ಅಮೆರಿಕ: ಮನೆಯಲ್ಲಿ ಕೇರಳ ಮೂಲದ ದಂಪತಿ, ಅವಳಿ ಮಕ್ಕಳು ಶವವಾಗಿ ಪತ್ತೆ

ಕೇರಳ ಮೂಲದ ದಂಪತಿ ಹಾಗೂ ಅವರ 4 ವರ್ಷದ ಅವಳಿ ಮಕ್ಕಳು ಅಮೆರಿಕದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಂಬಂಧಿಕರು ಕರೆ ಮಾಡಿದಾಗ ರಿಸೀವ್ ಮಾಡದ ಕಾರಣ ಅವರು ಮನೆಗೆ ಬಂದಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಮನೆಗೆ ಬಂದು ತಪಾಸಣೆ ನಡೆಸಿದಾಗ ದಂಪತಿ ಶವ ಬಾತ್​ ರೂಮ್​ನಲ್ಲಿ ಕಂಡುಬಂದಿದೆ. ಇಬ್ಬರು ಮಕ್ಕಳು ಕೋಣೆಯಲ್ಲಿ ಶವವಾಗಿದ್ದರು. ದಂಪತಿ ಮೈಮೇಲೆ ಗುಂಡಿನ ಗುರುತುಗಳು ಕಂಡುಬಂದಿದೆ.

ಅಮೆರಿಕ: ಮನೆಯಲ್ಲಿ ಕೇರಳ ಮೂಲದ ದಂಪತಿ, ಅವಳಿ ಮಕ್ಕಳು ಶವವಾಗಿ ಪತ್ತೆ
ದಂಪತಿImage Credit source: NDTV
Follow us
ನಯನಾ ರಾಜೀವ್
|

Updated on: Feb 14, 2024 | 2:22 PM

ಅಮೆರಿಕದಲ್ಲಿ ಕೇರಳ ಮೂಲದ ದಂಪತಿ ಹಾಗೂ ಅವರ  ಅವಳಿ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ. ಆನಂದ್ ಸುಜಿತ್ ಹೆನ್ರಿ ಹಾಗೂ ಪತ್ನಿ ಆಲಿಸ್ ಪ್ರಿಯಾಂಕಾ ಮತ್ತು 4 ವರ್ಷದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಸಂಬಂಧಿಕರು ಕರೆ ಮಾಡಿದಾಗ ರಿಸೀವ್ ಮಾಡದ ಕಾರಣ ಅವರು ಮನೆಗೆ ಬಂದಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಗೆ ಬಂದು ತಪಾಸಣೆ ನಡೆಸಿದಾಗ ದಂಪತಿ ಶವ ಬಾತ್​ ರೂಮ್​ನಲ್ಲಿ ಕಂಡುಬಂದಿದೆ. ಇಬ್ಬರು ಮಕ್ಕಳು ಕೋಣೆಯಲ್ಲಿ ಶವವಾಗಿದ್ದರು.

ದಂಪತಿ ಮೈಮೇಲೆ ಗುಂಡಿನ ಗುರುತುಗಳಿದ್ದವು, ಮನೆಯಲ್ಲಿ ಯಾರೋ ಅಪರಿಚಿತರು ಬಂದಿರುವ ಯಾವುದೇ ಲಕ್ಷಣಗಳಿರಲಿಲ್ಲ. ಆದರೆ ಕಿಟಕಿ ತೆರೆದಿತ್ತು ಅಲ್ಲಿಂದ ಯಾರಾದರೂ ಮನೆಯ ಒಳಗೆ ಬಂದಿದ್ದರೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ಬಾತ್​ರೂಮ್​ನಿಂದ 9 ಎಂಎಂ ಪಿಸ್ತೂಲ್ ಮತ್ತು ಲೋಡ್​ ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರಂಭದಲ್ಲಿ ಇದು ಆತ್ಮಹತ್ಯೆ ಎಂದೆನಿಸದರೂ ಹತ್ಯೆ ಅನುಮಾನವನ್ನು ಕೂಡ ತಳ್ಳಿ ಹಾಕುವಂತಿಲ್ಲ. ಕೇರಳ ಮೂಲದ ಕುಟುಂಬ ಕಳೆದ 9 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿತ್ತು.

ಮತ್ತಷ್ಟು ಓದಿ: ವಿದ್ಯುತ್​ ತಂತಿ ತುಳಿದು ತಾಯಿ-ಮಗು ಸಾವು: ಜನರ ಕಣ್ಣಿಗೆ ಮಂಕು ಬೂದಿ ಎರಚಿತೆ ಬೆಸ್ಕಾಂ? ಲೋಕಾಯುಕ್ತ ತನಿಖೆಯಲ್ಲಿ ಸತ್ಯಾಂಶ ಬಯಲು

ಸಾಫ್ಟ್‌ವೇರ್ ಎಂಜಿನಿಯರ್ ಆನಂದ್ ಮತ್ತು ಹಿರಿಯ ವಿಶ್ಲೇಷಕ ಆಲಿಸ್ ಎರಡು ವರ್ಷಗಳ ಹಿಂದೆ ನ್ಯೂಜೆರ್ಸಿಯಿಂದ ಸ್ಯಾನ್ ಮ್ಯಾಟಿಯೊ ಕೌಂಟಿಗೆ ಸ್ಥಳಾಂತರಗೊಂಡಿದ್ದರು. ನೆರೆಹೊರೆಯವರು ಹಾಗೂ ಸಹೋದ್ಯೋಗಿಗಳು ಇವರು ನಮಗೆ ಉತ್ತಮ ಸ್ನೇಹಿತರಾಗಿದ್ದರು, ಒಳ್ಳೆಯವರು ಎಂದೇ ಹೇಳಿದ್ದಾರೆ.

ನ್ಯಾಯಾಲಯದ ದಾಖಲೆ ಪ್ರಕಾರ ಆನಂದ್ ಡಿಸೆಂಬರ್ 2016ರಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಬಳಿಕ ಅದಲ್ಲಿಗೇ ನಿಂತಿತ್ತು. ಸ್ಯಾನ್ ಮ್ಯಾಟಿಯೊ ಕೌಂಟಿಯ ಕ್ರಿಮಿನಲ್ ಇನ್ವೆಸ್ಟಿಗೇಷನ್ ಬ್ಯೂರೋ (CIB) ಪ್ರಕರಣವನ್ನು ಕೈಗೆತ್ತಿಕೊಂಡಿದೆ. ಮೃತದೇಹಗಳನ್ನು ಸ್ಯಾನ್ ಮ್ಯಾಟಿಯೊ ಕೌಂಟಿ ಕರೋನರ್ ಅವರ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇತ್ತೀಚೆಗೆ ನಡೆದ ಘಟನೆಯೊಂದರಲ್ಲಿ ಭಾರತ ಮೂಲದ ದಂಪತಿ ಹಾಗೂ ಅವರ ಮಗಳು ಮನೆಯಲ್ಲೇ ಸಾವನ್ನಪ್ಪಿದ್ದರು. ಕಳೆದ ತಿಂಗಳಲ್ಲಿ, ಕನಿಷ್ಠ ಏಳು ಭಾರತ ಮೂಲದ ಜನರು ಅಮೆರಿಕದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ