AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Joe Biden : ಅಮೆರಿಕದ ಮಾಜಿ ಅಧ್ಯಕ್ಷ ಜೋ ಬೈಡನ್​ಗೆ ಪ್ರಾಸ್ಟೇಟ್ ಕ್ಯಾನ್ಸರ್

Prostate Cancer: ಅಮೆರಿಕದ ಮಾಜಿ ಅಧ್ಯಕ್ಷ ಜೋ ಬೈಡನ್ ಅವರು ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. 82 ವರ್ಷದ ಬೈಡನ್ ಅವರ ಮೂಳೆಗಳಿಗೆ ಕ್ಯಾನ್ಸರ್ ಹರಡಿದೆ. ಜೋ ಬೈಡನ್ ಅವರ ಕಚೇರಿ ಭಾನುವಾರ ಈ ಮಾಹಿತಿಯನ್ನು ನೀಡಿದೆ. ಜೋ ಬೈಡನ್ ಅವರ ಗಂಭೀರ ಆರೋಗ್ಯ ಸ್ಥಿತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದುಃಖ ವ್ಯಕ್ತಪಡಿಸಿದ್ದು, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಡೊನಾಲ್ಡ್ ಟ್ರಂಪ್ ಟ್ರೂತ್ ಸೋಷಿಯಲ್‌ನಲ್ಲಿ ಬರೆದಿದ್ದಾರೆ, ಬೈಡನ್‌ಗೆ ಪ್ರಾಸ್ಟೇಟ್ ಕ್ಯಾನ್ಸರ್ ಇರುವುದು ಪತ್ತೆಯಾದ ಸುದ್ದಿ ಕೇಳಿ ಮೆಲಾನಿಯಾ ಮತ್ತು ನನಗೆ ಇಬ್ಬರಿಗೂ ದುಃಖವಾಗಿದೆ. ಬೈಡನ್ ಬೇಗ ಗುಣಮುಖರಾಗಲಿ ಎಂದು ಆಶಿಸುತ್ತೇವೆ ಎಂದು ಹೇಳಿದ್ದಾರೆ.

Joe Biden : ಅಮೆರಿಕದ ಮಾಜಿ ಅಧ್ಯಕ್ಷ ಜೋ ಬೈಡನ್​ಗೆ ಪ್ರಾಸ್ಟೇಟ್ ಕ್ಯಾನ್ಸರ್
ಜೋ ಬೈಡನ್ Image Credit source: PBS
ನಯನಾ ರಾಜೀವ್
|

Updated on: May 19, 2025 | 9:41 AM

Share

ವಾಷಿಂಗ್ಟನ್, ಮೇ 19: ಅಮೆರಿಕದ ಮಾಜಿ ಅಧ್ಯಕ್ಷ ಜೋ ಬೈಡನ್(Joe Biden) ಅವರು ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. 82 ವರ್ಷದ ಬೈಡನ್ ಅವರ ಮೂಳೆಗಳಿಗೆ ಕ್ಯಾನ್ಸರ್ ಹರಡಿದೆ. ಜೋ ಬೈಡನ್ ಅವರ ಕಚೇರಿ ಭಾನುವಾರ ಈ ಮಾಹಿತಿಯನ್ನು ನೀಡಿದೆ. ಜೋ ಬೈಡನ್ ಅವರ ಗಂಭೀರ ಆರೋಗ್ಯ ಸ್ಥಿತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದುಃಖ ವ್ಯಕ್ತಪಡಿಸಿದ್ದು, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಡೊನಾಲ್ಡ್ ಟ್ರಂಪ್ ಟ್ರೂತ್ ಸೋಷಿಯಲ್‌ನಲ್ಲಿ ಬರೆದಿದ್ದಾರೆ, ಬೈಡನ್‌ಗೆ ಪ್ರಾಸ್ಟೇಟ್ ಕ್ಯಾನ್ಸರ್ ಇರುವುದು ಪತ್ತೆಯಾದ ಸುದ್ದಿ ಕೇಳಿ ಮೆಲಾನಿಯಾ ಮತ್ತು ನನಗೆ ಇಬ್ಬರಿಗೂ ದುಃಖವಾಗಿದೆ. ಬೈಡನ್ ಬೇಗ ಗುಣಮುಖರಾಗಲಿ ಎಂದು ಆಶಿಸುತ್ತೇವೆ ಎಂದು ಹೇಳಿದ್ದಾರೆ.

ಡೊನಾಲ್ಡ್​ ಟ್ರಂಪ್ ಪೋಸ್ಟ್​

ಜೋ ಬೈಡನ್​ಗೆ ಈಗ 82 ವರ್ಷ, ಅವರಿಗೆ ಮೂತ್ರ ವಿಸರ್ಜನೆಯಲ್ಲಿ ಸಮಸ್ಯೆ ಎದುರಾಗಿತ್ತು, ಹಾಗಾಗಿ ಶುಕ್ರವಾರ ವೈದ್ಯರನ್ನು ಭೇಟಿಯಾಗಿದ್ದರು. ವೈದ್ಯರು ವೈದ್ಯಕೀಯ ತಪಾಸಣೆ ಮಾಡಿದ ಬಳಿಕ ರಿಪೋರ್ಟ್​ ನೋಡಿ ಎಲ್ಲರೂ ಆಘಾತಕ್ಕೊಳಗಾಗಿದ್ದರು.

ರಾಜಕೀಯದಲ್ಲಿ ದೀರ್ಘ ಅನುಭವ ಜೋ ಬೈಡೆನ್ 2021 ರಿಂದ 2025 ರವರೆಗೆ ಅಮೆರಿಕದ ಅಧ್ಯಕ್ಷರಾಗಿದ್ದರು. 2024 ರಲ್ಲಿ, ಅವರು ತಮ್ಮ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ಮತ್ತೆ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದರು. ಅವರು ಅಮೆರಿಕದ ಇತಿಹಾಸದಲ್ಲಿ ಅಧ್ಯಕ್ಷರಾದ ಅತ್ಯಂತ ಹಿರಿಯ ವ್ಯಕ್ತಿ. ಇದಕ್ಕೂ ಮುನ್ನ ಅವರು ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ ಮತ್ತು ಅಮೆರಿಕದ ರಾಜಕೀಯದಲ್ಲಿ ಹಲವಾರು ದಶಕಗಳ ಅನುಭವ ಹೊಂದಿದ್ದಾರೆ.

ಪ್ರಾಸ್ಟೇಟ್ ಕ್ಯಾನ್ಸರ್ ಎಂದರೇನು? ಕ್ಲೀವ್ಲ್ಯಾಂಡ್ ಕ್ಲಿನಿಕ್ ಪ್ರಕಾರ, ಚರ್ಮದ ಕ್ಯಾನ್ಸರ್ ನಂತರ ಪುರುಷರಲ್ಲಿ ಪ್ರಾಸ್ಟೇಟ್ ಕ್ಯಾನ್ಸರ್ ಎರಡನೇ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಆಗಿದೆ. ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (ಸಿಡಿಸಿ) ಪ್ರಕಾರ, 100 ರಲ್ಲಿ ಸುಮಾರು 13 ಪುರುಷರಿಗೆ ಪ್ರಾಸ್ಟೇಟ್​ ಕ್ಯಾನ್ಸರ್ ಅಪಾಯ ಹೆಚ್ಚು. ಈ ಕ್ಯಾನ್ಸರ್ ಪುರುಷರಲ್ಲಿ ಮೂತ್ರಕೋಶದ ಕೆಳಗೆ ಇರುವ ಪ್ರಾಸ್ಟೇಟ್ ಗ್ರಂಥಿಯಲ್ಲಿ ಕಂಡುಬರುತ್ತದೆ.

ಕೆಲವೊಮ್ಮೆ ಈ ಕ್ಯಾನ್ಸರ್ ನಿಧಾನವಾಗಿ ಬೆಳೆಯುತ್ತದೆ ಮತ್ತು ವರ್ಷಗಳ ನಂತರ ಅದರ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ಆದರೆ ಕೆಲವು ಸಂದರ್ಭಗಳಲ್ಲಿ ಇದು ವೇಗವಾಗಿ ಹರಡುತ್ತದೆ ಮತ್ತು ಮೂಳೆಗಳಂತಹ ದೇಹದ ಇತರ ಭಾಗಗಳನ್ನು ತಲುಪುತ್ತದೆ. ಬೈಡನ್ ಪ್ರಕರಣದಲ್ಲೂ ಕ್ಯಾನ್ಸರ್ ಮೂಳೆಗಳಿಗೆ ಹರಡಿದ್ದು, ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದೆ.

ಕಮಲಾ ಹ್ಯಾರಿಸ್ ಪೋಸ್ಟ್​

ಕಮಲಾ ಹ್ಯಾರಿಸ್ ಪೋಸ್ಟ್​ ಜೋ ಬೈಡನ್ ಒಬ್ಬ ಯೋಧ, ಅವರ ಜೀವನ ಹಾಗೂ ನಾಯಕತ್ವವನ್ನು ನೋಡಿ ಕಲುಯುವುದು ಸಾಕಷ್ಟಿದೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ