High Alert in US: ಇರಾನ್ನಿಂದ ಪ್ರತಿದಾಳಿಯ ಆತಂಕ, ಅಮೆರಿಕದ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ
ಇರಾನ್‌ನ ಮೂರು ಪ್ರಮುಖ ಪರಮಾಣು ನೆಲೆಗಳ ಮೇಲೆ ಅಮೆರಿಕ ವಾಯುದಾಳಿ ನಡೆಸಿದ ನಂತರ, ನ್ಯೂಯಾರ್ಕ್ ಮತ್ತು ವಾಷಿಂಗ್ಟನ್ ಸೇರಿದಂತೆ ಪ್ರಮುಖ ಅಮೇರಿಕನ್ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಆದರೆ ಆ ಎಚ್ಚರಿಕೆ ಮೀರಿ ಇರಾನ್ ಇಸ್ರೇಲ್ ಮೇಲೆ ದಾಳಿ ನಡೆಸಿದೆ. ಹಾಗಾಗಿ ಅಮೆರಿಕಕ್ಕೆ ಭಯ ಶುರುವಾಗಿದ್ದು, ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರವಹಿಸಲು ಸೂಚನೆ ನೀಡಲಾಗಿದೆ.ನ್ಯೂಯಾರ್ಕ್ ಮತ್ತು ವಾಷಿಂಗ್ಟನ್ ಸೇರಿದಂತೆ ಅಮೆರಿಕದ ಪ್ರಮುಖ ನಗರಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಲಾಗಿದೆ. ಕಾನೂನು ಜಾರಿ ಸಂಸ್ಥೆಗಳು ಇಲ್ಲಿಯವರೆಗೆ ಯಾವುದೇ ನಿರ್ದಿಷ್ಟ ಅಥವಾ ವಿಶ್ವಾಸಾರ್ಹ ಬೆದರಿಕೆಗಳಿಲ್ಲ ಎಂದು ಹೇಳಿವೆ.

ಇರಾನ್, ಜೂನ್ 22: ಇರಾನ್(Iran) ಅಮೆರಿಕದ ಮೇಲೆ ಪ್ರತಿದಾಳಿ ನಡೆಸುವ ಸಾಧ್ಯತೆ ಇರುವ ಕಾರಣ, ಅಮೆರಿಕದ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರವಹಿಸಲಾಗಿದೆ. ಅಮೆರಿಕವು ಇರಾನ್‌ನ ಮೂರು ಪರಮಾಣು ಕೇಂದ್ರಗಳ ಮೇಲೆ ದಾಳಿ ನಡೆಸಿತ್ತು. ಇದಾದ ಬಳಿಕ ಒಂದೊಮ್ಮೆ ನೀವು ಪ್ರತೀಕಾರ ತೀರಿಸಿಕೊಳ್ಳಲು ಮುಂದಾದರೆ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಟ್ರಂಪ್ ಎಚ್ಚರಿಕೆಯನ್ನೂ ನೀಡಿದ್ದರು.
ಆದರೆ ಆ ಎಚ್ಚರಿಕೆ ಮೀರಿ ಇರಾನ್ ಇಸ್ರೇಲ್ ಮೇಲೆ ದಾಳಿ ನಡೆಸಿದೆ. ಹಾಗಾಗಿ ಅಮೆರಿಕಕ್ಕೆ ಭಯ ಶುರುವಾಗಿದ್ದು, ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರವಹಿಸಲು ಸೂಚನೆ ನೀಡಲಾಗಿದೆ.ನ್ಯೂಯಾರ್ಕ್ ಮತ್ತು ವಾಷಿಂಗ್ಟನ್ ಸೇರಿದಂತೆ ಅಮೆರಿಕದ ಪ್ರಮುಖ ನಗರಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಲಾಗಿದೆ. ಕಾನೂನು ಜಾರಿ ಸಂಸ್ಥೆಗಳು ಇಲ್ಲಿಯವರೆಗೆ ಯಾವುದೇ ನಿರ್ದಿಷ್ಟ ಅಥವಾ ವಿಶ್ವಾಸಾರ್ಹ ಬೆದರಿಕೆಗಳಿಲ್ಲ ಎಂದು ಹೇಳಿವೆ.
ಇಸ್ರೇಲ್‌ನೊಂದಿಗೆ ನಡೆಯುತ್ತಿರುವ ಯುದ್ಧದ ಮಧ್ಯೆ, ಯುಎಸ್ ವಾಯುಪಡೆಯು ಇರಾನ್‌ನ ಮೂರು ಪರಮಾಣು ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ. ಇದರಲ್ಲಿ ಫೋರ್ಡೊ, ನಟಾಂಜ್ ಮತ್ತು ಎಸ್ಫಹಾನ್‌ನಂತಹ ಪ್ರಮುಖ ಪರಮಾಣು ನೆಲೆಗಳು ಸೇರಿವೆ. ಅಮೆರಿಕದ ಎಲ್ಲಾ ವಿಮಾನಗಳು ಇರಾನ್‌ನ ವಾಯುಪ್ರದೇಶವನ್ನು ತೊರೆದಿವೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಯುಎಸ್ ಬಾಂಬ್ ದಾಳಿಯ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ಓದಿ: ಅಮೆರಿಕದ ದಾಳಿ, ಎಚ್ಚರಿಕೆಗೆ ಬಗ್ಗದ ಇರಾನ್, ಇಸ್ರೇಲ್ ಮೇಲೆ ಮತ್ತೆ ಕ್ಷಿಪಣಿ ದಾಳಿ
ಅಮೆರಿಕದ ದಾಳಿಯ ನಂತರ, ನ್ಯೂಯಾರ್ಕ್ ಪೊಲೀಸ್ ಇಲಾಖೆ ಇರಾನ್‌ನಲ್ಲಿ ನಡೆಯುತ್ತಿರುವ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಹೇಳಿದೆ. ಇರಾನ್ ಮೇಲಿನ ವಾಯುದಾಳಿಯ ನಂತರ, ಡೊನಾಲ್ಡ್ ಟ್ರಂಪ್ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಾ, ಕಳೆದ 40 ವರ್ಷಗಳಿಂದ ಇರಾನ್ ಅಮೆರಿಕದ ವಿರುದ್ಧ ಕೆಲಸ ಮಾಡುತ್ತಿದೆ. ಅನೇಕ ಅಮೆರಿಕನ್ನರು ಈ ದ್ವೇಷಕ್ಕೆ ಬಲಿಯಾಗಿದ್ದಾರೆ. ಆದ್ದರಿಂದ, ಇದನ್ನು ಇನ್ನು ಮುಂದೆ ಸಹಿಸಲಾಗುವುದಿಲ್ಲ ಎಂದು ಅವರು ನಿರ್ಧರಿಸಿದ್ದಾರೆ ಎಂದು ಹೇಳಿದರು.
ಶಾಂತಿ ನೆಲೆಸಬಹುದು ಅಥವಾ ದುರಂತ ಸಂಭವಿಸಬಹುದು ಎರಡೂ ನಿಮ್ಮ ಕೈಯಲ್ಲಿದೆ ಎಂದು ಟ್ರಂಪ್ ಹೇಳಿದ್ದರು.ಇರಾನ್ ಯಾವುದೇ ಸಮಯದಲ್ಲಿ ಅಮೆರಿಕದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬಹುದು ಎಂಬ ಭಯವಿದೆ. ಇರಾನ್‌ನ ಪರಮಾಣು ತಾಣಗಳ ಮೇಲೆ ಅಮೆರಿಕ ದಾಳಿ ಮಾಡಿದ ನಂತರ ಇಸ್ರೇಲ್ ತನ್ನ ದೇಶದ ವಾಯುಪ್ರದೇಶವನ್ನು ಮುಚ್ಚಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




