Swaminarayan Temple Vandalised: ಕ್ಯಾಲಿಫೋರ್ನಿಯಾದಲ್ಲಿ BAPS ಸ್ವಾಮಿನಾರಾಯಣ ದೇವಸ್ಥಾನ ಧ್ವಂಸಗೊಳಿಸಿದ ಕಿಡಿಗೇಡಿಗಳು

ನ್ಯೂಯಾರ್ಕ್‌ನ ಬಿಎಪಿಎಸ್ ಮಂದಿರದಲ್ಲಿ ಇದೇ ರೀತಿಯ ವಿಧ್ವಂಸಕ ಕೃತ್ಯ ನಡೆದ 10 ದಿನಗಳ ನಂತರ ಸೆಪ್ಟೆಂಬರ್ 25 ರ ರಾತ್ರಿ ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊ ಪ್ರದೇಶದಲ್ಲಿರುವ BAPS ಶ್ರೀ ಸ್ವಾಮಿನಾರಾಯಣ ಮಂದಿರವನ್ನು ಹಿಂದೂ ವಿರೋಧಿ ಸಂದೇಶಗಳೊಂದಿಗೆ ಅಪವಿತ್ರಗೊಳಿಸಲಾಯಿತು.

Swaminarayan Temple Vandalised: ಕ್ಯಾಲಿಫೋರ್ನಿಯಾದಲ್ಲಿ BAPS ಸ್ವಾಮಿನಾರಾಯಣ ದೇವಸ್ಥಾನ ಧ್ವಂಸಗೊಳಿಸಿದ ಕಿಡಿಗೇಡಿಗಳು
ದೇವಸ್ಥಾನImage Credit source: ANI
Follow us
ನಯನಾ ರಾಜೀವ್
|

Updated on: Sep 26, 2024 | 8:27 AM

ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೋದಲ್ಲಿರುವ BAPS ಸ್ವಾಮಿನಾರಾಯಣ ಮಂದಿರವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ನ್ಯೂಯಾರ್ಕ್‌ನ ದೇವಾಲಯದಲ್ಲಿ ಇದೇ ರೀತಿಯ ಘಟನೆ ನಡೆದು 10 ದಿನಗಳ ನಂತರ ಇಲ್ಲಿ ಈ ಘಟನೆ ನಡೆದಿದೆ.

ದೇವಾಲಯದ ಗೋಡೆಯ ಮೇಲೆ ಹಿಂದೂ ವಿರೋಧಿ ಬರಹಗಳು ಕಂಡುಬಂದಿದ್ದು, ಹಿಂದೂಗಳು ಹಿಂದಿರುಗಿ ಎಂದು ಬರೆದಿರುವುದು ಸ್ಥಳೀಯ ಹಿಂದೂ ಸಮುದಾಯದವರ ಆತಂಕಕ್ಕೆ ಕಾರಣವಾಗಿದೆ.

ಇದಕ್ಕೂ ಮೊದಲು, ಸೆಪ್ಟೆಂಬರ್ 17, 2024 ರಂದು ನ್ಯೂಯಾರ್ಕ್‌ನ BAPS ಸ್ವಾಮಿನಾರಾಯಣ ದೇವಸ್ಥಾನದಲ್ಲಿ ಇದೇ ರೀತಿಯ ವಿಧ್ವಂಸಕ ಘಟನೆ ನಡೆದಿತ್ತು.

ಮತ್ತಷ್ಟು ಓದಿ:Swaminarayan Temple Vandalised: ಕೆನಡಾದ ಸ್ವಾಮಿನಾರಾಯಣ ದೇವಸ್ಥಾನ ಧ್ವಂಸ, ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆ: ಭಾರತ ತೀವ್ರ ಆಕ್ರೋಶ

ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ನ್ಯೂಯಾರ್ಕ್‌ನ ಮೆಲ್‌ವಿಲ್ಲೆಯಲ್ಲಿರುವ BAPS ಸ್ವಾಮಿನಾರಾಯಣ ದೇವಸ್ಥಾನದ ವಿಧ್ವಂಸಕತೆಯನ್ನು ಖಂಡಿಸಿದರು, ಅದನ್ನು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದರು.

ಕೆಲವು ದಿನಗಳ ಹಿಂದಷ್ಟೇ ಖಲಿಸ್ತಾನ್ ಉಗ್ರ ಗುರುಪಂತ್ವ ಸಿಂಗ್ ಪನ್ನು ಹಿಂದೂ ದೇವಾಲಯ ಹಾಗೂ ಸಂಸ್ಥೆಗಳಿಗೆ ಇರುವ ಬೆದರಿಕೆಯ ವಿಡಿಯೋಗಳನ್ನು ಹಂಚಿಕೊಂಡಿದ್ದ.

ಸದ್ಯ ನ್ಯೂಯಾರ್ಕ್​​ನಲ್ಲಿ ಸ್ವಾಮಿ ನಾರಾಯಣ ದೇವಾಲಯದ ಮೇಲೆ ನಡೆದ ದಾಳಿಯೂ ಕೂಡ ಕ್ಯಾಲಿಫೋರ್ನಿಯಾ ಹಾಗೂ ಕೆನಡಾದಲ್ಲಿ ನಡೆದ ಮಾದರಿಯಲ್ಲಿಯೇ ನಡೆದಿದೆ. ಇದರ ಹಿಂದೆ ಖಲಿಸ್ತಾನಿ ಉಗ್ರರ ಕೈವಾಡವಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ