವೆ ಎಂದು ರಾಯಭಾರ ಕಚೇರಿಯು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ.

ವಿಡಿಯೋ

ಅಮೆರಿಕದ ಪಡೆಗಳು ನಿಯಮ ಪಾಲಿಸದ ಎಂಟು ಹಡಗುಗಳನ್ನು ನಿಷ್ಕ್ರಿಯಗೊಳಿಸಿವೆ ಮತ್ತು 134 ಹಡಗುಗಳನ್ನು ಮರುನಿರ್ದೇಶಿಸಿವೆ ಎಂದು ಸೆಂಟ್ರಲ್ ಕಮಾಂಡ್ ತಿಳಿಸಿದೆ. ಒಮಾನ್​ನಲ್ಲಿ ಭಾರತದ ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ ನಡೆಸಿದೆ. 24 ಮಂದಿ ಭಾರತೀಯರ ಪೈಕಿ, 21 ಮಂದಿಯನ್ನು ರಕ್ಷಿಸಲಾಗಿದ್ದು, ಮೂವರು ಇನ್ನೂ ನಾಪತ್ತೆಯಾಗಿದ್ದಾರೆ. ಒಮಾನ್‌ನಲ್ಲಿರುವ ನಮ್ಮ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಡೆಯುತ್ತಿರುವ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಒಮಾನಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಮತ್ತಷ್ಟು ಓದಿ: ಹಾರ್ಮುಜ್​ನಲ್ಲಿ ಭಾರಿ ಮಿಲಿಟರಿ ಸಂಘರ್ಷ, ಅಮೆರಿಕ ಇರಾನ್ ನಡುವೆ ದಾಳಿ, ಪ್ರತಿದಾಳಿ

ರಾಸಾಯನಿಕ ಮತ್ತು ತೈಲ ಉತ್ಪನ್ನಗಳ ಟ್ಯಾಂಕರ್ ಸೆಟ್ಟೆಬೆಲ್ಲೊ ಒಮಾನಿ ಕರಾವಳಿಯಲ್ಲಿ ಡಿಕ್ಕಿ ಹೊಡೆದಿದ್ದು, ಇದು ಅಮೆರಿಕದ ಕ್ಷಿಪಣಿ ದಾಳಿ ಎಂದು ಹೇಳಲಾಗುತ್ತಿದೆ. ಪ್ರದೇಶದಾದ್ಯಂತ ಉದ್ವಿಗ್ನತೆ ಹೆಚ್ಚುತ್ತಿರುವಂತೆ, ವ್ಯಾಪಾರಿ ಹಡಗುಗಳ ಮೇಲಿನ ದಾಳಿಗಳು ಹೆಚ್ಚು ಅಪಾಯಕಾರಿಯಾಗುತ್ತಿವೆ ಎಂದು ಭಾರತ ಎಚ್ಚರಿಸಿದೆ. ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆಯಲು ತುರ್ತು ರಾಜತಾಂತ್ರಿಕ ಪ್ರಯತ್ನಗಳಿಗೆ ಕರೆ ನೀಡಿದೆ. ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್ ಜಾರಿ ಮಾಡಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 1:21 pm, Thu, 11 June 26

Loading...
Unable to load recommendations.
Follow Us