AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಮೇಲೆ ಭೀಕರ ದಾಳಿ ನಿರ್ಧಾರದಿಂದ ಹಿಂದೆ ಸರಿದ ಟ್ರಂಪ್: ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ 2 ವಾರಗಳ ಕದನ ವಿರಾಮ ಘೋಷಣೆ!

ಕೊನೆಗೂ ಜಗತ್ತಿಗೆ ತಾತ್ಕಾಲಿಕ ಸಿಹಿ ಸುದ್ದಿ ಸಿಕ್ಕಿದೆ! ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಎರಡು ವಾರಗಳ ಕದನ ವಿರಾಮ ಘೋಷಣೆಯಾಗಿದೆ. ಇರಾನ್ ಮೇಲಿನ ಬಾಂಬ್ ದಾಳಿಯ ನಿರ್ಧಾರದಿಂದ ಡೊನಾಲ್ಡ್ ಟ್ರಂಪ್ ಹಿಂದೆ ಸರಿದಿದ್ದು, ಹಾರ್ಮುಜ್ ಜಲಸಂಧಿಯನ್ನು ತಕ್ಷಣವೇ ತೆರೆಯಲು ಇರಾನ್ ಸಮ್ಮತಿಸಿದೆ.

ಇರಾನ್ ಮೇಲೆ ಭೀಕರ ದಾಳಿ ನಿರ್ಧಾರದಿಂದ ಹಿಂದೆ ಸರಿದ ಟ್ರಂಪ್: ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ 2 ವಾರಗಳ ಕದನ ವಿರಾಮ ಘೋಷಣೆ!
ಅಮೆರಿಕ ಇರಾನ್ ಕದನ ವಿರಾಮ (ಸಾಂದರ್ಭಿಕ ಚಿತ್ರ)Image Credit source: Google
ಗಣಪತಿ ಶರ್ಮಾ
|

Updated on:Apr 08, 2026 | 6:51 AM

Share

ವಾಷಿಂಗ್ಟನ್/ಟೆಹ್ರಾನ್, ಏಪ್ರಿಲ್ 8: ಇರಾನ್ (Iran) ಮೇಲೆ ವಿನಾಶಕಾರಿ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೀಡಿದ್ದ ಗಡುವು ಮುಗಿಯಲು ಕೇವಲ ಎರಡು ಗಂಟೆಗಳಿರುವಾಗ ಬಹು ದೊಡ್ಡ ರಾಜತಾಂತ್ರಿಕ ಬೆಳವಣಿಗೆ ನಡೆದಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥರ ಮನವಿಯ ಮೇರೆಗೆ ಟ್ರಂಪ್ ತಮ್ಮ ಬಾಂಬ್ ದಾಳಿಯ ನಿರ್ಧಾರವನ್ನು ಸ್ಥಗಿತಗೊಳಿಸಿದ್ದು, ಎರಡು ವಾರಗಳ ಕದನ ವಿರಾಮಕ್ಕೆ (US Iran Ceasefire) ಸಮ್ಮತಿಸಿದ್ದಾರೆ.

ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಸಮ್ಮತಿ

ಕಳೆದ ಐದು ವಾರಗಳಿಂದ ನಡೆಯುತ್ತಿದ್ದ ಯುದ್ಧವು ಜಗತ್ತಿನ ತೈಲ ಪೂರೈಕೆಯ ನಾಡಿಮಿಡಿತವಾದ ‘ಹಾರ್ಮುಜ್ ಜಲಸಂಧಿ’ಯನ್ನು ಬಂದ್ ಮಾಡಿತ್ತು. ಈಗ ಇರಾನ್ ಈ ಜಲಸಂಧಿಯನ್ನು ತಕ್ಷಣವೇ ಮತ್ತು ಸುರಕ್ಷಿತವಾಗಿ ತೆರೆಯಲು ಒಪ್ಪಿಕೊಂಡಿದೆ. ಟ್ರಂಪ್ ಈ ಹಿಂದೆ ಇರಾನ್‌ನ ನಾಗರಿಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುವುದಾಗಿ ಎಚ್ಚರಿಸಿದ್ದರು, ಇದು ಯುದ್ಧಾಪರಾಧವಾಗಬಹುದು ಎಂದು ವಿಶ್ವಸಂಸ್ಥೆ ಮತ್ತು ಪೋಪ್ ಕೂಡ ಆತಂಕ ವ್ಯಕ್ತಪಡಿಸಿದ್ದರು. ಆದರೆ ಈಗ ಇರಾನ್ ನೀಡಿರುವ 10 ಅಂಶಗಳ ಪ್ರಸ್ತಾವನೆಯ ಆಧಾರದ ಮೇಲೆ ಶಾಂತಿ ಮಾತುಕತೆ ನಡೆಸಲು ಅಮೆರಿಕ ಮುಂದಾಗಿದೆ. ಇಸ್ರೇಲ್ ಕೂಡ ಈ ಕದನ ವಿರಾಮಕ್ಕೆ ಬೆಂಬಲ ಸೂಚಿಸಿದೆ ಎಂದು ವರದಿಯಾಗಿದೆ.

ಇರಾನ್​​ನ 10 ಅಂಶಗಳ ಪ್ರಸ್ತಾವನೆ ಏನು?

  1. ಆಕ್ರಮಣಶೀಲತೆ ಮಾಡದಿರುವ ವಿಚಶರದಲ್ಲಿ ಬದ್ಧತೆ
  2. ಹೊರ್ಮುಝ್​ ಮೇಲೆ ಇರಾನ್​​ ನಿಯಂತ್ರಣ ಮುಂದುವರಿಕೆ
  3. ಯುರೇನಿಯಂ ಪುಷ್ಟೀಕರಣದ ಸ್ವೀಕಾರ
  4. ಎಲ್ಲಾ ಪ್ರಾಥಮಿಕ & ದ್ವಿತೀಯ ನಿರ್ಬಂಧ ತೆರವು
  5. UN ಭದ್ರತಾ ಮಂಡಳಿ & IEAE ಆಡಳಿತ ಮಂಡಳಿಯ ನಿರ್ಣಯ ರದ್ದು
  6. ಜಲಸಂಧಿ ಆದಾಯ ಮೂಲಸೌಕರ್ಯಕ್ಕೆ ಪುನರ್​ನಿರ್ಮಾಣಕ್ಕೆ ಬಳಕೆ
  7. ಇರಾನ್‌ಗೆ ಪರಿಹಾರ ಪಾವತಿಗಳು
  8. ಅಮೆರಿಕ ಯುದ್ಧ ಪಡೆಗಳನ್ನ ಹಿಂತೆಗೆದುಕೊಳ್ಳುವುದು
  9. ಎಲ್ಲಾ ರಂಗಗಳಲ್ಲಿ ಯುದ್ಧವನ್ನ ನಿಲ್ಲಿಸುವುದು
  10. ಲೆಬನಾನ್​ ಮೇಲೆ ಇಸ್ರೇಲ್​ ದಾಳಿ ನಿಲ್ಲಿಸಬೇಕು

ಡೊನಾಲ್ಡ್ ಟ್ರಂಪ್ ಅವರ ಅಧಿಕೃತ ಹೇಳಿಕೆ ಇಲ್ಲಿದೆ

‘ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರೊಂದಿಗೆ ನಡೆಸಿದ ಮಾತುಕತೆಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಇಂದು ರಾತ್ರಿ ಇರಾನ್ ಮೇಲೆ ನಡೆಸಬೇಕಿದ್ದ ವಿನಾಶಕಾರಿ ದಾಳಿಯನ್ನು ತಡೆಹಿಡಿಯುವಂತೆ ಅವರು ವಿನಂತಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಮತ್ತು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ, ತಕ್ಷಣವೇ ಮತ್ತು ಸುರಕ್ಷಿತವಾಗಿ ತೆರೆಯಲು ಒಪ್ಪಿಕೊಂಡಿರುವುದಕ್ಕೆ ಪ್ರತಿಯಾಗಿ, ನಾನು ಇರಾನ್ ಮೇಲಿನ ಬಾಂಬ್ ದಾಳಿ ಮತ್ತು ದಾಳಿಯನ್ನು ಎರಡು ವಾರಗಳ ಅವಧಿಗೆ ಅಮಾನತುಗೊಳಿಸಲು ಒಪ್ಪುತ್ತೇನೆ’ ಎಂದು ಟ್ರಂಪ್ ತಿಳಿಸಿದ್ದಾರೆ.

ಇದನ್ನೂ ಓದಿ: ಇಂದು ರಾತ್ರಿ ಇಡೀ ದೇಶವೇ ನಾಶವಾಗುತ್ತದೆ; ಗಡುವು ಸಮೀಪಿಸುತ್ತಿದ್ದಂತೆ ಇರಾನ್​ಗೆ ಟ್ರಂಪ್ ಬೆದರಿಕೆ

ಇದು ಉಭಯಪಕ್ಷೀಯ ಕದನ ವಿರಾಮವಾಗಿರುತ್ತದೆ! ನಾವು ಈಗಾಗಲೇ ಎಲ್ಲಾ ಮಿಲಿಟರಿ ಉದ್ದೇಶಗಳನ್ನು ಪೂರೈಸಿದ್ದೇವೆ ಮತ್ತು ಇರಾನ್‌ನೊಂದಿಗೆ ದೀರ್ಘಕಾಲೀನ ಶಾಂತಿ ಹಾಗೂ ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ನಿರ್ಣಾಯಕ ಒಪ್ಪಂದಕ್ಕೆ ಬಹಳ ಹತ್ತಿರದಲ್ಲಿದ್ದೇವೆ. ನಾವು ಇರಾನ್‌ನಿಂದ 10 ಅಂಶಗಳ ಪ್ರಸ್ತಾವನೆಯನ್ನು ಸ್ವೀಕರಿಸಿದ್ದೇವೆ ಮತ್ತು ಇದು ಮಾತುಕತೆಗೆ ಪೂರಕ ಆಧಾರವಾಗಿದೆ ಎಂದು ನಂಬುತ್ತೇವೆ. ಎರಡು ವಾರಗಳ ಕಾಲಾವಧಿಯು ಒಪ್ಪಂದವನ್ನು ಅಂತಿಮಗೊಳಿಸಲು ಮತ್ತು ಪೂರ್ಣಗೊಳಿಸಲು ಅನುವು ಮಾಡಿಕೊಡುತ್ತದೆ. ಅಮೆರಿಕದ ಪರವಾಗಿ ಅಧ್ಯಕ್ಷನಾಗಿ ಮತ್ತು ಮಧ್ಯಪ್ರಾಚ್ಯದ ದೇಶಗಳನ್ನು ಪ್ರತಿನಿಧಿಸುತ್ತಾ, ಈ ದೀರ್ಘಕಾಲದ ಸಮಸ್ಯೆಯು ಪರಿಹಾರದ ಹತ್ತಿರಕ್ಕೆ ಬಂದಿರುವುದು ಗೌರವದ ವಿಷಯವಾಗಿದೆ. ಧನ್ಯವಾದಗಳು ಎಂದು ಟ್ರಂಪ್ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 6:27 am, Wed, 8 April 26

Follow Us
ಇಲ್ಲಿ ನಮ್ಮ ಮಾತಿಗೆ ಗೌರವವೇ ನೀಡುತ್ತಿಲ್ಲ ಅಧಿಕಾರಿಗಳು
ಇಲ್ಲಿ ನಮ್ಮ ಮಾತಿಗೆ ಗೌರವವೇ ನೀಡುತ್ತಿಲ್ಲ ಅಧಿಕಾರಿಗಳು
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು