AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದನವಿರಾಮಕ್ಕೆ ನೀಡಿದ್ದ ಗಡುವು ಮುಗಿವ ಮೊದಲೇ ಇರಾನ್​ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ

ಇರಾನ್‌ನ ಪ್ರಮುಖ ಕಚ್ಚಾ ತೈಲ ರಫ್ತು ಕೇಂದ್ರವಾದ ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ ನಡೆಸಿದೆ. ಕದನವಿರಾಮಕ್ಕೆ ಒಪ್ಪಿಗೆ ಸೂಚಿಸಲು ಟ್ರಂಪ್ ಇರಾನ್​ಗೆ ಗಡುವು ನೀಡಿದ್ದರು. ಆ ಗಡುವು ಮುಗಿಯುವ ಕೆಲವೇ ಗಂಟೆಗಳ ಮೊದಲು ಅಮೆರಿಕ ಮತ್ತೆ ಇರಾನ್​ನ ಖಾರ್ಗ್ ದ್ವೀಪವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇರಾನ್‌ನ ಕಾರ್ಯತಂತ್ರದ ತೈಲ ಕೇಂದ್ರವಾದ ಖಾರ್ಗ್ ದ್ವೀಪದಲ್ಲಿ ಇಂದು ಯುಎಸ್ ಮಿಲಿಟರಿ ದಾಳಿ ನಡೆಸಿದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕದನವಿರಾಮಕ್ಕೆ ನೀಡಿದ್ದ ಗಡುವು ಮುಗಿವ ಮೊದಲೇ ಇರಾನ್​ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ
Kharg IslandImage Credit source: x
ಸುಷ್ಮಾ ಚಕ್ರೆ
|

Updated on:Apr 07, 2026 | 6:27 PM

Share

ಟೆಹ್ರಾನ್, ಏಪ್ರಿಲ್ 7: ಇರಾನ್‌ನ ಪ್ರಮುಖ ಕಚ್ಚಾ ತೈಲ ರಫ್ತು ಕೇಂದ್ರವಾದ ಖಾರ್ಗ್ ದ್ವೀಪದ ಮೇಲೆ ಅಮೆರಿಕ ಇಂದು ಅನೇಕ ದಾಳಿಗಳನ್ನು ನಡೆಸಿದೆ. ಈ ದ್ವೀಪ ಇರಾನ್ (Iran War) ದೇಶದ ತೈಲ ರಫ್ತಿನ ಬಹುಭಾಗವನ್ನು ನಿರ್ವಹಿಸುತ್ತದೆ. ಹಾರ್ಮುಜ್ ಜಲಸಂಧಿಯನ್ನು (Strait of Hormuz) ತೆರೆಯಲು ಮತ್ತು ಶಾಂತಿ ಮಾತುಕತೆಗೆ ಒಪ್ಪಿಗೆ ಸೂಚಿಸಲು ಅಮೆರಿಕ ಇರಾನ್​ಗೆ 10 ದಿನ ಗಡುವು ನೀಡಿತ್ತು. ಆ ಗಡುವು ಮುಗಿಯಲು ಕೆಲವೇ ಗಂಟೆಗಳು ಬಾಕಿ ಇವೆ. ಅಷ್ಟರೊಳಗೆ ಅಮೆರಿಕ ಮತ್ತೆ ಇರಾನ್ ಮೇಲೆ ದಾಳಿ ನಡೆಸಿದೆ.

ಇರಾನ್ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿಗದಿಪಡಿಸಿದ್ದ ಗಡುವು ಇಂದು ರಾತ್ರಿ 8 ಗಂಟೆಗೆ (ಭಾರತೀಯ ಕಾಲಮಾನದ ಪ್ರಕಾರ ಬುಧವಾರ 5.30ಕ್ಕೆ) ಕೊನೆಗೊಳ್ಳಲಿದೆ. ಆ ಗಡುವು ಮುಗಿಯುವ ಮೊದಲೇ ಅಮೆರಿಕ ಇರಾನ್ ಮೇಲೆ ಬೃಹತ್ ದಾಳಿ ನಡೆಸಿದೆ.

ಇದನ್ನೂ ಓದಿ: ಇರಾನ್ ಮುಗಿಸಲು ಒಂದೇ ಒಂದು ರಾತ್ರಿ ಸಾಕು, ಗಡುವು ಮುಗಿಯುವ ಮುನ್ನವೇ ಇರಾನ್​ಗೆ ಟ್ರಂಪ್ ಬೆದರಿಕೆ

“ಸ್ವಲ್ಪ ಸಮಯದ ಹಿಂದೆ ಇರಾನ್‌ನಾದ್ಯಂತ ಹಲವಾರು ಪ್ರದೇಶಗಳಲ್ಲಿ ಡಜನ್​ಗಟ್ಟಲೆ ಮೂಲಸೌಕರ್ಯ ಸ್ಥಳಗಳನ್ನು ಗುರಿಯಾಗಿಸಿಕೊಂಡು ಐಡಿಎಫ್ ವ್ಯಾಪಕ ಪ್ರಮಾಣದ ದಾಳಿಗಳನ್ನು ಪೂರ್ಣಗೊಳಿಸಿದೆ” ಎಂದು ಇಸ್ರೇಲ್​ನ ಮಿಲಿಟರಿ ಹೇಳಿಕೆಯಲ್ಲಿ ತಿಳಿಸಿದೆ.

ಮಾರ್ಚ್ ಮಧ್ಯದಲ್ಲಿ ಅಮೆರಿಕದ ಪಡೆಗಳು ಖಾರ್ಗ್ ದ್ವೀಪದ ಮೇಲೆಯೂ ದಾಳಿಗಳನ್ನು ನಡೆಸಿದ್ದವು. ಈ ದಾಳಿಗಳು ಆ ದ್ವೀಪದಲ್ಲಿನ ಮಿಲಿಟರಿ ನೆಲೆಗಳನ್ನು ಸಂಪೂರ್ಣವಾಗಿ ನಾಶಮಾಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಇದೀಗ ಮತ್ತೆ ಅದೇ ದ್ವೀಪದ ಮೇಲೆ ದಾಳಿ ನಡೆಸಲಾಗಿದೆ.

ಇದನ್ನೂ ಓದಿ: ಇಂದು ಯಾರೂ ರೈಲಿನಲ್ಲಿ ಓಡಾಡ್ಬೇಡಿ, ಇರಾನ್ ಜನರಿಗೆ ಇಸ್ರೇಲ್ ಎಚ್ಚರಿಕೆ, ಹೊಸ ಅಪಾಯದ ಮುನ್ಸೂಚನೆಯೇ?

ದಾಳಿಗೆ ಒಳಗಾದ ಖಾರ್ಗ್ ದ್ವೀಪವು ಇರಾನ್‌ನ ಕರಾವಳಿಯಿಂದ ಸುಮಾರು 26 ಕಿ.ಮೀ ದೂರದಲ್ಲಿದೆ. ಇದು ಹಾರ್ಮುಜ್ ಜಲಸಂಧಿಯಿಂದ ಸುಮಾರು 483 ಕಿ.ಮೀ ದೂರದಲ್ಲಿದೆ. ಇದರ ಆಳವಾದ ನೀರು ಇರಾನ್‌ನ ಮುಖ್ಯ ಭೂಭಾಗದ ಕರಾವಳಿಗಿಂತ ಭಿನ್ನವಾಗಿ ದೊಡ್ಡ ಟ್ಯಾಂಕರ್‌ಗಳು ಡಾಕ್ ಮಾಡಲು ಅನುವು ಮಾಡಿಕೊಡುತ್ತದೆ. ಈ ದ್ವೀಪವು ಇರಾನ್‌ನ ಸುಮಾರು ಶೇ. 90ರಷ್ಟು ತೈಲ ರಫ್ತನ್ನು ನಿರ್ವಹಿಸುತ್ತದೆ. ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆಯಲ್ಲಿ ಇರಾನ್ ಮೂರನೇ ಅತಿದೊಡ್ಡ ಉತ್ಪಾದಕ ರಾಷ್ಟ್ರವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 6:17 pm, Tue, 7 April 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು