AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ಅಥವಾ ಚೀನಾ, ಅಮೆರಿಕ-ಇರಾನ್ ಕದನ ವಿರಾಮಕ್ಕೆ ಒಪ್ಪಿಕೊಳ್ಳುವಂತೆ ಮಾಡಿದ್ಯಾರು?

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಒಪ್ಪಿವೆ, ಹಾರ್ಮುಜ್ ಜಲಸಂಧಿ ತೆರೆಯಲಾಗಿದೆ. ಡೊನಾಲ್ಡ್ ಟ್ರಂಪ್ ಘೋಷಿಸಿದಂತೆ, ಚೀನಾ ಮತ್ತು ಪಾಕಿಸ್ತಾನದ ಮಧ್ಯಸ್ಥಿಕೆ ಈ ಒಪ್ಪಂದದಲ್ಲಿ ಪ್ರಮುಖ ಪಾತ್ರ ವಹಿಸಿದೆ. ಚೀನಾ ಇತರೆ ದೇಶಗಳ ಮೂಲಕ ಇರಾನ್ ಮೇಲೆ ಪ್ರಭಾವ ಬೀರಿತು, ಆದರೆ ಟ್ರಂಪ್ ಪಾಕಿಸ್ತಾನದ ಮಾತುಕತೆ ನಿರ್ಣಾಯಕವೆಂದು ಒಪ್ಪಿಕೊಂಡರು. ಯುದ್ಧದ ಭೀತಿಯನ್ನು ಶಮನಗೊಳಿಸಲು ಈ ಪ್ರಮುಖ ರಾಜತಾಂತ್ರಿಕ ಪ್ರಯತ್ನಗಳು ನೆರವಾಗಿವೆ.

ಪಾಕಿಸ್ತಾನ ಅಥವಾ ಚೀನಾ, ಅಮೆರಿಕ-ಇರಾನ್ ಕದನ ವಿರಾಮಕ್ಕೆ ಒಪ್ಪಿಕೊಳ್ಳುವಂತೆ ಮಾಡಿದ್ಯಾರು?
ಪಾಕಿಸ್ತಾನ-ಚೀನಾ ಫ್ಲ್ಯಾಗ್ Image Credit source: Vecteezy
ನಯನಾ ರಾಜೀವ್
|

Updated on: Apr 08, 2026 | 9:44 AM

Share

ಟೆಹ್ರಾನ್, ಏಪ್ರಿಲ್ 08: ಅಮೆರಿಕ-ಇರಾನ್(Iran) ಅಂತೂ ಕದನವಿರಾಮಕ್ಕೆ ಒಪ್ಪಿಗೆ ನೀಡಿವೆ. ಇದರ ಪರಿಣಾಮವಾಗಿ ಹಾರ್ಮುಜ್ ಜಲಸಂಧಿಯನ್ನೂ ತೆರೆಯಲಾಗಿದೆ. ದ್ವಿಪಕ್ಷೀಯ ಕದನ ವಿರಾಮದಿಂದಾಗಿ ಇರಾನ್ ಮೇಲಿನ ಸಂಭಾವ್ಯ ದಾಳಿಗಳನ್ನು ಎರಡು ವಾರಗಳ ಕಾಲ ತಡೆಹಿಡಿಯಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಟ್ರಂಪ್ ಅವರ ನಿರ್ಧಾರಕ್ಕೆ ಅನುಗುಣವಾಗಿ ಅಮೆರಿಕ ಸೇನೆಯು ಇರಾನ್ ವಿರುದ್ಧದ ಎಲ್ಲಾ ಆಕ್ರಮಣಕಾರಿ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿದೆ.

ಚೀನಾ ಮತ್ತು ಪಾಕಿಸ್ತಾನ ಜಂಟಿಯಾಗಿ ಅಮೆರಿಕದೊಂದಿಗೆ ಕದನ ವಿರಾಮಕ್ಕೆ ದಾರಿ ಕಂಡುಕೊಳ್ಳಲು ಇರಾನ್‌ಗೆ ಪ್ರೋತ್ಸಾಹ ನೀಡಿವೆ. ಮಾತುಕತೆ ನಡೆಯುತ್ತಿರುವಾಗ ಚೀನಾದ ಅಧಿಕಾರಿಗಳು ಇರಾನಿನ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದರು ಎಂದು ಮೂಲಗಳು ಸೂಚಿಸುತ್ತವೆ. ಪಾಕಿಸ್ತಾನ, ಟರ್ಕಿ ಮತ್ತು ಈಜಿಪ್ಟ್ ಸೇರಿದಂತೆ ಮಧ್ಯವರ್ತಿಗಳ ಮೂಲಕ ಚೀನಾ ಕೂಡ ಪ್ರಭಾವ ಬೀರಲು ಪ್ರಯತ್ನಿಸಿತು.

ಚೀನಾದ ವಿದೇಶಾಂಗ ಸಚಿವಾಲಯವು ಈ ವಿಷಯದ ಬಗ್ಗೆ ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಮಪ್ ಪಾಕಿಸ್ತಾನದಿಂದಲೇ ನಾವು ಕದನ ವಿರಾಮಕ್ಕೆ ಒಪ್ಪಿಗೆ ನೀಡಿರುವುದಾಗಿ ಹೇಳಿದ್ದಾರೆ. ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಮತ್ತು ಪಾಕಿಸ್ತಾನಿ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರೊಂದಿಗೆ ಮಾತುಕತೆ ನಡೆಸಿದ ನಂತರವೇ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ.

ಮತ್ತಷ್ಟು ಓದಿ: ಇನ್ನೆರಡು ದಿನ ಹೊರಗೆ ಬರಬೇಡಿ; ಇರಾನ್​ನಲ್ಲಿರುವ ಭಾರತೀಯರಿಗೆ ತುರ್ತು ಸೂಚನೆ ನೀಡಿದ ಭಾರತ

ಅಸೋಸಿಯೇಟೆಡ್ ಪ್ರೆಸ್ ಪ್ರಕಾರ, ಪಾಕಿಸ್ತಾನ, ಟರ್ಕಿ ಮತ್ತು ಈಜಿಪ್ಟ್ ಸೇರಿದಂತೆ ಮಧ್ಯವರ್ತಿಗಳ ಮೂಲಕ ಟೆಹ್ರಾನ್ ಅನ್ನು ಕದನ ವಿರಾಮದ ಹಾದಿಯತ್ತ ತಳ್ಳುವ ಮೂಲಕ ಚೀನಾ ಶಾಂತ ಆದರೆ ಪ್ರಭಾವಶಾಲಿ ಪಾತ್ರವನ್ನು ವಹಿಸಿದೆ. ಒಟ್ಟಾರೆಯಾಗಿ ತೆಗೆದುಕೊಂಡರೆ, ಕದನ ವಿರಾಮದ ಒತ್ತಡವು ಒಬ್ಬ ವ್ಯಕ್ತಿಯ ಪರಿಣಾಮವಾಗಿರಲಿಲ್ಲ, ಪಾಕಿಸ್ತಾನದ ಕೊನೆಯ ನಿಮಿಷದ ಮಧ್ಯಸ್ಥಿಕೆ, ಚೀನಾದ ಶಾಂತ ಒತ್ತಡದ ಪರಿಣಾಮ ಈಗೊಂದು ನಿರ್ಧಾರಕ್ಕೆ ಬರಲಾಗಿದೆ.

ಚೀನಾ ತನ್ನ ಒಳಗೊಳ್ಳುವಿಕೆಯ ಬಗ್ಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸದಿದ್ದರೂ, ಇರಾನ್ ಮೇಲೆ ತನ್ನ ಪ್ರಭಾವವನ್ನು ಬಳಸಿಕೊಳ್ಳಲು ಬೀಜಿಂಗ್ ಪಾಕಿಸ್ತಾನ, ಟರ್ಕಿ ಮತ್ತು ಈಜಿಪ್ಟ್ ಸೇರಿದಂತೆ ಮಧ್ಯವರ್ತಿಗಳ ಮೂಲಕ ಕೆಲಸ ಮಾಡುತ್ತಿದೆ ಎಂದು ಅಧಿಕಾರಿಯೊಬ್ಬರು ಬಹಿರಂಗಪಡಿಸಿದರು.

ಇಲ್ಲಿಯವರೆಗೆ, ಚೀನಾದ ವಿದೇಶಾಂಗ ಸಚಿವಾಲಯವು ಬೀಜಿಂಗ್ ಪಾತ್ರದ ಕುರಿತು ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. ಆದರೆ ವಾಷಿಂಗ್ಟನ್‌ನಲ್ಲಿರುವ ಚೀನೀ ರಾಯಭಾರ ಕಚೇರಿಯು, ಯುದ್ಧ ಪ್ರಾರಂಭವಾದಾಗಿನಿಂದ ಬೀಜಿಂಗ್ ಕೆಲಸ ಮಾಡುತ್ತಿದೆ ಎಂದು ಹೇಳಿದೆ.

ದೇಶದ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲಿನ ದಾಳಿಯ ಬೆದರಿಕೆಯಿಂದ ಟ್ರಂಪ್ ಹಿಂದೆ ಸರಿದಿದ್ದಾರೆ. ಮೂವರು ಇರಾನಿನ ಅಧಿಕಾರಿಗಳ ಪ್ರಕಾರ, ಇರಾನ್‌ನ ಪ್ರಮುಖ ಮಿತ್ರ ರಾಷ್ಟ್ರವಾದ ಚೀನಾದ ಕೊನೆಯ ಕ್ಷಣದ ಹಸ್ತಕ್ಷೇಪದ ನಂತರ ಇರಾನ್ ಪಾಕಿಸ್ತಾನದ ಎರಡು ವಾರಗಳ ಕದನ ವಿರಾಮ ಪ್ರಸ್ತಾಪವನ್ನು ಒಪ್ಪಿಕೊಂಡಿತು ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!